Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಚಾರ್ಮಾಡಿಘಾಟಿಯಲ್ಲಿ ಘನ ವಾಹನಗಳಿಂದ...

ಚಾರ್ಮಾಡಿಘಾಟಿಯಲ್ಲಿ ಘನ ವಾಹನಗಳಿಂದ ಸಮಸ್ಯೆ

ವಾರ್ತಾಭಾರತಿವಾರ್ತಾಭಾರತಿ17 Aug 2018 10:25 PM IST
share
ಚಾರ್ಮಾಡಿಘಾಟಿಯಲ್ಲಿ ಘನ ವಾಹನಗಳಿಂದ ಸಮಸ್ಯೆ

ಬೆಳ್ತಂಗಡಿ, ಆ. 17: ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಶುಕ್ರವಾರ ಸಂಜೆ ಟೆನ್ ವೀಲ್ ಲಾರಿಯೊಂದು ಬಾಕಿಯಾಗಿ ವಾಹನ ಸಂಚಾರಕ್ಕೆ ತಡೆಯಾಗಿದ್ದು ಟ್ರಾಫಿಕ್ ಸಮಸ್ಯೆ ತಲೆದೋರಿದೆ.

ಅಣ್ಣಪ್ಪ ಬೆಟ್ಟದಿಂದ ಕೆಳಗೆ ಹಿಮ್ಮುರಿ ತಿರುವಿವೊಂದರಲ್ಲಿ ಟೆನ್ ವೀಲ್ ಲಾರಿ ಬಾಕಿಯಾಗಿದ್ದು ಟ್ರಾಫಿಕ್‌ಜಾಮ್ ಆಗಿದೆ.  ತಿರುವಿನಲ್ಲಿ ಸಂಚರಿಸುತ್ತಿದ್ದ ಲಾರಿ ರಸ್ತೆಯಲ್ಲಿ ಹದಗೆಟ್ಟಿದ್ದರಿಂದ ಮೇಲೆ ಹೋಗಲು ಸಾಧ್ಯವಾಗದೆ ನಿಂತಿದೆ.

ತಡೆಗೋಡೆ ಕುಸಿತವಾಗಿದ್ದು, ಚಾಲಕ ಸ್ವಲ್ಪ ನಿರ್ಲಕ್ಷ್ಯ ವಹಿಸಿ ಹಿಂದಕ್ಕೆ ಚಲಾಯಿಸಿದರೆ ಪ್ರಪಾತಕ್ಕೆ ಬೀಳುವ ಸಾಧ್ಯತೆಯನ್ನು ತಳ್ಳಿಹಾಕುವಂತಿಲ್ಲ. ಮಳೆಯಿಂದ 5 ಮತ್ತು 6ನೇ ತಿರುವಿನಲ್ಲಿ ರಸ್ತೆಯ ಕೆಳ ಭಾಗ ಕುಸಿತವಾಗಿದೆ. ಘನ ವಾಹನಗಳ ಸಂಚಾರ ಅಧಿಕವಾಗಿದ್ದು, ಲಘು ವಾಹನಗಳಿಗೆ ಮುಕ್ತ ಸಂಚಾರಕ್ಕೆ ತಡೆಯಾಗುತ್ತಿದೆ.

ಮಳೆಯಿಂದ ಈಗಾಗಲೇ ಅಲ್ಲಲ್ಲಿ ಕುಸಿತವಾಗಿದ್ದು, ಹಿಮ್ಮುರಿ ತಿರುವುಗಳಲ್ಲಿ ಸೃಷ್ಟಿ ಯಾದ ಹೊಂಡಗಳಿಂದ ಘನ ವಾಹನಗಳಿಗೆ ಸಂಚರಿಸಲು ಸಾಧ್ಯ ವಾಗದೇ ಟ್ರಾಫಿಕ್ ಸಮಸ್ಯೆ ಉದ್ಭವಿಸುತ್ತದೆ.

ಸಂಪಾಜೆ ಮತ್ತು ಶಿರಾಡಿ ಘಾಟ್‌ರಸ್ತೆ ಬಂದ್ ಮಾಡಿರುವ ಹಿನ್ನೆಲೆಯಲ್ಲಿ ಎಲ್ಲಾ ಘನ ವಾಹನಗಳು ಚಾರ್ಮಾಡಿಯಾಗಿ ಹೋಗುತ್ತಿದೆ. ಇದರಿಂದ ಇತರ ವಾಹನಗಳಿಗೆ ಸಮಸ್ಯೆ ಉಂಟಾಗಿದೆ. ಕೆ ಎಸ್‌ಆರ್ ಟಿ ಸಿಯ ಸಾಮಾನ್ಯ ಬಸ್ ಗಳು ಮಾತ್ರ ಚಾರ್ಮಾಡಿಯಾಗಿ ಸಂಚರಿಸುವಂತೆ ಆದೇಶ ನೀಡಲಾಗಿದೆ. ಉಳಿದಂತೆ ರಾಜಹಂಸ, ವೋಲ್ವೋ ಬಸ್ ಗಳು ಎಸ್.ಕೆ. ಬಾರ್ಡರ್‌ ಮೂಲಕ ತೆರಳುವಂತೆ ಸೂಚಿಸಲಾಗಿದೆ.

ಆದರೆ ಖಾಸಗಿ ಬಸ್ಗಳು ಹಾಗೂ ಸರಕುಗಳನ್ನು ಹೊತ್ತೊಯ್ಯುವ ಘನ ವಾಹನಗಳು ಯಾವುದೇ ನಿರ್ಬಂಧ ಇಲ್ಲದೆ ಸಂಚರಿಸುತ್ತಿದೆ. ಘನ ವಾಹನಗಳ ಸಂಚರಿಸುತ್ತಿದ್ದರೂ ಸಂಬಂಧಪಟ್ಟ ಇಲಾಖೆ ಮೌನಕ್ಕೆ ಶರಣಾಗಿರುವುದು  ನಾಗರಿಕರ ಆಕ್ರೋಶಕ್ಕೆ ಕಾರಣವಾಗಿದೆ.

ಅಪಾಯಕಾರಿಯಾಗಿರುವ, ಅಲ್ಲಲ್ಲಿ ಕುಸಿತವಾಗಿರುವ ಘಾಟ್‌ ರಸ್ತೆಯಲ್ಲಿ ತನ್ನ ಸಾಮರ್ಥ್ಯಕ್ಕಿಂತ ಅಧಿಕವಾಗಿ ಸಂಚರಿಸುವ ಘನ ವಾಹನಗಳು ಹಾಗೂ ಪ್ರಯಾಣಿಕರನ್ನು ಕೊಂಡೊಯ್ಯುವ ಬಸ್ ಗಳ ಬಗ್ಗೆ ಮುಂಜಾಗ್ರತಾಕ್ರಮ ಕೈಗೊಳ್ಳಲು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಈಗಾಗಲೇ ಜಿಲ್ಲೆಯನ್ನು ಸಂಪರ್ಕಿಸುವ ಎರಡು ಘಾಟ್ ರಸ್ತೆ ಸ್ಥಗಿತವಾಗಿದ್ದು ಉಳಿದ ಏಕೈಕ ಚಾರ್ಮಾಡಿ ಘಾಟ್ ರಸ್ತೆಯನ್ನು ಉಳಿಸಬೇಕಾದರೆ ಸಂಬಂಧ ಪಟ್ಟ ಇಲಾಖೆ ಸೂಕ್ತ ಕ್ರಮ ಕೈಗೊಳ್ಳಬೇಕಾಗಿದೆ.

ಚಾರ್ಮಾಡಿಯ ಸ್ಥಳೀಯ ಯುವಕರು ಹಾಗೂ ಎಸ್ಕೆಎಸ್‌ಎಸ್ಎಫ್ ಸಂಘಟನೆಯವರು ಚಾರ್ಮಾಡಿ ಘಾಟಿಯಲ್ಲಿ ರಾತ್ರಿಯಿಡೀ ಇದ್ದು ಪ್ರಯಾಣಿಕರಿಗೆ ನೆರವಾಗುತ್ತಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X