Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ವಾಜಪೇಯಿ ಬಗ್ಗೆ ಟೀಕೆ: ಮನೆಯಿಂದ...

ವಾಜಪೇಯಿ ಬಗ್ಗೆ ಟೀಕೆ: ಮನೆಯಿಂದ ಹೊರಗೆಳೆದು ಪ್ರೊಫೆಸರ್‌ಗೆ ಹಲ್ಲೆ

ವಾರ್ತಾಭಾರತಿವಾರ್ತಾಭಾರತಿ18 Aug 2018 9:45 PM IST
share
ವಾಜಪೇಯಿ ಬಗ್ಗೆ ಟೀಕೆ: ಮನೆಯಿಂದ ಹೊರಗೆಳೆದು ಪ್ರೊಫೆಸರ್‌ಗೆ ಹಲ್ಲೆ

ಪಾಟ್ನ, ಆ.18: ಮಾಜಿ ಪ್ರಧಾನಿ ದಿವಂಗತ ಅಟಲ್ ಬಿಹಾರಿ ವಾಜಪೇಯಿ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಟೀಕೆ ಮಾಡಿದ್ದಾರೆ ಎಂಬ ಕಾರಣಕ್ಕೆ ಬಿಹಾರದ ಮೋತಿಹರಿ ಸೆಂಟ್ರಲ್ ವಿವಿಯ ಪ್ರೊಫೆಸರ್ ಮೇಲೆ ಗುಂಪೊಂದು ಹಲ್ಲೆ ನಡೆಸಿರುವುದಾಗಿ ಆರೋಪಿಸಲಾಗಿದೆ.

ಮೂರನೇ ಮಹಡಿಯಲ್ಲಿರುವ ತನ್ನ ಮನೆಯಿಂದ ತನ್ನನ್ನು ಹೊರಗೆಳೆದು ತಂದ ಗುಂಪೊಂದು ತೀವ್ರವಾಗಿ ಥಳಿಸಿದ್ದು ಜೀವಂತ ದಹಿಸಲೂ ಮುಂದಾಗಿದ್ದರು ಎಂದು ಪ್ರೊ ಸಂಜಯ್ ಕುಮಾರ್ ತಿಳಿಸಿದ್ದಾರೆ. ತೀವ್ರವಾಗಿ ಗಾಯಗೊಂಡಿದ್ದ ಅವರನ್ನು ಸಮೀಪದ ಆಸ್ಪತ್ರೆಗೆ ಕೊಂಡೊಯ್ದು ಪ್ರಾಥಮಿಕ ಚಿಕಿತ್ಸೆ ನೀಡಿದ ಬಳಿಕ ಪಾಟ್ನಾದ ಎಐಐಎಂಎಸ್‌ಗೆ ಸ್ಥಳಾಂತರಿಸಲಾಗಿದೆ ಎಂದು ವರದಿಯಾಗಿದೆ.

ವಾಜಪೇಯಿ ವಿರುದ್ಧ ಟೀಕೆ ಮಾಡಿರುವುದಲ್ಲದೆ ವಿವಿಯ ಉಪಕುಲಪತಿ ವಿರುದ್ಧ ಈ ಹಿಂದೆ ಟೀಕೆ ಮಾಡಿರುವ ಬಗ್ಗೆ ತನ್ನನ್ನು ತರಾಟೆಗೆತ್ತಿಕೊಂಡ ಗುಂಪು ತೀವ್ರವಾಗಿ ಥಳಿಸಿದೆ. ಉಪಕುಲಪತಿ ವಿರುದ್ಧ ಪ್ರತಿಭಟನೆ ನಡೆಸದಂತೆ ತಿಳಿಸಿದ್ದ ಕೆಲವರು ಹಲ್ಲೆಗೆ ಮೊದಲು ತನಗೆ ದೂರವಾಣಿ ಕರೆ ಮಾಡಿ ಜೀವಬೆದರಿಕೆ ಒಡ್ಡಿದ್ದರು ಎಂದು ಸಂಜಯ್ ಕುಮಾರ್ ತಿಳಿಸಿದ್ದಾರೆ.

ವಿವಿಯ ಬೋಧಕರ ನೇಮಕಾತಿ ಸಂದರ್ಭ ಮೀಸಲಾತಿ ನೀಡುವ ವಿಷಯದಲ್ಲಿ ವಿವಿಯ ಆಡಳಿತ ಮಂಡಳಿಯ ನಿರ್ಧಾರವನ್ನು ವಿರೋಧಿಸಿ ಮೇ 29ರಂದು ಅಧ್ಯಾಪಕರ ಒಂದು ವರ್ಗ ಧರಣಿ ಪ್ರತಿಭಟನೆ ನಡೆಸಿತ್ತು. ಆ ಬಳಿಕ ಉಪಕುಲಪತಿ ಹಾಗೂ ಕೆಲವು ಪ್ರೊಫೆಸರ್ ಮಧ್ಯೆ ಭಿನ್ನಾಭಿಪ್ರಾಯ ಮೂಡಿತ್ತು ಎನ್ನಲಾಗಿದೆ. ಈ ಪ್ರತಿಭಟನೆಗೂ ಪ್ರೊಫೆಸರ್ ಕುಮಾರ್ ಮೇಲಿನ ಹಲ್ಲೆ ಪ್ರಕರಣಕ್ಕೂ ಸಂಬಂಧವಿರಬಹುದು ಎಂದು ಕುಮಾರ್ ಅವರ ಸಹೋದ್ಯೋಗಿ ಮೃತ್ಯುಂಜಯ್ ಯಾದವ್ ಹೇಳಿದ್ದಾರೆ. ಉಪಕುಲಪತಿ ಹುದ್ದೆಗೆ ಆಯ್ಕೆಯಾಗುವಾಗ ಅವರು ತಾವು ಜರ್ಮನಿ ವಿವಿಯಿಂದ ಪಿಎಚ್‌ಡಿ ಪಡೆದಿರುವುದಾಗಿ ಹೇಳಿದ್ದರು. ಆದರೆ ಅವರು ರಾಜಸ್ತಾನದ ಕಾಲೇಜಿನಿಂದ ಪದವಿ ಪಡೆದಿರುವುದು ನಂತರ ತಿಳಿದುಬಂದಿದೆ. ಅವರು ಹೇಳಿರುವ ಸುಳ್ಳಿನ ಬಗ್ಗೆ ಪ್ರಶ್ನಿಸಿರುವುದಕ್ಕೆ ಕೆಲವು ಪ್ರೊಫೆಸರ್‌ಗಳ ವಿರುದ್ಧ ಸೇಡಿನ ಭಾವನೆ ಹೊಂದಿದ್ದಾರೆ ಎಂದು ಯಾದವ್ ದೂರಿದ್ದಾರೆ.

ಪ್ರೊಫೆಸರ್‌ಗೆ ಹಲ್ಲೆ ನಡೆಸಿರುವುದು ಖಂಡನೀಯ. ಆರೆಸ್ಸೆಸ್ ಬೆಂಬಲಿತ ಉಪಕುಲಪತಿಯ ಪರವಾಗಿ ಆರೆಸ್ಸೆಸ್ ಗೂಂಡಾಗಳು ಹಲ್ಲೆ ನಡೆಸಿದ್ದಾರೆ. ಪ್ರೊಫೆಸರ್ ಮೇಲೆ ಪೆಟ್ರೋಲ್ ಸುರಿದು ದಹಿಸಲೂ ಯತ್ನಿಸಿದ್ದಾರೆ. ಇಷ್ಟಾದರೂ ಬಿಹಾರ ಸರಕಾರ ಸುಮ್ಮನಿದೆ ಎಂದು ಆರ್‌ಜೆಡಿ ಮುಖಂಡ ತೇಜಸ್ವಿ ಯಾದವ್ ಟೀಕಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X