Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಸಿನಿಮಾ
  4. ವಾಜಪೇಯಿ ಬರೆದ ಹಾಡಿನಲ್ಲಿ ನಟಿಸಿದ್ದ...

ವಾಜಪೇಯಿ ಬರೆದ ಹಾಡಿನಲ್ಲಿ ನಟಿಸಿದ್ದ ಪ್ರಸಿದ್ಧ ಬಾಲಿವುಡ್ ನಟ ಯಾರು ಗೊತ್ತಾ?

ವಿಡಿಯೋ ವೀಕ್ಷಿಸಿ

ವಾರ್ತಾಭಾರತಿವಾರ್ತಾಭಾರತಿ17 Aug 2018 10:39 PM IST
share
ವಾಜಪೇಯಿ ಬರೆದ ಹಾಡಿನಲ್ಲಿ ನಟಿಸಿದ್ದ ಪ್ರಸಿದ್ಧ ಬಾಲಿವುಡ್ ನಟ ಯಾರು ಗೊತ್ತಾ?

ಹೊಸದಿಲ್ಲಿ, ಆ.17: ಗುರುವಾರ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿಯವರು ಕೊನೆಯುಸಿರೆಳೆದಿದ್ದು, ಇಡೀ ದೇಶ ಅಗಲಿದ ನಾಯಕನಿಗೆ ಶ್ರದ್ಧಾಂಜಲಿ ಸಲ್ಲಿಸುತ್ತಿದ್ದರೆ, ಬಾಲಿವುಡ್ ತಾರೆಯರು ಕೂಡಾ ತಮ್ಮ ಟ್ವಿಟ್ಟರ್ ಹ್ಯಾಂಡಲ್‍ಗಳ ಮೂಲಕ ಅಂತಿಮ ನಮನ ಸಲ್ಲಿಸಿದರು.

ಬಾಲಿವುಡ್ ನಟ ಶಾರೂಖ್‍ ಖಾನ್ ಶ್ರದ್ಧಾಂಜಲಿ ಸಲ್ಲಿಸಲು ಆಯ್ಕೆ ಮಾಡಿಕೊಂಡದ್ದು ಇನ್‍ಸ್ಟಾಗ್ರಾಂ ಹ್ಯಾಂಡಲ್. "ವಾಜಪೇಯಿಯವರ ಪ್ರಭಾವ ನನ್ನ ಜೀವನದ ಮೇಲೆ ಬೀರಿದ್ದು, ಈ ಯುಗದಲ್ಲಿ ಹುಟ್ಟಿದ ನಾನು ಅದೃಷ್ಟಶಾಲಿ" ಎಂದು ಹೇಳಿಕೊಂಡಿದ್ದಾರೆ. ಜತೆಗೆ ಈ ಮುತ್ಸದ್ಧಿ ರಾಜಕಾರಣಿಯನ್ನು ಭೇಟಿ ಮಾಡಿದ ಕ್ಷಣವನ್ನು ಮೆಲುಕು ಹಾಕಿಕೊಂಡಿದ್ದಾರೆ. ವಾಜಪೇಯಿಯವರು ಬರೆದ ಹಾಡುಗಳ ಆಲ್ಬಂ ಒಂದರಲ್ಲಿ ಶಾರೂಕ್ ನಟಿಸಿದ್ದಾರೆ.

ಅವರ ಪೋಸ್ಟ್ ಈ ರೀತಿ ಇದೆ: "ನಾನು ಬೆಳೆಯುವ ಹಂತದಲ್ಲಿ ದಿಲ್ಲಿಯಲ್ಲಿ ವಾಜಪೇಯಿ ಮಾಡುವ ಪ್ರತಿ ಭಾಷಣಕ್ಕೂ ತಂದೆ ನನ್ನನ್ನು ಕರೆದೊಯ್ಯುತ್ತಿದ್ದರು. ವರ್ಷಗಳು ಕಳೆದಂತೆ ಅವರನ್ನು ಭೇಟಿ ಮಾಡುವ ಮತ್ತು ಕಾವ್ಯ, ಸಿನಿಮಾ, ರಾಜಕೀಯ ಮತ್ತು ನಮ್ಮ ಮೊಣಕಾಲು ಸಮಸ್ಯೆಗಳ ಬಗ್ಗೆ ಚರ್ಚಿಸುವ ಅವಕಾಶ ನನಗೆ ಸಿಕ್ಕಿತು. ಅವರ ಒಂದು ಕವನಕ್ಕೆ ತೆರೆಯ ಮೇಲೆ ನಟಿಸುವ ಸೌಭಾಗ್ಯವೂ ನನಗೆ ಸಿಕ್ಕಿತು. ಮನೆಯಲ್ಲಿ ಅವರನ್ನು ಹೆಮ್ಮೆಯಿಂದ "ಬಾಪ್‍ ಜಿ" ಎಂದು ಕರೆಯಲಾಗುತ್ತಿತ್ತು. ಇಂದು ದೇಶ ತಂದೆ ಸಮಾನ ವ್ಯಕ್ತಿಯನ್ನು, ಶ್ರೇಷ್ಠ ನಾಯಕನನ್ನು ಕಳೆದುಕೊಂಡಿದೆ. ವೈಯಕ್ತಿಕವಾಗಿ ನಾನು ನನ್ನ ಬಾಲ್ಯದ ಒಂದು ಭಾಗವನ್ನು ಮತ್ತು ನಗುವುದನ್ನು ಕಲಿತ, ಕಾವ್ಯದ ನೆನಪುಗಳೊಂದಿಗೆ ಬೆಳೆದ ಅಂಶವನ್ನು ಕಳೆದುಕೊಂಡಿದ್ದೇನೆ. ನನ್ನ ಜೀವನದ ಆರಂಭಿಕ ವರ್ಷಗಳಲ್ಲಿ ಅವರ ಪ್ರಭಾವ ನನ್ನ ಮೇಲಾದದ್ದಕ್ಕೆ ನಾನು ಅದೃಷ್ಟಶಾಲಿ ಅಂದುಕೊಳ್ಳುತ್ತೇನೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ. ಅವರ ಕುಟುಂಬ ಹಾಗೂ ಸ್ನೇಹಿತರಿಗೆ ನನ್ನ ಹೃದಯಾಂತರಾಳದ ಸಾಂತ್ವನ. ನಿಮ್ಮ ನಗುಮುಖವನ್ನು ನಾನು ಕಳೆದುಕೊಳ್ಳುತ್ತಿದ್ದೇನೆ ಬಾಪ್‍ಜೀ.."

share
ವಾರ್ತಾಭಾರತಿ
ವಾರ್ತಾಭಾರತಿ
Next Story
X