Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮಡಿಕೇರಿಯಲ್ಲಿ ನಿಲ್ಲದ ಮಳೆ: 1300...

ಮಡಿಕೇರಿಯಲ್ಲಿ ನಿಲ್ಲದ ಮಳೆ: 1300 ಕುಟುಂಬಗಳ ಸ್ಥಳಾಂತರ

ವಾರ್ತಾಭಾರತಿವಾರ್ತಾಭಾರತಿ17 Aug 2018 8:15 PM IST
share
ಮಡಿಕೇರಿಯಲ್ಲಿ ನಿಲ್ಲದ ಮಳೆ: 1300 ಕುಟುಂಬಗಳ ಸ್ಥಳಾಂತರ

ಮಡಿಕೇರಿ, ಆ.17: ಕೊಡಗು ಜಿಲ್ಲೆಯಾದ್ಯಂತ ಗುರುವಾರ ರಾತ್ರಿ ಬಿರುಗಾಳಿಯೊಂದಿಗೆ ಸುರಿದ ಧಾರಾಕಾರ ಮಳೆಗೆ ಮಡಿಕೇರಿ ನಗರದ ಬಹುತೇಕ ಬಡಾವಣೆಗಳಲ್ಲಿ ಗುಡ್ಡ ಕುಸಿತದಿಂದ ಮನೆಗಳು ನಾಶವಾಗಿವೆ. ಪ್ರಮುಖವಾಗಿ ಎತ್ತರದ ಪ್ರದೇಶವಾಗಿರುವ ಇಂದಿರಾ ನಗರ ಹಾಗೂ ಚಾಮುಂಡೇಶ್ವರಿ ನಗರದಲ್ಲಿ ಸಾಲು ಸಾಲಾಗಿ ಮನೆಗಳು ಕುಸಿಯುತ್ತಿದ್ದು, ಗುಡ್ಡ ಸಹಿತ ಮಂಗಳೂರು ರಸ್ತೆಯನ್ನು ಆವರಿಸಿಕೊಂಡಿವೆ.

ಭಾರೀ ಅಪಾಯದ ಪರಿಸ್ಥಿತಿ ಎದುರಾದ ಕಾರಣ ನಗರದ ಶ್ರೀ ಕುಂದುರುಮೊಟ್ಟೆ ಚೌಟಿ ಮಾರಿಯಮ್ಮ ದೇವಸ್ಥಾನದ ಬಳಿಯಿಂದ ಮಂಗಳೂರು ರಸ್ತೆಯ ತಾಳತ್‍ಮನೆಯವರೆಗಿನ ಎಲ್ಲಾ 1300 ಕುಟುಂಬಗಳನ್ನು ಗಂಜಿ ಕೇಂದ್ರಗಳಿಗೆ ಸ್ಥಳಾಂತರಿಸಲಾಗಿದೆ.

ಬಡವರು, ಕಾರ್ಮಿಕ ವರ್ಗ ಬೆಟ್ಟದ ಮೇಲೊಂದು ನೆಲೆ ಕಂಡುಕೊಂಡು ಕಳೆದ ಎರಡು ದಶಕಗಳಿಗಿಂತಲೂ ಹೆಚ್ಚಿನ ಕಾಲ ಜೀವನ ನಡೆಸಿದ ಇಡೀ ಪ್ರದೇಶವನ್ನೆ ತೊರೆಯುವಂತಹ ದಯನೀಯ ಸ್ಥಿತಿ ಬಂದೊದಗಿದೆ. ಸುಮಾರು ಒಂದೂವರೆ ಸಾವಿರಕ್ಕು ಅಧಿಕ ಕುಟುಂಬಗಳಿದ್ದ ಪ್ರದೇಶ ಇದೀಗ ನಿರ್ಜನವಾಗಿದ್ದು, ಕೇವಲ ನಾಯಿ ಕೋಳಿಗಳಷ್ಟೆ ಬಾಕಿ ಉಳಿದಿವೆ. ಸಾಕಷ್ಟು ಮನೆಗಳು ನಾಶವಾಗಿದ್ದು, ಒಂದು ಓಮ್ನಿ ಜಖಂ ಗೊಂಡಿದ್ದು, ಸ್ಕೂಟಿ ವಾಹನ ಗುಡ್ಡ ಕುಸಿತದಲ್ಲಿ ಸಿಲುಕಿ ಕಣ್ಮರೆಯಾಗಿದೆ.

ಗುಡ್ಡಗಳು ಕುಸಿದ ರಭಸಕ್ಕೆ ಮಂಗಳೂರು ರಸ್ತೆಯ ಬದಿಯ ತಾಳತ್ ಮನೆಯಲ್ಲಿದ್ದ ನಗರಸಭಾ ಸದಸ್ಯ ಪಿ.ಡಿ. ಪೊನ್ನಪ್ಪ ಹಾಗೂ ಉದ್ಯಮಿ ಪಿ.ಸಿ, ತಮ್ಮಯ್ಯ ಅವರ ಮನೆ ಸಂಪೂರ್ಣ ಹಾನಿಗೀಡಾಗಿದೆ. ತೆಂಗಿನ ಮರ ಸೇರಿದಂತೆ ಕೆಲವು ಗಿಡಗಂಟಿಗಳು ಮುರಿದು ತಳ ಭಾಗಕ್ಕೆ ಬಂದು ಬಿದ್ದಿದೆ. ಈ ಪ್ರದೇಶದಲ್ಲಿ ಆತಂಕದ ವಾತಾವರಣ ಮುಂದುವರಿದಿದೆ.

ಇಂದಿರಾ ನಗರ ಮತ್ತು ಚಾಮುಂಡೇಶ್ವರಿ ನಗರದಕ್ಕೆ ಯಾರೂ ಪ್ರವೇಶಿಸದಂತೆ ಬ್ಯಾರಿಕೇಡ್‍ಗಳನ್ನು ಅಳವಡಿಸಿ ನಿರ್ಬಂಧ ಹೇರಲಾಗಿದೆ. ಆಶ್ರಯ ಕಳೆದುಕೊಂಡ ಎಲ್ಲಾ ಕುಟುಂಬಗಳನ್ನು ನಗರದ ಗಂಜಿ ಕೇಂದ್ರಗಳಾದ ಶ್ರೀ ಲಕ್ಷ್ಮೀನರಸಿಂಹ ಕಲ್ಯಾಣ ಮಂಟಪ, ಕಾರ್ಯಪ್ಪ ವೃತ್ತದ  ಬಳಿಯ ಅಂಬೇಡ್ಕರ್ ಭವನ, ಅಂಗನವಾಡಿ ಕೇಂದ್ರ ಇನ್ನಿತರ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ. 

ನಗರದ ಹಳೇ ಖಾಸಗಿ ಬಸ್ ನಿಲ್ದಾಣದ ಹಿಂಬದಿಯ ಗುಡ್ಡ ಕುಸಿಯುತ್ತಲೆ ಇದ್ದು, ಎರಡು ಮೂರು ಅಂಗಡಿಗಳು ಸಂಪೂರ್ಣ ಹಾನಿಗೆ ಒಳಗಾಗಿವೆ. ಉಳಿದಂತೆ ಈ ಪ್ರದೇಶದಲ್ಲಿರುವ ಹಳೆಯ ಪ್ರಯಾಣಿಕರ ತಂಗುದಾಣ ಕಟ್ಟಡ ಅಪಾಯಕಾರಿ ಸ್ಥಿತಿಯಲ್ಲಿದೆ. 

ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣದ ಎದುರು ಭಾಗದಲ್ಲಿರುವ ಎತ್ತರ ಪ್ರದೇಶದಲ್ಲಿ ಕೂಡ ಬರೆ ಕುಸಿದಿದ್ದು, ಕೆಳಗಿನ ಹೋಂ ಸ್ಟೇಗೆ ಹಾನಿಯಾಗಿದೆ. ಮತ್ತಷ್ಟು ಮಣ್ಣು ಕುಸಿಯುತ್ತಲೆ ಇದ್ದು, ಆತಂಕಗೊಂಡಿರುವ ಈ ಭಾಗದ ಅಂಗಡಿ ಮುಂಗಟ್ಟು ಮಾಲಿಕರು ತಮ್ಮ ವ್ಯಾಪಾರ ವಹಿವಾಟುಗಳನ್ನು ಸ್ಥಗಿತಗೊಳಿಸಿದ್ದಾರೆ.
ಶುಕ್ರವಾರ ಸಂತೆಯ ದಿನವಾದರೂ ನಗರದ ತುಂಬಾ ಅಘೋಷಿತ ಬಂದ್ ವಾತಾವರಣ ಕಂಡು ಬಂತು. ಕೆಲವರು ಪರ ಊರಿನಿಂದ ಬಂದ ಗ್ರಾಮೀಣ ಪ್ರಯಾಣಿಕರು ತಮ್ಮ ತಮ್ಮ ಗ್ರಾಮಗಳಿಗೆ ತೆರಳಲು ಬಸ್ ಸೇರಿದಂತೆ ಇತರ ವಾಹನಗಳು ಸಿಗದೆ ಪರದಾಡುತ್ತಿದ್ದ ದೃಶ್ಯ ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣದಲ್ಲಿ ಕಂಡು ಬಂದಿತು. ಆಟೋ ರಿಕ್ಷಾಗಳ ಸಂಚಾರವು ವಿರಳವಾಗಿತ್ತು. ಕಳೆದ ಒಂದು ವಾರದ ಮಹಾ ಮಳೆಯಿಂದ ಪ್ರವಾಸಿಗರ ಆಗಮನ ಸಂಪೂರ್ಣವಾಗಿ ಕಡಿಮೆಯಾಗಿದ್ದು, ಇರುವಷ್ಟು ಬೆರಳೆಣಿಕೆಯ ಪ್ರವಾಸಿಗರು ಅತಂತ್ರ ಸ್ಥಿತಿಯಲ್ಲಿದ್ದಾರೆ. ನಗರದಲ್ಲಿ ಶೀತಗಾಳಿಯೊಂದಿಗೆ ಮಳೆ ಮುಂದುವರೆದಿದ್ದು, ಎತ್ತರ ಹಾಗೂ ತಗ್ಗು ಪ್ರದೇಶದ ಜನರಲ್ಲಿ ಆತಂಕ ಮನೆ ಮಾಡಿದೆ.

ವಿವಿಧ ಸಂಘ ಸಂಸ್ಥೆಗಳ ಸ್ವಯಂ ಸೇವಕರು ನಿರಾಶ್ರಿತರಿಗೆ ಆಶ್ರಯ ನಿಡುವುದರೊಂದಿಗೆ ಊಟ, ಬಟ್ಟೆಯ ವ್ಯವಸ್ಥೆಯನ್ನು ಕಲ್ಪಿಸುತ್ತಿದ್ದಾರೆ. ದಾನಿಗಳು ಕೂಡ ಸಹಾಯ ಹಸ್ತ ಚಾಚುತ್ತಿದ್ದಾರೆ. ನಗರದ ಲಕ್ಷ್ಮೀ ನರಸಿಂಹ ಕಲ್ಯಾಣ ಮಂಟಪದಲ್ಲಿ ಸೇವಾ ಭಾರತಿ ಸಂಸ್ಥೆಯ ನೇತೃತ್ವದಲ್ಲಿ ನೆರವನ್ನು ನೀಡಲಾಗುತ್ತಿದ್ದು, ದಿನಸಿ ಸಾಮಗ್ರಿ, ಜಮಖಾನ ಹಾಗೂ ಧನ ಸಹಾಯಕ್ಕಾಗಿ ಸಂಸ್ಥೆಯ ಪ್ರಮುಖರು ಕೋರಿಕೊಂಡಿದ್ದು, ದಾನಿಗಳು ಈ ಸಂಖ್ಯೆಯನ್ನು ಸಂಪರ್ಕಿಸಬಹುದಾಗಿದೆ. ಚಂದ್ರಶೇಖರ್ 9449666952, ಸುಳ್ಯದ ಕೆವಿಜಿ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆ ನೆರೆ ಸಂತ್ರಸ್ತರ ಹೆಲ್ಪ್ ಡೆಸ್ಕ್ ಆರಂಭಿಸಿದ್ದು, ಉಚಿತ ವೈದ್ಯಕೀಯ ಚಿಕಿತ್ಸೆ ನಿಡುವುದಾಗಿ ಘೋಷಿಸಿದೆ.

ಸುಳ್ಯದ ಕೆವಿಜಿ ಆಸ್ಪತ್ರೆಯಲ್ಲಿ 2 ವಾರ್ಡ್‍ಗಳನ್ನು ಸಂತ್ರಸ್ತರಿಗಾಗಿ ತೆರೆದಿದ್ದು, ಉಚಿತ ವೈದ್ಯಕೀಯ ಸೇವೆ , ವಸತಿ, ಆಹಾರದ ಸೌಲಭ್ಯಗಳನ್ನು ಒದಗಿಸಲಾಗುವುದೆಂದು ಕಾಲೇಜಿನ ಮೆಡಿಕಲ್ ಡೈರೆಕ್ಟರ್ ಡಾ. ಕೆ.ವಿ. ಚಿದಾನಂದ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಮಾಹಿತಿಗಾಗಿ ಈ ದೂರವಾಣಿ ಸಂಖ್ಯೆಗಳನ್ನು ಸಂಪರ್ಕಿಸಬಹುದಾಗಿದೆ-08257-235561, ಮೊ.7353756060.

ಉಳಿದಂತೆ ನಗರದಲ್ಲಿರುವ ಗಂಜಿ ಕೇಂದ್ರಗಳಿಗೆ ಜಿಲ್ಲೆಯ ವೈದ್ಯರುಗಳು ತೆರಳಿ ಸ್ವಯಂ ಪ್ರೇರಣೆಯಿಂದ ಸಂತ್ರಸ್ತರಿಗೆ ಚಿಕಿತ್ಸೆ ನೀಡುತ್ತಿದ್ದಾರೆ. ಜಿಲ್ಲಾ ಚೇಂಬರ್ ಆಫ್ ಕಾಮರ್ಸ್‍ನ ಸಭಾಂಗಣದಲ್ಲಿ ಗಂಜಿ ಕೇಂದ್ರವನ್ನು ತೆರೆಯಲಾಗಿದ್ದು, ಸಂತ್ರಸ್ತರು ಈ ಸಂಖ್ಯೆಯನ್ನು ಸಂಪರ್ಕಿಸಬಹುದಾಗಿದೆ. ಕೆ.ಎಂ. ಗಣೇಶ್ ಮೊ.9448384010.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X