Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ರಾಜಕೀಯದಲ್ಲಿ ಜಾತಿ ನೋಡಿ ಮಣೆ...

ರಾಜಕೀಯದಲ್ಲಿ ಜಾತಿ ನೋಡಿ ಮಣೆ ಹಾಕಲಾಗುತ್ತದೆ: ಮಾಜಿ ಸಚಿವೆ ಲಲಿತಾ ನಾಯಕ್ ಬೇಸರ

ಮಹಿಳೆ-ರಾಜಕಾರಣ-ಹೊಸದಿಕ್ಕು ಚುನಾವಣೆ: ಒಳ ಹೊರಗೆ ಸಂವಾದ

ವಾರ್ತಾಭಾರತಿವಾರ್ತಾಭಾರತಿ19 Aug 2018 11:47 PM IST
share
ರಾಜಕೀಯದಲ್ಲಿ ಜಾತಿ ನೋಡಿ ಮಣೆ ಹಾಕಲಾಗುತ್ತದೆ: ಮಾಜಿ ಸಚಿವೆ ಲಲಿತಾ ನಾಯಕ್ ಬೇಸರ

ಮೈಸೂರು, ಆ.19: ರಾಜಕೀಯದಲ್ಲಿ ನಾವು ನಡೆದು ಬಂದ ಹಿನ್ನೆಲೆಯ ಜೊತೆಗೆ ಜಾತಿ ನೋಡಿ ಮಣೆ ಹಾಕಲಾಗುತ್ತದೆ ಎಂದು ಮಾಜಿ ಸಚಿವೆ ಬಿ.ಟಿ.ಲಲಿತಾ ನಾಯಕ್ ಬೇಸರ ವ್ಯಕ್ತಪಡಿಸಿದ್ದಾರೆ.

ನಗರದ ಕಲಾಮಂದಿರದ ಕಿರುರಂಗಮಂದಿರದಲ್ಲಿ ರವಿವಾರ ಕರ್ನಾಟಕ ರಾಜ್ಯ ಮಹಿಳಾ ದೌರ್ಜನ್ಯ ವಿರೋಧಿ ಒಕ್ಕೂಟ ವತಿಯಿಂದ ಆಯೋಜಿಸಿದ್ದ ಮಹಿಳೆ-ರಾಜಕಾರಣ-ಹೊಸದಿಕ್ಕು ಚುನಾವಣೆ: ಒಳ ಹೊರಗೆ ಸಂವಾದ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಬಂಡಾಯ ಸೇರಿದಂತೆ ವಿವಿಧ ಸಂಘಟನೆಗಳ ಜೊತೆಗೆ ಪತ್ರಕರ್ತೆಯಾಗಿ ಬರವಣಿಗೆಯಲ್ಲಿ ತೊಡಗಿಸಿಕೊಂಡ ಕಾರಣ ಅಚಾನಕ್ಕಾಗಿ ರಾಜಕೀಯಕ್ಕೆ ಪ್ರವೇಶ ದೊರೆಯಿತು. ಆದರೆ ಪತ್ರಕರ್ತೆಯಾಗಿ ರಾಜಕಾರಣಿಗಳ ಕಾರ್ಯಗಳನ್ನು ಬರೆದಿದ್ದ ನನಗೆ ರಾಜಕೀಯದ ಮೇಲೆ ಆಸಕ್ತಿಯಿರಲಿಲ್ಲ. ಆದರೆ ಅನೇಕ ಹಿರಿಯರ ಮಾರ್ಗದರ್ಶನದಂತೆ ರಾಜಕೀಯದಲ್ಲಿ ಪ್ರವೇಶ ಮಾಡಿದೆ. ಆ ನಂತರವೇ ರಾಜಕೀಯದ ವಾಸ್ತವ ಸ್ಥಿತಿ ಅರಿವಾಯಿತು ಎಂದರು.

ರಾಜಕಾರಣದಲ್ಲಿ ಏನನ್ನೂ ಹೇಳಬಾರದು. ಬಂದ ಹಣವನ್ನು ಪಡೆದುಕೊಂಡು, ಪಕ್ಷಕ್ಕೂ ಕೊಟ್ಟು, ಮನೆಗಳನ್ನು ಕಟ್ಟಿಕೊಂಡು ಇರಬೇಕು. ಅದರ ಹೊರತಾಗಿ ಮಾತನಾಡಲು ಅವಕಾಶವಿಲ್ಲ. ಅಸಮಾಧಾನ, ಯಾರೋ ಮಾಡಿದ ಕಾರ್ಯಗಳಿಗೆ ತಮ್ಮ ಹೆಸರುಗಳನ್ನು ಬಳಸಿಕೊಳ್ಳುವುದು, ಜಾತಿ ಕೀಳರಿಮೆ ಹೀಗೆ ಅನೇಕ ಸಮಸ್ಯೆಗಳು ಎದುರಾದವು. ವಿಷ ಕೊಟ್ಟು, ಅಮೃತವನ್ನು ಕೊಟ್ಟಿದ್ದೇವೆ ಎಂದು ಹೇಳುವವರಿಗೆ ರಾಜಕೀಯ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಶಿಕ್ಷಣ ಪದ್ಧತಿ ಬದಲಾಯಿಸಬೇಕು: ಮೌಢ್ಯ ವಿರೋಧಿಸುವಂತಹ ಶಿಕ್ಷಣ ಅವಶ್ಯಕವಾಗಿದೆ. ರಾವಣನನ್ನು ರಾಕ್ಷಸನೆಂದು ಬಿಂಬಿಸಲಾಗಿದೆ. ಅವನು ಒಳ್ಳೆಯವನೇ ಯಾರು ಕೆಟ್ಟವರಲ್ಲ ಸಮಾನತೆ ಎಂಬುದು ಮುಖ್ಯ. ದೇವಸ್ಥಾನಗಳು ಚಿಂತನಗೆ ಹಚ್ಚುವುದಿಲ್ಲ, ಧರ್ಮ, ಜಾತಿ ವ್ಯಾಪಾರೀಕರಣವಾಗಿದ್ದು, ಪ್ರಕೃತಿಯಲ್ಲಿ ನಮ್ಮ ಜವಾಬ್ದಾರಿಯನ್ನು ಅರಿತು ನಡೆಯಬೇಕು ಎಂದು ತಿಳಿಸಿದರು.

ಮಹಿಳೆಯರಿಗೆ ಸ್ವಾತಂತ್ರ ಸಿಕ್ಕಿಲ್ಲ. ಸಂವಿಧಾನವು ಏನನ್ನು ಕೊಡಬೇಕು, ಏನನ್ನು ಕೊಡಬಾರದು ಎಂಬಿತ್ಯಾದಿ ನೀತಿ ನಿಯಮ ರೂಪಿಸಿದೆ ಅದನ್ನು ಅರಿತು ನಡೆಯಬೇಕು ಎಂದ ಅವರು, 21ನೇ ಶತಮಾನದಲ್ಲಿ ನಮ್ಮ ಹಕ್ಕುಗಳನ್ನು ಪ್ರಶ್ನಿಸಲು ಅವಕಾಶವನ್ನು ಸಂವಿಧಾನ ಒದಗಿಸಿಕೊಟ್ಟಿದೆ. ಮಹಿಳಾ ಚಳವಳಿಗಳು ನಿರಂತರವಾಗಿ ನಡೆಯಬೇಕಿದೆ. ಮೀಸಲಾತಿಯನ್ನು ಪಡೆದು ರಾಜಕೀಯ ಸೇರಿದಂತೆ ಇತರೆ ಕ್ಷೇತ್ರಗಳಲ್ಲಿ ಅಭಿವೃದ್ಧಿಯನ್ನು ಸಾಧಿಸಲು ಚಳವಳಿಗಳನ್ನು ಅಸ್ತ್ರವನ್ನಾಗಿ ಬಳಸಿಕೊಳ್ಳಬೇಕು ಎಂದು ಹೇಳಿದರು.

ರೈತ ಸಂಘದ ನಂದಿನಿ ಜಯರಾಮ್ ಅವರು ಮಾತನಾಡಿದರು.
ಕಾರ್ಯಕ್ರಮಕ್ಕೂ ಮುನ್ನ ನಡೆದ ಸಮತಾಗೀತೆ, ಬೀದಿನಾಟಕವು ಪ್ರೇಕ್ಷಕರ ಗಮನಸೆಳೆಯಿತು.ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷೆ ಡಾ.ಪುಷ್ಪಾ ಅಮರ್‌ನಾಥ್, ಮಹಿಳಾ ಹೋರಾಟಗಾರ್ತಿ ಮಾಳವಿಕಾ ಗುಬ್ಬಿವಾಣಿ, ಸರಸ್ವತಿ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X