ಕೇರಳ ಹಾಗೂ ಮಡಿಕೇರಿಗೆ ಕೆಎಸ್ಸಾರ್ಟಿಸಿ ಬಸ್ ಸಂಚಾರ ಪುನರ್ ಆರಂಭ

ಬೆಂಗಳೂರು, ಆ. 19: ಸತತ ಮಳೆ, ಪ್ರವಾಹ ಹಾಗೂ ಗುಡ್ಡ ಕುಸಿತದಿಂದ ರಸ್ತೆ ಸಂಪರ್ಕವಿಲ್ಲದೆ ಸ್ಥಗಿತಗೊಳಿಸಲಾಗಿದ್ದ ಬಸ್ ಸಂಚಾರ ಸೇವೆಯನ್ನು ಕೇರಳ ಹಾಗೂ ಮಡಿಕೇರಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್ಸಾರ್ಟಿಸಿ)ಪುನರ್ ಆರಂಭಿಸಿದೆ.
ಕೇರಳ ರಾಜ್ಯದದ ಎರ್ನಾಕುಲಂ, ಕೊಟ್ಟಾಯಂ, ತ್ರಿಶೂರ್, ಪಾಲ್ಗಾಟ್, ಕಾಲಿಕಟ್, ಕಣ್ಣನೂರ್ ಮತ್ತು ತ್ರಿವೇಂಡ್ರಂಗೆ ಕೆಎಸ್ಸಾರ್ಟಿಸಿ ಬಸ್ ಸೇವೆ ಆರಂಭಿಸಲಾಗಿದೆ. ಅಲ್ಲದೆ, ಕೇರಳದ ಕಾಸರಗೋಡಿಗೆ ಮಾತ್ರ ಬಸ್ ಸಂಚಾರ ಸೇವೆ ಒದಗಿಸಿಲ್ಲ ಎಂದು ತಿಳಿಸಲಾಗಿದೆ.
ರಾಜ್ಯದ ಮಡಿಕೇರಿ ಮತ್ತು ಕುಶಾಲನಗರಕ್ಕೂ ಕೆಎಸ್ಸಾರ್ಟಿಸಿ ಬಸ್ ಸಂಚಾರ ಆರಂಭಿಸಲಾಗಿದೆ. ಸ್ವಲ್ಪ ಮಟ್ಟಿನ ಮಳೆ ತಗ್ಗಿದ್ದು, ರಸ್ತೆಯಲ್ಲಿ ಬಸ್‌ಗಳು ಸಂಚರಿಸಲು ಅನುವು ಆಗಿರುವ ಹಿನ್ನೆಲೆಯಲ್ಲಿ ಕೆಎಸ್ಸಾರ್ಟಿಸಿ ಬಸ್ ಸೇವೆ ಆರಂಭಿಸಲಾಗಿದೆ ಎಂದು ಸಂಸ್ಥೆ ಹೇಳಿದೆ.
Next Story





