Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ರೈತರ ಸಾಲ ಮನ್ನಾ: 15ದಿನದಲ್ಲಿ...

ರೈತರ ಸಾಲ ಮನ್ನಾ: 15ದಿನದಲ್ಲಿ ಖಾತೆಗಳಿಗೆ ಜಮೆ; ಕೃಷಿ ಸಚಿವ ಶಿವಶಂಕರ ರೆಡ್ಡಿ

ವಾರ್ತಾಭಾರತಿವಾರ್ತಾಭಾರತಿ20 Aug 2018 8:47 PM IST
share
ರೈತರ ಸಾಲ ಮನ್ನಾ: 15ದಿನದಲ್ಲಿ ಖಾತೆಗಳಿಗೆ ಜಮೆ; ಕೃಷಿ ಸಚಿವ ಶಿವಶಂಕರ ರೆಡ್ಡಿ

ಕುಂದಾಪುರ, ಆ.20: ರಾಜ್ಯದ ರೈತರ ಸಾಲಮನ್ನಾ ಕುರಿತಂತೆ ಈಗಾಗಲೇ ಎಲ್ಲಾ ಸಹಕಾರ ಸಂಘಗಳಿಗೆ ಸುತ್ತೋಲೆ ಕಳುಹಿಸಲಾಗಿದ್ದು, ಈ ಕುರಿತಂತೆ 15 ದಿನಗಳೊಳಗೆ ರೈತರ ಖಾತೆಗಳಿಗೆ ಹಣವನ್ನು ಜಮೆ ಮಾಡಲಾಗುವುದು ಎಂದು ರಾಜ್ಯದ ಕೃಷಿ ಸಚಿವ ಎನ್.ಎಚ್.ಶಿವಶಂಕರ ರೆಡ್ಡಿ ತಿಳಿಸಿದ್ದಾರೆ.

ಸೋಮವಾರ ಕುಂದಾಪುರ ತಾಲೂಕು ಹೆಮ್ಮಾಡಿಯ ಸಂತೋಷನಗರದಲ್ಲಿ ಭತ್ತದ ಯಾಂತ್ರೀಕೃತ ನಾಟಿ ಪ್ರಾತ್ಯಕ್ಷಿಕೆ ವೀಕ್ಷಿಸಿ ಅವರು ಮಾತನಾಡುತಿದ್ದರು.

ಪ್ರಥಮ ಹಂತದಲ್ಲಿ ರಾಜ್ಯದ ರೈತರು ಸಹಕಾರ ಸಂಘಗಳಲ್ಲಿ ಪಡೆದ 9,500 ಕೋಟಿ ರೂ ಸಾಲಮನ್ನಾ ಮಾಡಲಾಗುವುದು. ಮುಂದಿನ ಹಂತದಲ್ಲಿ ಖಾಸಗಿ ಬ್ಯಾಂಕ್‌ಗಳಿಂದ ಪಡೆದ ಸಾಲ ಮನ್ನಾ ಮಾಡಲಾಗುವುದು ಎಂದು ಸಚಿವರು ನುಡಿದರು.

ಪ್ರಥಮ ಹಂತದಲ್ಲಿ ರಾಜ್ಯದ ರೈತರು ಸಹಕಾರ ಸಂಘಗಳಲ್ಲಿ ಪಡೆದ 9,500 ಕೋಟಿ ರೂ ಸಾಲಮನ್ನಾ ಮಾಡಲಾಗುವುದು. ಮುಂದಿನ ಹಂತದಲ್ಲಿ ಖಾಸಗಿ ಬ್ಯಾಂಕ್‌ಗಳಿಂದ ಪಡೆದ ಸಾಲ ಮನ್ನಾ ಮಾಡಲಾಗುವುದು ಎಂದು ಸಚಿವರು ನುಡಿದರು. ರಾಜ್ಯದಲ್ಲಿ ಸಾವಯವ ಕೃಷಿಗೆ ವಿಶೇಷ ಒತ್ತು ನೀಡಲಾಗುತ್ತಿದೆ. ರೈತರು ಬೆಳೆದ ಸಾವಯವ ಉತ್ಪನ್ನಗಳಿಗೆ ಸೂಕ್ತ ಮಾರುಕಟ್ಟೆ ದೊರೆಯುತ್ತಿಲ್ಲ.ಈ ನಿಟ್ಟಿನಲ್ಲಿ ಸೂಕ್ತ ಮಾರುಕಟ್ಟೆ ವ್ಯವಸ್ಥೆ ಕಲ್ಪಿಸಲು ಕ್ರಮ ಕೈಗೊಳ್ಳಲಾಗುವುದು. ರಾಜ್ಯದ ಕೃಷಿ ಇಲಾಖೆಯಲ್ಲಿ ಹಲವು ಹುದ್ದೆಗಳು ಖಾಲಿ ಇದ್ದು, ಇದರಿಂದ ಕೃಷಿಕರಿಗೆ ಸೂಕ್ತ ಮಾಹಿತಿ ನೀಡಲು ಸಮಸ್ಯೆಯಾಗುತ್ತಿದೆ. ಇದಕ್ಕಾಗಿ ಕೃಷಿ ಸಂಪರ್ಕ ಕೇಂದ್ರಗಳಿಗೆ ಕೃಷಿ ವಿವಿಯ 600 ವಿದ್ಯಾರ್ಥಿಗಳನ್ನು ನೇಮಕ ಮಾಡಲು ಕ್ರಮ ಕೈಗೊಂಡಿದ್ದು, ಶೀಘ್ರದಲ್ಲಿ ನೇಮಕಾತಿ ಆದೇಶ ನೀಡಲಾಗುವುದು ಎಂದು ಸಚಿವರು ಹೇಳಿದರು.

ಕೃಷಿಯಲ್ಲಿ ಕೂಲಿಯಾಳುಗಳ ಸಮಸ್ಯೆ ಇದ್ದು, ಇದನ್ನು ನಿವಾರಿಸುವ ಉದ್ದೇಶ ದಿಂದ ಕೃಷಿಗೆ ಆದ್ಯತೆಯ ಮೇಲೆ ರೈತ ಸೇವಾ ಕೇಂದ್ರಗಳ ಮೂಲಕ ಕೃಷಿ ಯಂತ್ರೋಪಕರಣ ಒದಗಿಸಲಾಗುತ್ತಿದೆ. ಈ ಕೇಂದ್ರಗಳಲ್ಲಿ ಹೆಚ್ಚಿನ ಯಂತ್ರೋಪಕರಣ ಒದಗಿಸಲು ಹಾಗೂ ಸ್ಥಳೀಯ ರೈತರ ಅಗತ್ಯಕ್ಕೆ ಬೇಕಾದ ಯಂತ್ರೋಪಕರಣಗಳನ್ನು ಒದಗಿಸಲಾಗುವುದು. ಈ ಯಂತ್ರಗಳನ್ನು ದುರಸ್ತಿ ಗೊಳಿಸುವ ಕುರಿತಂತೆ ಕೃಷಿ ಯಂತ್ರೋಪಕರಣ ಸರಬರಾಜು ಮಾಡುವ ಕಂಪೆನಿಗಳು ಪ್ರತಿ ತಾಲೂಕಿಗೆ ಕಡ್ಡಾಯವಾಗಿ ಒಂದು ರಿಪೇರಿ ಕೇಂದ್ರ ತೆರೆದು ಸೂಕ್ತ ತಂತ್ರಜ್ಞರನ್ನು ನೇಮಿಸುವಂತೆ ಟೆಂಡರ್‌ನಲ್ಲಿ ಸೂಚನೆ ನೀಡಲಾಗುವುದು ಎಂದು ಸಚಿವ ರೆಡ್ಡಿ ನುಡಿದರು.

ರೈತರಿಗೆ ಗುರುತಿನ ಚೀಟಿ ನೀಡುವ ಕುರಿತಂತೆ ಈಗಾಗಲೇ ಕ್ರಮವಹಿಸಿದ್ದು, 6 ತಿಂಗಳ ಒಳಗೆ ಎಲ್ಲಾ ರೈತರಿಗೆ ಗುರುತಿನ ಚೀಟಿ ನೀಡಲಾಗುವುದು. ಈ ಚೀಟಿಯಿಂದ ರೈತರು ವಿವಿಧ ಸೌಲ್ಯಗಳನ್ನು ಪಡೆಯಲು ಅನುಕೂಲ ವಾಗಲಿದೆ ಎಂದು ಸಚಿವರು ಹೇಳಿದರು.

ಬೆಳೆಗಳಿಗೆ ಕೇಂದ್ರ ಸರಕಾರ ಈಗಾಗಲೇ ಕನಿಷ್ಠ ಬೆಂಬಲ ಬೆಲೆ ಘೋಷಿಸಿದ್ದು, ಮಾರುಕಟ್ಟೆಯಲ್ಲಿ ಈ ಬೆಳೆಗಳ ಬೆಲೆ ಇಳಿಕೆಯಾದರೂ ಸಹ ರಾಜ್ಯ ಸರಕಾರ ಕನಿಷ್ಠ ಬೆಂಬಲ ಬೆಲೆಯಲ್ಲಿ ಬೆಳೆ ಖರೀದಿ ಮಾಡಿ, ಹೆಚ್ಚುವರಿ ಮೊತ್ತವನ್ನು ಕೇಂದ್ರದಿಂದ ಪಡೆಯಲು ಅವಕಾಶ ಕಲ್ಪಿಸಲಾಗಿದೆ. ಹೆಚ್ಚುವರಿ ಮೊತ್ತವನ್ನು ಕೇಂದ್ರ ರಾಜ್ಯಗಳಿಗೆ ಬಿಡುಗಡೆ ಮಾಡಲಿದೆ ಎಂದು ಕೃಷಿ ಸಚಿವರು ತಿಳಿಸಿದರು.

ಉಡುಪಿ ಜಿಲ್ಲೆಯಲ್ಲಿ ರೈತರ ಬೆಳೆಗಳಿಗೆ ಕಾಡು ಪ್ರಾಣಿಗಳ ಹಾವಳಿ ಇದ್ದು, ಕೋವಿ ಲೈಸೆನ್ಸ್ ಪಡೆಯಲು ಇರುವ ಸಮಸ್ಯೆ ಕುರಿತು ರೈತರ ದೂರುಗಳನ್ನು ಆಲಿಸಿದ ಸಚಿವರು, ಈ ಕುರಿತಂತೆ ನಿಯಮ ಸಡಿಲಿಕೆಗೆ ಜಿಲ್ಲಾಧಿಕಾರಿ ಗಳೊಂದಿಗೆ ಚರ್ಚಿಸಲಾಗುವುದು ಎಂದರು. ರೈತರ ಬೆಳೆಗಳಿಗೆ ಉಪ್ಪುನೀರು ನುಗ್ಗಿ ಬೆಳೆ ಹಾನಿಯಾಗುವ ಕುರಿತಂತೆ ರೈತರ ಜಮೀನಿನ ಬಳಿ ದಂಡೆ ನಿರ್ಮಿಸುವ ಕುರಿತಂತೆ ರಾಜ್ಯದ ಸಣ್ಣ ನೀರಾವರಿ ಸಚಿವರ ಜೊತೆ ಚರ್ಚಿಸುವುದಾಗಿ ಹೇಳಿದರು.

ಕಾರ್ಯಕ್ರಮದಲ್ಲಿ ಮಾಜಿ ಶಾಸಕ ಗೋಪಾಲ ಪೂಜಾರಿ, ಕುಂದಾಪುರ ಎಪಿಎಂಸಿ ಅಧ್ಯಕ್ಷ ಶರತ್ ಕುಮಾರ್ ಶೆಟ್ಟಿ, ಜಿಪಂ ಸದಸ್ಯೆ ಶೋಭಾ ಜಿ ಪುತ್ರನ್, ಹೆಮ್ಮಾಡಿ ಗ್ರಾಪಂ ಅಧ್ಯಕ್ಷೆ ಜ್ಯೋತಿ, ಜಲಾನಯನ ಇಲಾಖೆಯ ನಿರ್ದೇಶಕ ಪದ್ಮಯ್ಯ ನಾಯ್ಕ, ಮಂಗಳೂರು ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಅಂಥೋಣಿ ಮರಿಯಾ ಇಮ್ಯಾನ್ಯುಯಲ್, ಉಡುಪಿ ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಕೆಂಪೇಗೌಡ, ಕುಂದಾಪುರ ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ವಿಠಲ ರಾವ್, ಕಾರ್ಕಳ ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಜಯರಾಜ್ ಪ್ರಕಾಶ್ ಅಲ್ಲದೇ ವಿವಿಧ ರೈತ ಸಂಘಟನೆಳ ಪ್ರತಿನಿಧಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X