Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಅತಿವೃಷ್ಟಿ ಹಾನಿ; ಮಂದಗತಿಯ ಪರಿಹಾರ :...

ಅತಿವೃಷ್ಟಿ ಹಾನಿ; ಮಂದಗತಿಯ ಪರಿಹಾರ : ಸರಕಾರದ ವಿರುದ್ಧ ಬಿಎಸ್‍ವೈ ಅಸಮಾಧಾನ

ವಾರ್ತಾಭಾರತಿವಾರ್ತಾಭಾರತಿ19 Aug 2018 5:16 PM IST
share
ಅತಿವೃಷ್ಟಿ ಹಾನಿ; ಮಂದಗತಿಯ ಪರಿಹಾರ : ಸರಕಾರದ ವಿರುದ್ಧ ಬಿಎಸ್‍ವೈ ಅಸಮಾಧಾನ

ಮಡಿಕೇರಿ, ಆ.19 :ಅತಿವೃಷ್ಟಿಯಿಂದ ಕೊಡಗು ಜಿಲ್ಲಾ ವ್ಯಾಪ್ತಿಯಲ್ಲಿ ಅಪಾರ ಹಾನಿ ಸಂಭವಿಸಿದ್ದರೂ ರಾಜ್ಯ ಸರ್ಕಾರ ಪರಿಹಾರ ಕಾರ್ಯಗಳನ್ನು ನಡೆಸುವಲ್ಲಿ ಮಂದಗತಿಯ ಧೋರಣೆಯನ್ನು ಅನುಸರಿಸುತ್ತಿದೆ ಎಂದು ವಿರೋಧ ಪಕ್ಷದ ನಾಯಕ ಬಿ.ಎಸ್.ಯಡಿಯೂರಪ್ಪ ಆರೋಪಿಸಿದ್ದಾರೆ. ಮಳೆಯ ಪ್ರಮಾಣ ಇಳಿಮುಖಗೊಂಡ ಬಳಿಕ ಸಂತ್ರಸ್ತರಿಗೆ ಶಾಶ್ವತ ಪರಿಹಾರ ಕಾರ್ಯಗಳಿಗೆ ಸರಕಾರ ಮುಂದಾಗಬೇಕೆಂದು ಅವರು ಆಗ್ರಹಿಸಿದ್ದಾರೆ.

ಅತಿವೃಷ್ಟಿ ಪೀಡಿತ ಸುಂಟಿಕೊಪ್ಪ ವಿಭಾಗಗಳಿಗೆ ಭೇಟಿ ನೀಡಿ ಮಡಿಕೇರಿಗೆ ಆಗಮಿಸಿದ ಯಡಿಯೂರಪ್ಪ ಅವರು, ಜಿಲ್ಲಾಡಳಿತ ಭವನದಲ್ಲಿ ಜಿಲ್ಲಾಧಿಕಾರಿಗಳಿಂದ ಮಳೆಹಾನಿಯ ಬಗ್ಗೆ ಮಾಹಿತಿ ಪಡೆದರು. ನಂತರ ಮಾತನಾಡಿದ ಅವರು, ಪುನರ್ವಸತಿ ಕೇಂದ್ರಗಳಲ್ಲಿ ಉಟ್ಟ ಬಟ್ಟೆಯಲ್ಲೆ ಮನೆ ತೊರೆದು ಬಂದ ನಿರಾಶ್ರಿತರಿಗೆ ಮಳೆ ಕಳೆದ ಕೂಡಲೆ ತಾತ್ಕಾಲಿಕ ನೆಲೆಯನ್ನು ಒದಗಿಸಬೇಕು. ತಿಂಗಳ ಬಳಿಕ ಸಂತ್ರಸ್ತರಿಗೆ ಮನೆಗಳ ನಿರ್ಮಾಣ ಕಾರ್ಯಕ್ಕೆ ಮುಂದಾಗಬೇಕಾಗಿದೆ ಎಂದು ತಿಳಿಸಿದರು.

ಪುನರ್ವಸತಿ ಕೇಂದ್ರಗಳಿಗೆ ತೆರಳಿದ ಸ್ಥಳಗಳಲ್ಲಿ ಅಲ್ಲಿನ ಸಂತ್ರಸ್ತರು, ತಮ್ಮ ಸಂಕಷ್ಟಗಳಿಗೆ ಸರ್ಕಾರ ಧಾವಿಸಿ ರಕ್ಷಣೆಯನ್ನು ಒದಗಿಸಿಲ್ಲ ಎನ್ನುವ ಅಸಮಾಧಾನವನ್ನು ಹೊಂದಿರುವುದಾಗಿ ತಿಳಿಸಿದ ಯಡಿಯೂರಪ್ಪ, ಸಂತ್ರಸ್ತರಿಗೆ ಅತಿವೃಷ್ಟಿಯ ಪರಿಸ್ಥಿತಿ ತಿಳಿಗೊಂಡ ಬಳಿಕ ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಹಕಾರದೊಂದಿಗೆ ಮನೆಗಳನ್ನು ನಿರ್ಮಿಸಿಕೊಟ್ಟು ನೆಲೆ ಒದಗಿಸಬೇಕಾಗಿದೆಯೆಂದು ತಿಳಿಸಿ, ತಿಂಗಳ ಒಳಗಾಗಿ ಸಂತ್ರಸ್ತರಿಗೆ ಮನೆಗಳನ್ನು ನಿರ್ಮಿಸಿಕೊಡುವುದಕ್ಕೆ ಪೂರಕವಾದ ಜಾಗವನ್ನು ಗುರುತಿಸುವ ಕಾರ್ಯ ನಡೆಸುವಂತೆ ಜಿಲ್ಲಾಧಿಕಾರಿಗಳಿಗೆ ಇದೇ ಸಂದರ್ಭ ಸೂಚನೆಯನ್ನು ನೀಡಿದರು.

ಆಹಾರ ಕಳುಹಿಸುವುದು ಬೇಡ
ಮುಂಗಾರಿನ ಆರ್ಭಟದಿಂದ ಕೊಡಗು ನಲುಗಿದ್ದು, ಇಲ್ಲಿ ಸಂತ್ರಸ್ತರಿಗೆ ನೆರವು ನೀಡಲು ದಾನಿಗಳ ಯಾವುದೇ ಕೊರತೆ ಇಲ್ಲ. ಈಗಾಗಲೆ ಅಗತ್ಯ ಮೀರಿ ಹೊರ ಜಿಲ್ಲೆಗಳಿಂದ ಆಹಾರ ಸಾಮಗ್ರಿಗಳನ್ನು ಮನ ಬಂದಂತೆ ಕಳುಹಿಸಲಾಗುತ್ತಿದೆ. ಇದನ್ನು ಸಮಪರ್ಕವಾಗಿ ವಿತರಿಸಲೂ ಸಾಧ್ಯವಿಲ್ಲವಾಗಿದ್ದು, ಬೇಡಿಕೆಗೆ ತಕ್ಕಂತೆ ಮಾತ್ರ ಆಹಾರವನ್ನು ಕಳುಹಿಸುವಂತೆ ನಾಡಿನ ಜನತೆಯಲ್ಲಿ ಮನವಿ ಮಾಡಿದ ಯಡಿಯೂರಪ್ಪ ಅವರು, ಅಳತೆ ಮೀರಿ ಕಳುಹಿಸುವ ಚಪಾತಿ, ಬ್ರೆಡ್ ಮೊದಲಾದ ಸಾಮಗ್ರಿಗಳು ಬಳಕೆಗೆ ಬಾರದೆ ಹಾಳಾಗಿ ಹೋಗುವ ಸಾಧ್ಯತೆಗಳೆ ಅಧಿಕವೆಂದು ತಿಳಿಸಿದರು.

ಜಿಲ್ಲೆಯಲ್ಲಿ ಭಾರೀ ಮಳೆಯಿಂದ ಪ್ರಮುಖ ವಾಣಿಜ್ಯಕ ಕೃಷಿ ಕಾಫಿ, ಏಲಕ್ಕಿ ಸೇರಿದಂತೆ ವಿವಿಧ ಕೃಷಿ ಬೆಳೆಗಳಿಗೆ ಅಪಾರ ಹಾನಿ ಸಂಭವಿಸಿದ್ದು, ಈ ಬಗ್ಗೆ ವಿಸ್ತೃತ ವರದಿಯನ್ನು ತಯಾರಿಸಿ, ರಾಜ್ಯ ಸರ್ಕಾರಕ್ಕೆ ಸಲ್ಲಿಸುವ ಮೂಲಕ ಅಗತ್ಯ ಪರಿಹಾರವನ್ನು ಒದಗಿಸುವ ಕಾರ್ಯ ನಡೆಯಬೇಕೆಂದು ಯಡಿಯೂರಪ್ಪ ತಿಳಿಸಿದರು.

ಕಳ್ಳರ ಆತಂಕ
ಈಗಾಗಲೆ ಜಿಲ್ಲೆಯ ಹಲವೆಡೆಗಳಲ್ಲಿ ಭಾರೀ ಮಳೆ ಮತ್ತು ಭೂ ಕುಸಿತದಂತಹ ಘಟನೆಗಳಿಂದ ಸಹಸ್ರಾರು ಮಂದಿ ಮನೆಗಳನ್ನು ತೊರೆದು ಉಟ್ಟ ಬಟ್ಟೆಯಲ್ಲೆ ತಮ್ಮ ಮನೆಯನ್ನು ತೊರೆಯುತ್ತಿದ್ದಾರೆ. ಇಂತಹ ಪರಿಸ್ಥಿತಿಯ ದುರುಪಯೋಗ ಪಡೆದು ಕಳ್ಳತನಗಳು ನಡೆಯುತ್ತಿರುವ ಬಗ್ಗೆ ತನಗೆ ದೂರುಗಳು ಬಂದಿದ್ದು, ಈ ಬಗ್ಗೆ ಜಿಲ್ಲಾಡಳಿತ ಆದ್ಯ ಗಮನ ಹರಿಸಿ ರಕ್ಷಣೆ ಒದಗಿಸಲು ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

ಸಂಸದೆ ಶೋಭಾ ಕರಂದ್ಲಾಜೆ ಮಾತನಾಡಿ, ಕೊಡಗಿನಲ್ಲಿ ಪ್ರಾಕೃತಿಕ ವಿಕೋಪ ಭಾರೀ ಪ್ರಮಾಣದಲ್ಲಿ ನಡೆದಿದ್ದರೂ ಮುಖ್ಯಮಂತ್ರಿಗಳು ಲೆಕ್ಕಕ್ಕೆ ಎಂಬಂತೆ ಬಂದು ತೆರಳಿದ್ದಾರೆದಂದು ಬೇಸರ ವ್ಯಕ್ತಪಡಿಸಿ, ಸಂತ್ರಸ್ತರ ಸಂಕಷ್ಟಗಳಿಗೆ ಸರ್ಕಾರ ಸೂಕ್ತ ಸ್ಪಂದನೆ ನೀಡಿಲ್ಲವೆಂದು ಬೇಸರ ವ್ಯಕ್ತಪಡಿಸಿದರು.

ಜಿಲ್ಲೆಯಲ್ಲಿ ತೆರೆಯಲಾಗಿರುವ ಪುನರ್ವಸತಿ ಕೇಂದ್ರಗಳಲ್ಲಿ ಸಂತ್ರಸ್ತರಿಗೆ ಅಗತ್ಯ ಊಟದ ವ್ಯವಸ್ಥೆಯನ್ನು ಒದಗಿಸಲು ಅಡುಗೆಯವರನ್ನು ನಿಯುಕ್ತಿಗೊಳಿಸುವುದರತ್ತ ಜಿಲ್ಲಾಡಳಿತ ಗಮನ ಹರಿಸುವುದರೊಂದಿಗೆ, ಸ್ವಚ್ಛತೆಗೆ ಹೆಚ್ಚಿನ ಆದ್ಯತೆಯನ್ನು ನೀಡುವುದು, ಮಹಿಳೆಯರಿಗೆ ಅಗತ್ಯ ಶೌಚಾಲಯದ ವ್ಯವಸ್ಥೆಯನ್ನು ಕಲ್ಪಿಸಲು ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದರು.

ಎಂಎಲ್‍ಸಿ ಸುನಿಲ್ ಸುಬ್ರಮಣಿ, ಸಂಸದ ಪ್ರತಾಪ್ ಸಿಂಹ, ಬಿಜೆಪಿ ರಾಜ್ಯ ಕಾರ್ಯದರ್ಶಿ ರಾಜೇಂದ್ರ, ರಾಜ್ಯ ಕಾರ್ಯದರ್ಶಿ ಅಂಬುದಾಸ್ ಸೇರಿದಂತೆ ಹಲವು ಪ್ರಮುಖರು ಉಪಸ್ಥಿತರಿದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X