Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಪ್ರವಾಹಕ್ಕೆ ಸಿಲುಕಿದ ಜನರ ರಕ್ಷಣೆಯೇ...

ಪ್ರವಾಹಕ್ಕೆ ಸಿಲುಕಿದ ಜನರ ರಕ್ಷಣೆಯೇ ನಮ್ಮ ಮೊದಲ ಆದ್ಯತೆ: ಸಚಿವ ದೇಶಪಾಂಡೆ

ವಾರ್ತಾಭಾರತಿವಾರ್ತಾಭಾರತಿ18 Aug 2018 11:00 PM IST
share
ಪ್ರವಾಹಕ್ಕೆ ಸಿಲುಕಿದ ಜನರ ರಕ್ಷಣೆಯೇ ನಮ್ಮ ಮೊದಲ ಆದ್ಯತೆ: ಸಚಿವ ದೇಶಪಾಂಡೆ

ಮೈಸೂರು,ಆ.18: ಜನರ ರಕ್ಷಣೆಯಷ್ಟೇ ನಮ್ಮ ಮೊದಲ ಆದ್ಯತೆಯಾಗಿದ್ದು, ಪರಿಹಾರ ವಿತರಣೆ ಬಗ್ಗೆ ಮುಂದಿನ ಹಂತದಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಕಂದಾಯ ಸಚಿವ ಆರ್.ವಿ.ದೇಶಪಾಂಡೆ ತಿಳಿಸಿದರು.

ನಂಜನಗೂಡಿನ ಪ್ರವಾಹ ಸ್ಥಳಕ್ಕೆ ಶನಿವಾರ ಭೇಟಿ ನೀಡಿದ ವೇಳೆ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಕೊಡಗಿನಲ್ಲಿ ಭಾರಿ ಪ್ರಮಾಣದ ಮಳೆಯಾಗಿದೆ. ಪರಿಣಾಮ ನೂರಾರು ಜನ ಸಂಪರ್ಕ ಕಳೆದುಕೊಂಡಿದ್ದಾರೆ. ಹವಾಮಾನ ವೈಪರೀತ್ಯದಿಂದಾಗಿ ರಕ್ಷಣಾ ಕಾರ್ಯಕ್ಕೂ ತೊಡಕು ಉಂಟಾಗಿದೆ. ಈಗಾಗಲೇ ಸೇನಾ ಹೆಲಿಕಾಪ್ಟರ್ ಸೇನಾ ಸಿಬ್ಬಂದಿ ಹಲವರನ್ನು ರಕ್ಷಿಸಿದ್ದಾರೆ. ಕಾರವಾರದಿಂದ ನೌಕಾ ಸಿಬ್ಬಂದಿಗಳನ್ನು ಕರೆಸಿಕೊಳ್ಳುತ್ತಿದ್ದೇವೆ. ಬೋಟ್‍ಗಳ ಮೂಲಕ ಮತ್ತಷ್ಟು ಜನರನ್ನು ರಕ್ಷಣೆ ಮಾಡಲಿದ್ದೇವೆ. ಜಮೀನುಗಳ ತುಂಬಾ ನೀರು ನಿಂತಿರುವ ಕಾರಣದಿಂದಾಗಿ ಬೆಳೆ ಹಾನಿ ಅಂದಾಜು ಮಾಡಲು ಸಾಧ್ಯವಾಗುತ್ತಿಲ್ಲ. ಡ್ರೋನ್ ಕ್ಯಾಮರಾ ಮೂಲಕ ಬೆಳೆಹಾನಿ ಸಮೀಕ್ಷೆ ನಡೆಸಲು ಅಧಿಕಾರಿಗಳಿಗೆ ಸೂಚಿಸಿದ್ದೇವೆ ಎಂದರು.

ಮೈಸೂರು ಜಿಲ್ಲೆಯಲ್ಲೂ ನೀರಿನ ಹೊರ ಹರಿವಿನಿಂದಾಗಿ ಅಪಾರ ಪ್ರಮಾಣದ ಬೆಳೆ ಹಾನಿಯಾಗಿದೆ. ರಾಜ್ಯದ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಖಾತೆಯಲ್ಲಿ ಕೋಟ್ಯಾಂತರ ರೂಪಾಯಿ ಹಣ ಇದೆ. ಹಣಕ್ಕೆ ನಮ್ಮಲ್ಲಿ ಕೊರತೆ ಇಲ್ಲ. ಪ್ರವಾಹ ಪರಿಹಾರಕ್ಕಾಗಿ ಹೆಚ್ಚಿನ ಅನುದಾನ ನೀಡಲು ಶೀಘ್ರದಲ್ಲೇ  ಮನವಿ ಮಾಡುತ್ತೇವೆ ಎಂದು ಹೇಳಿದರು.

ಸಚಿವದ್ವಯರ ಭೇಟಿ: ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡ, ಕಂದಾಯ ಮತ್ತು ಕೌಶಲಾಭಿವೃದ್ಧಿ ಸಚಿವ ಆರ್.ವಿ.ದೇಶಪಾಂಡೆ ಕಪಿಲಾ ನದಿಯ ಪ್ರವಾಹಕ್ಕೆ ಸಿಲುಕಿದ ನಂಜನಗೂಡಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಬೆಳಿಗ್ಗೆ ಕಪಿಲಾ ನದಿಯ ಪ್ರವಾಹದಿಂದ ಹಾನಿಗೊಳಗಾದ ನಂಜನಗೂಡು ತಾಲೂಕಿನ ಮಲ್ಲನಮೂಲೆ ಮಠ, ಮುಡಿಕಟ್ಟೆ, ತೋಪಿನ ಬೀದಿ, ತೇರಿನ ಬೀದಿ, ಹಳ್ಳದಕೇರಿ, ಒಕ್ಕಲಗೇರಿ, ಸರಸ್ವತಿ ಕಾಲೋನಿ, ಹೆಜ್ಜಿಗೆ ಸೇತುವೆ, ಬೊಕ್ಕಹಳ್ಳಿ, ಕುಳ್ಳಂಕನ ಹುಂಡಿ, ಸುತ್ತೂರುಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಇದೇ ವೇಳೆ ಗಂಜಿ ಕೇಂದ್ರಕ್ಕೂ ಭೇಟಿ ನೀಡಿ, ಅಧಿಕಾರಿಗಳಿಂದ ಸಮಗ್ರ ಮಾಹಿತಿ ಪಡೆದುಕೊಂಡರು. 

ಈ ಸಂದರ್ಭ ಶಾಸಕರಾದ ಹರ್ಷವರ್ಧನ್, ಡಾ.ಯತಿಂದ್ರ ಸಿದ್ದರಾಮಯ್ಯ, ಮಾಜಿ ಶಾಸಕ ವಾಸು, ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಮಿತ್ ಸಿಂಗ್, ತಹಶೀಲ್ದಾರ್ ದಯಾನಂದ, ಕೆಪಿಸಿಸಿ ಸದಸ್ಯ ಅಕ್ಬರ್ ಅಲೀಂ, ತಾ.ಪಂ.ಉಪಾಧ್ಯಕ್ಷ ಗೋವಿಂದರಾಜನ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X