Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ರಿಯಾದ್: ಇಂಡಿಯನ್ ಸೋಷಿಯಲ್ ಫೋರಂ...

ರಿಯಾದ್: ಇಂಡಿಯನ್ ಸೋಷಿಯಲ್ ಫೋರಂ ವತಿಯಿಂದ ಸ್ವಾತಂತ್ರ್ಯೋತ್ಸವ

ವಾರ್ತಾಭಾರತಿವಾರ್ತಾಭಾರತಿ17 Aug 2018 11:54 PM IST
share
ರಿಯಾದ್: ಇಂಡಿಯನ್ ಸೋಷಿಯಲ್ ಫೋರಂ ವತಿಯಿಂದ  ಸ್ವಾತಂತ್ರ್ಯೋತ್ಸವ

ರಿಯಾದ್, ಆ. 17: ತಾಯ್ನಾಡಿನಿಂದ ಸಾವಿರಾರು ಮೈಲಿ ದೂರ ಇದ್ದರೂ ದೇಶಪ್ರೇಮ ಕಿಂಚಿತ್ತೂ ಕಡಿಮೆಯಾಗಲ್ಲ ಎಂಬಂತೆ ಇಂಡಿಯನ್ ಸೋಷಿಯಲ್ ಫೋರಂ ರಿಯಾದ್, ಕೇಂದ್ರ ಸಮಿತಿ ವತಿಯಿಂದ ಆ. 15ರಂದು ರಿಯಾದಿನ ಅಲ್ ಮಾಸ್ ಹೋಟೆಲ್ ಸಭಾಂಗಣದಲ್ಲಿ 72ನೇ ಸ್ವಾತಂತೋತ್ಸವವನ್ನು ಬಹಳ ವಿಜ್ರಂಭಣೆಯಿಂದ ಆಚರಿಸಲಾಯಿತು.

ಐಕ್ಯಗಾನದೊಂದಿಗೆ ಸಭಾ ಕಾರ್ಯಕ್ರಮವು ಸಾಂಕೇತಿಕವಾಗಿ ಚಾಲನೆಗೊಂಡಿತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಭಾರತೀಯ ರಾಯಭಾರ ಕಚೇರಿಯ ಎರಡನೇ ಕಾರ್ಯದರ್ಶಿಯಾದ ಟಿ ಟಿ ಜಾರ್ಜ್ ರವರು ಆಗಮಿಸಿದರು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಪ್ರಪಂಚದಲ್ಲಿ ಬಹಳಷ್ಟು ನಾಗರಿಕತೆಗಳು ಬಂದು ಹೋಗಿವೆ ಆದರೆ ಭಾರತೀಯ ನಾಗರಿಕತೆ ದಿನದಿಂದ ದಿನಕ್ಕೆ ಅಭಿವೃದ್ಧಿಗೊಳ್ಳುತ್ತಿದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಇಂಡಿಯನ್ ಸೋಷಿಯಲ್  ಫೋರಂ ಕೇಂದ್ರ ಸಮಿತಿ ಅಧ್ಯಕ್ಷ  ಹ್ಯಾರಿಸ್ ಅಂಗರಗುಂಡಿ ಮಂಗಳೂರು ರವರು ತಮ್ಮ ಅಧ್ಯಕ್ಷೀಯ ಭಾಷಣದಲ್ಲಿ ಸಭಿಕರನ್ನು ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳನ್ನು ನೀಡಿ, ಸೌದಿ ಅರೇಬಿಯಾದ ಭಾರತೀಯ ಸಮುದಾಯಕ್ಕಾಗಿ ಒಳ್ಳೆಯ ಕೆಲಸವನ್ನು ಮುಂದುವರಿಸಬೇಕೆಂದು ಅವರು ಒತ್ತಾಯಿಸಿದರು.

ಕಾರ್ಯಕ್ರಮಕ್ಕೆ ಮುಖ್ಯ ಭಾಷಣಗಾರರಾಗಿ ಆಗಮಿಸಿದ ಇಂಡಿಯನ್ ಸೋಷಿಯಲ್ ಫೋರಂ ಉತ್ತರ ರಾಜ್ಯಗಳ ಸಂಚಾಲಕ  ಅಫ್ಸರ್ ಉಲ್ ಹಕ್ ಮಾತನಾಡಿ, ಸ್ವಾತಂತ್ರ್ಯ ದಿನದ ಸಂದೇಶವನ್ನು ನೀಡಿದರು. 'ವೈವಿಧ್ಯತೆಯ ಏಕತೆ' ಎಂಬ ಪರಿಕಲ್ಪನೆಯ ಆಧಾರದ ಮೇಲೆ ಭಾರತ ರಚನೆಯಾಯಿತು ಮತ್ತು ಅದು ಸುರಕ್ಷಿತವಾಗಿ ಕಾಪಾಡೋದು ಪ್ರತಿ ಭಾರತೀಯರ ಜವಾಬ್ದಾರಿಯಾಗಿದೆ, ರಾಷ್ಟ್ರದಲ್ಲೇ ಬೆಳೆಯುತ್ತಿರುವ ಅಭದ್ರತೆ ಮತ್ತು ಏಕತೆಯ ಕೊರತೆಯ ಬಗ್ಗೆ ಅವರು ಆತಂಕ ವ್ಯಕ್ತಪಡಿಸಿದ್ದಾರೆ. ಬ್ರಿಟಿಷ್ ಆಳ್ವಿಕೆಯಿಂದ ಭಾರತವನ್ನು ಮುಕ್ತಗೊಳಿಸುವಲ್ಲಿ ಮುಂಚೂಣಿಯಲ್ಲಿದ್ದವರಿಗೆ ರಾಷ್ಟ್ರೀಯತಾವಾದದ ಪಾಠವನ್ನು ಬೋಧಿಸುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ.

ಭಾಷಣ, ಆಲೋಚನೆಯನ್ನು ವ್ಯಕ್ತಪಡಿಸಲು ಸ್ವಾತಂತ್ರ್ಯವನ್ನು ಪ್ರಗತಿಪರ ಚಿಂತಕರು ಮತ್ತು ಸಾಮಾಜಿಕ ಕಾರ್ಯಕರ್ತರನ್ನು ಕೊಲ್ಲುವ ಮೂಲಕ ಕ್ರಮಬದ್ಧವಾಗಿ ಕಚ್ಚಾಟ ಮಾಡಲಾಗುತ್ತಿದೆ, ಆಡಳಿತ ಸರ್ಕಾರಕ್ಕೆ ವಿರುದ್ಧವಾಗಿ ಮಾತನಾಡುವ ಯಾರಾದರೂ. ನಮ್ಮ ಪ್ರಜಾಸತ್ತಾತ್ಮಕ ಮತ್ತು ಸಾಂವಿಧಾನಿಕ ಮೌಲ್ಯಗಳಿಗೆ ವಿರುದ್ಧವಾಗಿರುವ ರಾಷ್ಟ್ರ-ವಿರೋಧಿ ಎಂದು ಕರೆಯಲ್ಪಡುತ್ತಿದೆ. ಹಸುವಿನ ಮತ್ತು ಮಕ್ಕಳ ಕಳ್ಳಸಾಗಣೆ ಹೆಸರಿನಲ್ಲಿ ನಡೆಯುತ್ತಿರುವ ಸಾಮೂಹಿಕ ಹತ್ಯೆಗಳು ವಿದೇಶಗಳ ಮುಂದೆ ಇಡೀ ಭಾರತವನ್ನು ಮುಜುಗರಕ್ಕೀಡು  ಮಾಡುತ್ತಿದೆ. ಪ್ರಸ್ತುತ ಸರ್ಕಾರಕ್ಕೆ ಮುಂಬರುವ ಚುನಾವಣೆಗಳಲ್ಲಿ ಪ್ರಸ್ತುತಪಡಿಸಲು ಭಾರತದಲ್ಲಿ ಯಾವುದೇ ಅಭಿವೃದ್ಧಿಯ ಕಾರ್ಯಗಳಿಲ್ಲ. ಆದ್ದರಿಂದ ಅವರು ಭಾರತವನ್ನು ಧಾರ್ಮಿಕ ರೇಖೆಗಳಲ್ಲಿ ವಿಭಜಿಸಿ ಮತಗಳನ್ನು ಪಡೆಯುವ ಷಡ್ಯಂತ್ರ ನಡೆಯುತ್ತಿದೆ ಅಂತಹ ಬಲೆಗಳನ್ನು ಬೀಳದಂತೆ ಜನರಿಗೆ ಮನವಿ ಮಾಡಿದರು.

ಕಾರ್ಯಕ್ರಮಕ್ಕೆ ಮುಖ್ಯ ಅಥಿಗಳಾಗಿ ಆಗಮಿಸಿದ ಅಲಿಗಢ್ ಮುಸ್ಲಿಂ ಯೂನಿವರ್ಸಿಟಿ ಹಳೆ ವಿದಾರ್ಥಿ ಸಂಘದ ಅಧ್ಯಕ್ಷ ಇಂಜಿನಿಯರ್ ಸಲ್ಮಾನ್ ಖಾಲಿದ್ , ಇಂಡಿಯಾ ಫ್ರೆಟರ್ನಿಟಿ  ಫೋರಂ ಝೋನಲ್ ಸಮಿತಿ ಅಧ್ಯಕ್ಷ ಬಷೀರ್ ಇಂಗಾಪುಝ , ಏರ್ ಇಂಡಿಯಾ ಏರ್ಪೋರ್ಟ್ ಮ್ಯಾನೇಜರ್  ಮರಿಯಪ್ಪನ್, L&T ಕಂಪನಿಯ ಉಪಾಧ್ಯಕ್ಷ ಶ್ರೀನಿವಾಸನ್, ಕಿದ್ಮ ಫೌಂಡೇಶನ್ ಕುಂದಾಪುರ ಇದರ ಉಪಾಧ್ಯಕ್ಷ ಮೊಹಮ್ಮದ್ ಹನೀಫ್ ಶೈಖ್, ಅಜ್ಮಲ್ PV ಅಧ್ಯಕ್ಷರು MES , ಅರಬ್ ನ್ಯೂಸ್   ಇದರ ಪ್ರಮುಖರಾದ  ಕೆ ಎನ್ ವಾಸಿಫ್ , ಮೀಡಿಯಾ ಫೋರಮ್ ಇದರ ಅಧ್ಯಕ್ಷ ಉಬೈದ್ ಇಡವನ್ನ ಇವರು ಎಲ್ಲಾ ಅನಿವಾಸಿ ಭಾರತೀಯರಿಗೆ ಸ್ವಾತಂತ್ರ್ಯ ದಿನದ ಶುಭಹಾರೈಸಿ ಸಂದೇಶವನ್ನು ನೀಡಿದರು. ವಿವಿಧ ರಾಜ್ಯಗಳ ಮುಖಂಡರನ್ನು ಒಂದೇ ವೇದಿಕೆಯಲ್ಲಿ ಒಟ್ಟು ಸೇರಿಸಿದ ಇಂಡಿಯನ್ ಸೋಷಿಯಲ್ ಫೋರಂ ಪ್ರಯತ್ನಕ್ಕೆ ಸಂತಸ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಪ್ರವಾಹಕ್ಕೀಡಾದ ಕೇರಳ ಮತ್ತು ಕರ್ನಾಟಕದ ಜನರಿಗೆ ವಿಶೇಷ ಪ್ರಾರ್ಥನೆಗಾಗಿ  ಕೋರಲಾಯಿತು.  ರಾಷ್ಟ್ರಗೀತೆಯನ್ನು ಹಾಡೋದರೊಂದಿಗೆ ಕಾರ್ಯಕ್ರಮವು ಮುಕ್ತಾಯವಾಯಿತು.

ಕಾರ್ಯಕ್ರಮಕ್ಕೆ  ಸೋಷಿಯಲ್ ಫೋರಂ ಕೇಂದ್ರ ಸಮಿತಿ ಪ್ರಧಾನ ಕಾರ್ಯದರ್ಶಿ ಬಷೀರ್ ಕಾರಂದೂರ್ ಕೇರಳ ಸ್ವಾಗತಿಸಿ,  ಕೇಂದ್ರ ಸಮಿತಿ ಸದಸ್ಯರಾದ ರಶೀದ್ ಕಾಸಿಮಿ ಕೇರಳ ವಂದಿಸಿದರು. ಕಾರ್ಯಕ್ರಮವನ್ನು ಅಬ್ದುಲ್ ಬಷೀರ್ ಕೇರಳ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X