Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ನಿಲ್ಲದ ವರುಣನ ಆರ್ಭಟ: ಹೊರ ಪ್ರದೇಶಗಳ...

ನಿಲ್ಲದ ವರುಣನ ಆರ್ಭಟ: ಹೊರ ಪ್ರದೇಶಗಳ ಸಂಪರ್ಕ ಕಳೆದು ದ್ವೀಪದಂತಾದ ಕೊಡಗು

ವಾರ್ತಾಭಾರತಿವಾರ್ತಾಭಾರತಿ17 Aug 2018 6:28 PM IST
share
ನಿಲ್ಲದ ವರುಣನ ಆರ್ಭಟ: ಹೊರ ಪ್ರದೇಶಗಳ ಸಂಪರ್ಕ ಕಳೆದು ದ್ವೀಪದಂತಾದ ಕೊಡಗು

ಮಡಿಕೇರಿ, ಆ.17: ವರುಣನ ಆರ್ಭಟಕ್ಕೆ ತುತ್ತಾಗಿರುವ ಕೊಡಗು ಜಿಲ್ಲೆ ಹೊರ ಪ್ರದೇಶಗಳ ಸಂಪರ್ಕವನ್ನು ಕಳೆದುಕೊಂಡು ಅಕ್ಷರಶಃ ದ್ವೀಪದಂತಾಗಿದೆ. ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಉಂಟಾದ ಭಾರೀ ಭೂ ಕುಸಿತದಿಂದ ದಕ್ಷಿಣ ಕನ್ನಡ ಜಿಲ್ಲೆಯ ಸಂಪರ್ಕ ಕಳೆದುಕೊಂಡಿದ್ದ ಕೊಡಗಿನ ಜಿಲ್ಲಾ ಕೇಂದ್ರ ಮಡಿಕೇರಿ ಶುಕ್ರವಾರ ಜಿಲ್ಲೆಯ ಇತರ ಭಾಗಗಳ ಸಂಪರ್ಕವನ್ನೂ ಕಳೆದುಕೊಂಡಿದೆ.

ಗುರುವಾರ ಸಂಜೆ ಮಡಿಕೇರಿ -ತಾಳತ್ ಮನೆ ನಡುವೆ ಬರೆ ಕುಸಿದಿದ್ದರೆ, ಮಡಿಕೇರಿ -ವೀರಾಜಪೇಟೆ ರಸ್ತೆಗೆ ಬೆಟ್ಟ ಕುಸಿದ ಪರಿಣಾಮ ಆ ಮಾರ್ಗದಲ್ಲೂ ವಾಹನ ಸಂಚಾರ ಸ್ಥಗಿತಗೊಂಡಿದೆ. ಮಡಿಕೇರಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಕುಶಾಲನಗರದ ತಾವರೆಕೆರೆ ಬಳಿ ರಸ್ತೆಯಲ್ಲಿ ಸುಮಾರು ನಾಲ್ಕು ಅಡಿಗಳಷ್ಟು ನೀರು ನಿಂತಿದ್ದು, ಪರಿಣಾಮವಾಗಿ ಈ ಮಾರ್ಗದಲ್ಲಿ ವಾಹನ ಸಂಚಾರ ಸ್ಥಗಿತಗೊಂಡಿದೆ. ಈ ರಸ್ತೆಯ ಬೋಯಿಕೇರಿಯಿಂದ ಮಡಿಕೇರಿ ನಡುವೆ ಸುಮಾರು 5-6 ಕಡೆಗಳಲ್ಲಿ ಭಾರೀ ಪ್ರಮಾಣದಲ್ಲಿ ಮಣ್ಣು ಕುಸಿದು ಸಂಚಾರ ಅಸ್ತವ್ಯಸ್ತಗೊಂಡಿದೆ. ಮಡಿಕೇರಿ -ಸಿದ್ದಾಪುರ ರಸ್ತೆಯ ಅಬ್ಯಾಲ ಬಳಿ ಬೆಟ್ಟ ಕುಸಿದು ಸಂಪರ್ಕ ಸ್ಥಗಿತಗೊಂಡಿದೆ.

ಜಿಲ್ಲೆಯ ಬಹುತೇಕ ರಸ್ತೆಗಳು ಬಂದ್ ಆಗಿರುವ ಪರಿಣಾಮ ಶುಕ್ರವಾರ ಖಾಸಗಿ ಹಾಗೂ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಗಳು ರಸ್ತೆಗೆ ಇಳಿಯಲಿಲ್ಲ.
ಮೈಸೂರು, ಹಾಸನ ಭಾಗದಿಂದ ಬಂದ ಬಸ್ ಗಳು ಮಾತ್ರ ಮಡಿಕೇರಿಯಿಂದ ವಾಪಾಸಾಗಿವೆ. ಇತರೆಡೆಗೆ ಬಸ್ ಸಂಚಾರವಿಲ್ಲದೆ ಪ್ರಯಾಣಿಕರು ಪರದಾಡುವಂತಾಗಿದೆ.

ಪ್ರವಾಹ ಪೀಡಿತ ಪ್ರದೇಶಗಳ ವೀಕ್ಷಣೆಗೆ ರಾಜ್ಯ ಕಂದಾಯ ಸಚಿವ ಆರ್.ವಿ.ದೇಶಪಾಂಡೆ, ಜಿಲ್ಲಾ ಉಸ್ತುವಾರಿ ಸಚಿವ ಸಾ.ರಾ.ಮಹೇಶ್ ಅವರುಗಳು ಜಿಲ್ಲೆಗೆ ಭೇಟಿ ನೀಡಿದ್ದು, ಕುಶಾಲನಗರ ಮತ್ತಿತರ ಪ್ರದೇಶಗಳ ವೀಕ್ಷಣೆ ಮಾಡಿದರು.

ದಕ್ಷಿಣ ಕೊಡಗಿನಲ್ಲೂ ಸಂಚಾರ ಅಸ್ತವ್ಯಸ್ತ
ದಕ್ಷಿಣ ಕೊಡಗಿನ ಪೋಕಲ್ತೋಡು ಎಂಬಲ್ಲಿ ಬರೆ ಕುಸಿತಗೊಂಡು ಹುದಿಕೇರಿ-ಶ್ರೀಮಂಗಲ ರಸ್ತೆ ಸಂಪರ್ಕ ಕಳೆದುಕೊಂಡಿದೆ. ರಸ್ತೆಯ ಒಂದು ಬದಿ ಸಂಪೂರ್ಣವಾಗಿ ಕುಸಿದಿದೆ. ಪರಿಣಾಮ ಸಣ್ಣ ವಾಹನಗಳು ಮಾತ್ರ ತೆರಳುತ್ತಿದೆ. ಪರ್ಯಾಯ ಮಾರ್ಗವಾಗಿ ಕಾನೂರು ಮೂಲಕ ಕುಟ್ಟಕ್ಕೆ ತೆರಳಬಹುದಾಗಿದೆ. ಗೋಣಿಕೊಪ್ಪದಲ್ಲಿ ತೋಡಿನಲ್ಲಿ ಕಸ ಸಿಕ್ಕಿಹಾಕೊಂಡು ಪೊನ್ನಂಪೇಟೆ ರಸ್ತೆ ಜಂಕ್ಷನ್‍ನಲ್ಲಿ ಸಂಪರ್ಕ ಕಳೆದುಕೊಂಡಿತ್ತು. ಸ್ಥಳೀಯರು ಕಸವನ್ನು ತೆರವುಗೊಳಿಸಿ ನೀರು ಸರಾಗವಾಗಿ ಹರಿಯುವಂತೆ ಮಾಡಿದರು. ಇದರಿಂದಾಗಿ ಸಂಪರ್ಕ ಮುಕ್ತವಾಗಿದೆ.

ಲಕ್ಷ್ಮಣ ತೀರ್ಥ ಪ್ರವಾಹ ಮತ್ತು ಇತ್ತೀಚೆಗೆ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಬಾಳೆಲೆ ಹೋಬಳಿಯ 6 ಗ್ರಾಮಗಳು ಜಲಾವೃತಗೊಂಡಿದ್ದು, ಸುಮಾರು 16,718 ಎಕರೆ ನಾಟಿ ಮಾಡಲಾದ ಭತ್ತದ ಗದ್ದೆಗಳು ಮುಳುಗಡೆ ಯಾಗಿರುವದಾಗಿ ಜಿಲ್ಲಾ ಸಾರ್ವಜನಿಕ ಹಿತರಕ್ಷಣಾ ಸಮಿತಿ ಪ್ರಧಾನ ಕಾರ್ಯದರ್ಶಿ ಅರಮಣಮಾಡ ಸತೀಶ್ ದೇವಯ್ಯ ತಿಳಿಸಿದ್ದಾರೆ.

ಬಾಳೆಲೆ ಹೋಬಳಿಗೆ ಕೊಟ್ಟಗೇರಿ(2132.20 ಎಕರೆ ಭತ್ತದ ಗದ್ದೆ), ನಿಟ್ಟೂರು(3924.86), ದೇವನೂರು(2897.70) ಬಾಳೆಲೆ(4040.52), ಬಿಳೂರು(2118.73) ಹಾಗೂ ಬೆಸಗೂರು ವ್ಯಾಪ್ತಿಯಲ್ಲಿ ಸುಮಾರು 1600.82 ಎಕರೆ ಭತ್ತದ ಗದ್ದೆಗಳಿದ್ದು ಬಹುತೇಕ ನಾಟಿ ಕಾರ್ಯ ಮಾಡಲಾಗಿತ್ತು ಎನ್ನಲಾಗಿದೆ. ಅಂದಾಜು 4-5 ತಿಂಗಳಿನಲ್ಲಿ ಕಟಾವಿಗೆ ಬರುವ ಇಂಟಾನ್, ಕೆಪಿಆರ್-1, ಅತಿರಾ ಹಾಗೂ ತುಂಗಾ ಭತ್ತವನ್ನು ಬಿತ್ತನೆ ಮಾಡಿದ್ದು ಇದೀಗ ಪ್ರವಾಹದಿಂದ ತೀವ್ರ ನಷ್ಟ ಉಂಟಾಗಿದೆ ಎಂದು ಈ ಭಾಗದ ರೈತರು ಆತಂಕ ವ್ಯಕ್ತಪಡಿಸಿದ್ದಾರೆ.

ಬಾಳೆಲೆ ಹೋಬಳಿಯನ್ನು ಭತ್ತದ ಕಣಜವೆಂದೇ ಕರೆಯಲಾಗುತ್ತಿದ್ದು, ಕಳೆದ ಮೂರು ವರ್ಷದಿಂದ ಬರಗಾಲದಿಂದ ಇಲ್ಲಿನ ರೈತರು ಭತ್ತದ ಉತ್ಪಾದನೆಯಲ್ಲಿ ನಷ್ಟ ಅನುಭವಿಸಿದ್ದರೆ, ಈ ಬಾರಿ ಪ್ರವಾಹದಿಂದಾಗಿ ನಷ್ಟ ಅನುಭವಿಸುವಂತಾಗಿದೆ. ಒಟ್ಟಿನಲ್ಲಿ ಅತೀವೃಷ್ಟಿ, ಅನಾವೃಷ್ಟಿಯಿಂದಾಗಿ ಈ ಭಾಗದ ರೈತಾಪಿ ವರ್ಗ ಕಂಗಾಲಾಗಿದೆ.

ಇತ್ತೀಚೆಗೆ ನೂತನ ಉಸ್ತುವಾರಿ ಸಚಿವ ಸಾ.ರಾ.ಮಹೇಶ್ ನಿಟ್ಟೂರು ಸೇತುವೆ ವೀಕ್ಷಣೆಗೆ ಭೇಟಿ ನೀಡಿದ್ದು ವಿವಿಧ ಗ್ರಾಮೀಣ ಅಭಿವೃದ್ಧಿ ರಸ್ತೆ ಅಭಿವೃದ್ಧಿಗೆ ಹಂತ ಹಂತವಾಗಿ ಒತ್ತು ನೀಡುವದಾಗಿ ಭರವಸೆ ನೀಡಿದ್ದರು. ಇದೀಗ ಭತ್ತ, ಇತ್ಯಾದಿ ಕೃಷಿ ನಷ್ಟಕ್ಕೆ ಸೂಕ್ತ ಪರಿಹಾರ ಒದಗಿಸಿಕೊಡಲು ಸತೀಶ್‍ದೇವಯ್ಯ ಅವರು ಒತ್ತಾಯಿಸಿದ್ದಾರೆ. 

ಲಕ್ಷ್ಮಣ ತೀರ್ಥ ಪ್ರವಾಹದ ಹಿನ್ನೆಲೆಯಲ್ಲಿ ಕಾನೂರು ಸೇತುವೆ ಕುಸಿಯುವ ಭೀತಿಯನ್ನು ಅಲ್ಲಿನ ಗ್ರಾಮಸ್ಥರು ವ್ಯಕ್ತಪಡಿಸಿದ್ದಾರೆ. ಸೇತುವೆಯ ಇಬ್ಬದಿಯಲ್ಲಿಯೂ ಬಿರುಕು ಹೆಚ್ಚುತ್ತಿದ್ದು, ಇದೀಗ ಸುರಿಯುತ್ತಿರುವ ಮಳೆ ಹಾಗೂ ಪ್ರವಾಹಕ್ಕೆ ಸಿಲುಕಿ ಸೇತುವೆಗೆ ತೀವ್ರ ಹಾನಿ ಸಂಭವಿಸುವ ಸಾಧ್ಯತೆ ಇದೆ ಎನ್ನಲಾಗಿದೆ. ಬೆಕ್ಕೆಸೊಡ್ಲೂರು, ಕೋತೂರು, ಕಾನೂರು ವ್ಯಾಪ್ತಿಯಲ್ಲಿ ಸುಮಾರು 300 ಎಕರೆ ಪ್ರದೇಶದಲ್ಲಿ ನಾಟಿ ಮಾಡಲಾಗಿದ್ದು, ಲಕ್ಷ್ಮಣ ತೀರ್ಥ ಪ್ರವಾಹದಿಂದಾಗಿ ರೈತರು ತೀವ್ರ ನಷ್ಟ ಅನುಭವಿಸಿದ್ದಾರೆ.

ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದ ದಕ್ಷಿಣ ಕೊಡಗಿನ ಪ್ರಮುಖ ವಾಣಿಜ್ಯ ಕೇಂದ್ರ ಗೋಣಿಕೊಪ್ಪಲಿನ ಕೀರೆ ಹೊಳೆಯಲ್ಲಿ ಪ್ರವಾಹವೇರ್ಪಟ್ಟು ಆತಂಕವನ್ನು ಸೃಷ್ಟಿಸಿದೆ. ಕಂದಾಯ ಇಲಾಖಾಧಿಕಾರಿಗಳು, ಗ್ರಾ.ಪಂ.ಅಧ್ಯಕ್ಷರು,ಜನಪ್ರತಿನಿಧಿಗಳು, ಜಿ.ಪಂ.ಸದಸ್ಯರು, ಗ್ರಾ.ಪಂ.ಪಿಡಿಓ ಅವರುಗಳು ಪ್ರವಾಹ ಪೀಡಿತ ಇಲ್ಲಿನ ಎರಡು ಹಾಗೂ ಮೂರನೇ ವಾರ್ಡ್ ಗೆ ತೆರಳಿ ಕೀರೆಹೊಳೆ ದಡದ ನಿವಾಸಿಗಳಿಗೆ ಗಂಜಿಕೇಂದ್ರಕ್ಕೆ ತೆರಳುವಂತೆ ಎಚ್ಚರಿಕೆ ನೀಡಿದ್ದಾರೆ. ಇಲ್ಲಿನ ಪ್ರವಾಹ ಪೀಡಿತ ಸಂತ್ರಸ್ತರಿಗೆ ಇಲ್ಲಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗಂಜಿಕೇಂದ್ರವನ್ನು ತೆರೆಯಲಾಗಿದ್ದು, ಸಂಕಷ್ಟದಲ್ಲಿರುವವರಿಗೆ ಅಗತ್ಯ ನೆರವನ್ನು ಒದಗಿಸಲಾಗುತ್ತಿದೆ. 

ಜಿ.ಪಂ.ಸದಸ್ಯ ಸಿ.ಕೆ.ಬೋಪಣ್ಣ, ಗ್ರಾ.ಪಂ.ಅಧ್ಯಕ್ಷೆ ಸೆಲ್ವಿ, ಪಿಡಿಓ ಚಂದ್ರಮೌಳಿ ಹಾಗೂ ಸದಸ್ಯರು ವಿವಿಧ ಬಡಾವಣೆಗಳಿಗೆ ತೆರಳಿ ಪ್ರವಾಹ ಪರಿಸ್ಥಿತಿ ವೀಕ್ಷಣೆ ಮಾಡಿದರು. ಇದೇ ಸಂದರ್ಭ ಗ್ರಾ.ಪಂ.ಶೇ.25 ರ ಅನುದಾನದಲ್ಲಿ ಪ.ಜಾತಿ ಮತ್ತು ಪ.ಪಂಗಡ ಕುಟುಂಬಗಳಿಗೆ ಪ್ಲಾಸ್ಟಿಕ್ ಹೊದಿಕೆ ಹಾಗೂ ಮನೆ ದುರಸ್ತಿಗೆ ಕನಿಷ್ಠ 20 ಸಾವಿರ ರೂ.ಅನುದಾನ ನೀಡಲು ಜಿ.ಪಂ.ಸದಸ್ಯ ಸಿ.ಕೆ.ಬೋಪಣ್ಣ ಪಂ. ಅಧ್ಯಕ್ಷರು ಹಾಗೂ ಅಭಿವೃದ್ಧಿ ಅಧಿಕಾರಿ ಚಂದ್ರಮೌಳಿ ಅವರಿಗೆ ನಿರ್ದೇಶನ ನೀಡಿದರು.

ಇಲ್ಲಿನ 2 ಹಾಗೂ 3 ನೇ ವಾರ್ಡ್‍ನಲ್ಲಿ ಸುಮಾರು 54ಕ್ಕೂ ಅಧಿಕ ಕುಟುಂಬಗಳು ವಾಸವಿದ್ದು, ಭಾರೀ ಮಳೆ ಮುಂದುವರೆದಲ್ಲಿ  ಬಡಾವಣೆಗಳು ಸಂಪೂರ್ಣ ಜಲಾವೃತಗೊಳ್ಳುವ ಸಾಧ್ಯತೆಯೂ ಕಂಡುಬಂದಿದೆ. ಮುಂಜಾಗೃತಾ ಕ್ರಮವಾಗಿ ಇಲ್ಲಿನ ಸಂಪರ್ಕ ಸೇತುವೆ ಮೇಲಿನ ವಾಹನ ಓಡಾಟ ನಿಷೇಧಿಸಿ, ಬ್ಯಾರಿಕೇಡ್ ಅಳವಡಿಸಲಾಗಿದೆ. ಪೊಲೀಸರನ್ನೂ ನಿಯೋಜಿಸಲಾಗಿದೆ. ಜಿಲ್ಲಾ ಕೇಂದ್ರ ಮಡಿಕೇರಿಯಿಂದ ಮೈಸೂರಿಗೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿಯ ಬೋಯಿಕೇರಿಯ ಎರಡು ಕಡೆಗಳಲ್ಲಿ ಭಾರೀ ಪ್ರಮಾಣದ ಬರೆ ಕುಸಿತವುಂಟಾಗಿ ವಾಹನಗಳ ಸಂಚಾರ ಕೆಲವು ಕಾಲ ಸ್ಥಗಿತಗೊಂಡ ಘಟನೆ ನಡೆದಿದೆ. 

ಕಣ್ಣೀರು ಹಾಕಿದ ವೀಣಾಅಚ್ಚಯ್ಯ
ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಚಿವರು ಅಧಿಕಾರಿಗಳ ಸಭೆ ನಡೆಸುತ್ತಿದ್ದ ಸಂದರ್ಭ ವಿಧಾನ ಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ ಆಗಮಿಸಿ ಕಣ್ಣೀರು ಹಾಕಿದರು. ನೂರಾರು ಮಂದಿ ರಕ್ಷಣೆಗಾಗಿ ಗುಡ್ಡ ಹತ್ತಿ ಕುಳಿತಿದ್ದಾರೆ. ಮೊದಲು ಅವರನ್ನು  ರಕ್ಷಿಸಿ, ನಂತರ ಸಭೆ ನಡೆಸಿ ಎಂದು  ಸಚಿವರೆದುರು ಗೋಗರೆದರು. ನಿನ್ನೆಯಿಂದ ಹೆಲಿಕಾಪ್ಟರ್ ಬರುತ್ತದೆ ಎನ್ನುತ್ತೀದ್ದೀರಿ, ನಿಮ್ಮ ಹೆಲಿಕಾಪ್ಟರ್ ಎಲ್ಲಿಗೆ ತಲುಪಿದೆ ಎಂದು ಪ್ರಶ್ನಿಸಿದರು.

ನನ್ನ ಊರು ಮಕ್ಕಂದೂರು, ಮುಕ್ಕೋಡ್ಲು ಗ್ರಾಮದ 900 ಕ್ಕೂ ಹೆಚ್ಚು ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ, ಮೊದಲು ಅವರನ್ನು ರಕ್ಷಿಸಿ ಎಂದು ಹೇಳಿದರು. 
ಈ ಸಂದರ್ಭ ಮಾತನಾಡಿದ ಸಚಿವ ದೇಶಪಾಂಡೆ ಸರಕಾರ ಕೊಡಗಿನ ಜನರೊಂದಿಗೆ ಇದೆ ಎಂದು ಧೈರ್ಯವಾಗಿರಿ ಎಂದು ಅಭಯ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X