Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಸಿನಿಮಾ
  4. ಆಮಿರ್ ಖಾನ್ ಗರಡಿಯಲ್ಲಿ ಪಳಗಿರುವ ಸಾನ್ಯಾ

ಆಮಿರ್ ಖಾನ್ ಗರಡಿಯಲ್ಲಿ ಪಳಗಿರುವ ಸಾನ್ಯಾ

ವಾರ್ತಾಭಾರತಿವಾರ್ತಾಭಾರತಿ19 Aug 2018 9:58 AM IST
share
ಆಮಿರ್ ಖಾನ್ ಗರಡಿಯಲ್ಲಿ ಪಳಗಿರುವ ಸಾನ್ಯಾ

ಮಲ್ಹೋತ್ರಾಳ ಎರಡನೇ ಸಿನೆಮಾ ಪಟಾಕಾ ಬಿಡುಗಡೆಗೆ ಸಿದ್ಧವಾಗಿದ್ದು ಚಿತ್ರದ ಟ್ರೈಲರ್ ಮಂಗಳವಾರ ಸಾಮಾಜಿಕ ಮಾಧ್ಯಮಗಳಲ್ಲಿ ಬಿಡುಗಡೆ ಮಾಡ ಲಾಯಿತು. ಚಿತ್ರದ ಟ್ರೈಲರ್ ವೈರಲ್ ಆಗುತ್ತಿದ್ದಂತೆ ಈ ಕುರಿತು ಟ್ವೀಟ್ ಮಾಡಿದ ಆಮಿರ್ ಖಾನ್, ಸಾನ್ಯಾ ಮತ್ತು ಸಿನೆಮಾಕ್ಕೆ ಶುಭ ಕೋರಿದ್ದಾರೆ. ಸಾನ್ಯಾ ಮಲ್ಹೋತ್ರಾ 2016ರಲ್ಲಿ ಬಿಡುಗಡೆಯಾದ ಆಮಿರ್ ಖಾನ್ ಅಭಿನಯದ ‘ದಂಗಲ್’ ಸಿನೆಮಾದಲ್ಲಿ ಆತನ ಮಗಳ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಕುಸ್ತಿಪಟು ಮಹಾವೀರ್ ಪೋಗಟ್ ಅವರ ಜೀವನಕತೆಯನ್ನು ಹೊಂದಿರುವ ಈ ಸಿನೆಮಾದಲ್ಲಿ ಸಾನ್ಯಾ ಪೋಗಟ್ ಅವರ ಎರಡನೇ ಮಗಳು ಬಬಿತಾಳ ಪಾತ್ರವನ್ನು ನಿಭಾಯಿಸಿದ್ದರು.

ಅಷ್ಟು ಮಾತ್ರವಲ್ಲ, ದಂಗಲ್ ನಂತರ ಬಿಡುಗಡೆಯಾದ ಆಮಿರ್ ಖಾನ್‌ರ ಸೀಕ್ರೆಟ್ ಸೂಪರ್‌ಸ್ಟಾರ್ ಚಿತ್ರದಲ್ಲಿರುವ ಒಂದು ಹಾಡಿಗೆ ಸಾನ್ಯಾ 53ರ ಹರೆಯದ ನಟನಿಗೆ ನೃತ್ಯ ಕೂಡಾ ಕಲಿಸಿದ್ದರು. ಬಾಲಿವುಡ್‌ನಲ್ಲಿ ವಿಭಿನ್ನ ಅಭಿರುಚಿಯ ಸಿನೆಮಾಗಳನ್ನು ನಿರ್ದೇಶಿಸುವ ವಿಶಾಲ್ ಭಾರದ್ವಾಜ್ ಪಟಾಕಾ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಈ ಸಿನೆಮಾ ಎರಡು ಸಹೋದರಿಯರ ಕತೆಯನ್ನು ಹೊಂದಿದೆ. ಈ ಇಬ್ಬರು ಸಹೋದರಿಯರು ಸದಾ ಜಗಳವಾಡುತ್ತಲೇ ಇರುತ್ತಾರೆ. ಸಾನ್ಯಾ ಮತ್ತು ರಾಧಿಕಾ ಮದನ್ ಈ ಪಾತ್ರಗಳಲ್ಲಿ ನಟಿಸಿದ್ದಾರೆ. ಸಹೋದರಿಯರ ಜಗಳದಿಂದ ರೋಸಿ ಹೋಗುವ ಅವರ ತಂದೆ ಅವರಲ್ಲಿ ಒಬ್ಬಾಕೆಗೆ ಗ್ರಾಮದ ಶ್ರೀಮಂತ ವ್ಯಕ್ತಿಯ ಜೊತೆ ವಿವಾಹ ಮಾಡಲು ಮುಂದಾಗುತ್ತಾರೆ. ಆದರೆ ಆ ವ್ಯಕ್ತಿಯನ್ನು ಇಬ್ಬರು ಸಹೋದರಿಯರೂ ನಿರಾಕರಿಸುತ್ತಾರೆ ಮತ್ತು ಮನೆಯಿಂದ ಓಡಿಹೋಗಿ ತಮ್ಮಿಷ್ಟದ ಯುವಕರನ್ನು ವಿವಾಹವಾಗುತ್ತಾರೆ. ಆದರೆ ನಂತರವೇ ಅವರಿಗೆ ನಾವು ಈಗ ಪರಸ್ಪರ ನಾದಿನಿಯರಾಗಿದ್ದೇವೆ ಎಂಬುದು ತಿಳಿಯುತ್ತದೆ. ಮಕ್ಬೂಲ್, ಕಮೀನೆ, ಓಂಕಾರ, ಹೈದರ್‌ನಂಥ ಸಿನೆಮಾಗಳನ್ನು ನೀಡಿರುವ ವಿಶಾಲ್ ಭಾರದ್ವಾಜ್ ಈ ಬಾರಿ ಮತ್ತೊಂದು ವಿಭಿನ್ನ ಚಿತ್ರಕತೆಯುಳ್ಳ ಸಿನೆಮಾವನ್ನು ನಿರ್ದೇಶಿಸಲು ಮುಂದಾಗಿದ್ದಾರೆ. ಅವರ ಕೊನೆಯ ನಿರ್ದೇಶನದ ಚಿತ್ರ ರಂಗೂನ್ ಪ್ರೇಕ್ಷಕರ ಮನ ಗೆಲ್ಲುವಲ್ಲಿ ವಿಫಲವಾಗಿತ್ತು. ಪಟಾಕಾ ಯಾವ ರೀತಿಯ ಪರಿಣಾಮ ಬೀರುತ್ತದೆ ಎಂದು ಕಾದು ನೋಡಬೇಕಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X