ಆ.19: ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗೆ ಸಚಿವ ದೇಶಪಾಂಡೆ ಭೇಟಿ

ಬೆಂಗಳೂರು, ಆ. 18: ಭಾರೀ ಮಳೆ-ಪ್ರವಾಹದಿಂದ ಹಾನಿಗೊಳಗಾಗಿರುವ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಗೆ ಕಂದಾಯ ಸಚಿವ ಆರ್.ವಿ.ದೇಶಪಾಂಡೆ ನಾಳೆ(ಆ.19) ಖುದ್ದು ಭೇಟಿ ನೀಡಿ ಪರಿಸ್ಥಿತಿಯನ್ನು ಅವಲೋಕಿಸಲಿದ್ದಾರೆ.
ತೀವ್ರ ಸ್ವರೂಪದ ಮಳೆ ಕೊರತೆಯಿಂದ ಬರದ ಛಾಯೆಗೆ ಸಿಲುಕಿರುವ ಕೋಲಾರ ಜಿಲ್ಲೆಗೆ ಆ.21ರ ಮಂಗಳವಾರದಂದು ದೇಶಪಾಂಡೆ ಪ್ರವಾಸ ಕೈಗೊಳ್ಳಲಿದ್ದಾರೆ. ಆ.19ರ ಬೆಳಗ್ಗೆ 9.30ಕ್ಕೆ ಮಂಗಳೂರನ್ನು ತಲುಪಲಿರುವ ಕಂದಾಯ ಸಚಿವರು, ಸಾರ್ವಜನಿಕರನ್ನು ಭೇಟಿಯಾಗಿ ಅವರ ಸಮಸ್ಯೆಗಳನ್ನು ಆಲಿಸಲಿದ್ದಾರೆ. ಬಳಿಕ, ಸೂಕ್ತ ಪರಿಹಾರೋಪಾಯಗಳಿಗಾಗಿ ಅಧಿಕಾರಿಗಳೊಂದಿಗೆ ಚರ್ಚಿಸಲಿದ್ದಾರೆ. ಉಡುಪಿ ಜಿಲ್ಲೆಯಲ್ಲಿ ಮಧ್ಯಾಹ್ನ 2.30ಕ್ಕೆ ಸಭೆ ನಡೆಸಲಿದ್ದಾರೆ ಎಂದು ತಿಳಿಸಲಾಗಿದೆ.
ಕೋಲಾರ ಮತ್ತು ಚಿಕ್ಕಬಳ್ಳಾಫುರ ಜಿಲ್ಲೆಗಳಲ್ಲಿ ಮಳೆ ಕೊರತೆ ಕಂಡುಬಂದಿರುವ ಹಿನ್ನೆಲೆಯಲ್ಲಿ ತೆಗೆದುಕೊಳ್ಳಬೇಕಾದ ಮುಂದಿನ ಕ್ರಮ ಮತ್ತು ಪರ್ಯಾಯ ಯೋಜನೆಗಳ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಲಿದ್ದಾರೆ ಎಂದು ಸಚಿವರ ಕಚೇರಿ ಪ್ರಕಟಣೆ ತಿಳಿಸಿದೆ.
Next Story





