Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕೇಂದ್ರದಿಂದ ಮೊದಲ ಹಂತದಲ್ಲಿ 100 ಕೋಟಿ...

ಕೇಂದ್ರದಿಂದ ಮೊದಲ ಹಂತದಲ್ಲಿ 100 ಕೋಟಿ ರೂ. ಬೇಕು: ಡಾ.ಜಿ.ಪರಮೇಶ್ವರ್ ಮನವಿ

ಕೊಡಗು ಮಳೆಹಾನಿ

ವಾರ್ತಾಭಾರತಿವಾರ್ತಾಭಾರತಿ20 Aug 2018 9:22 PM IST
share
ಕೇಂದ್ರದಿಂದ ಮೊದಲ ಹಂತದಲ್ಲಿ 100 ಕೋಟಿ ರೂ. ಬೇಕು: ಡಾ.ಜಿ.ಪರಮೇಶ್ವರ್ ಮನವಿ

ಮಡಿಕೇರಿ, ಆ.20: ಕೇರಳಕ್ಕೆ 500 ಕೋಟಿ ರೂ. ನೀಡಿರುವ ಪ್ರಧಾನಿ ಮೋದಿ ಕೊಡಗು ಜಿಲ್ಲೆಯಲ್ಲಿ ಪರಿಹಾರ ಕಾರ್ಯಗಳಿಗಾಗಿ ಕನಿಷ್ಟ 100 ಕೋಟಿ ರೂ. ಗಳನ್ನಾದರೂ ಪ್ರಥಮ ಹಂತದಲ್ಲಿ ಬಿಡುಗಡೆಗೊಳಿಸಬೇಕೆಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಮನವಿ ಮಾಡಿದ್ದಾರೆ.

ಜಿಲ್ಲೆಯಲ್ಲಿ ಇಷ್ಟೆಲ್ಲಾ ಹಾನಿಯಾದರೂ ಕೇಂದ್ರ ಸರ್ಕಾರದಿಂದ ಪ್ರಮುಖ ಖಾತೆಯ ಸಚಿವರು ಯಾರೂ ಕೊಡಗಿಗೆ ಭೇಟಿ ನೀಡದಿರುವುದು ವಿಷಾದನೀಯ ಎಂದು ಉಪಮುಖ್ಯಮಂತ್ರಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪ್ರಕೃತಿ ವಿಕೋಪದಿಂದ ನಲುಗಿರುವ ಕೊಡಗಿನಲ್ಲಿ ಈವರೆಗೆ 5 ಸಾವಿರ ಮನೆಗಳು ನಾಶವಾಗಿದ್ದು, ರಾಜ್ಯ ಸರಕಾರ ಸದಾ ಕೊಡಗಿನ ಜನತೆಯೊಂದಿಗಿದೆ. ಕೇಂದ್ರ ಸರ್ಕಾರದಿಂದ ರಾಜ್ಯವು ಕೊಡಗಿನ ಸಮಸ್ಯೆ ಪರಿಹಾರಕ್ಕೆ ಪ್ರಥಮ ಹಂತದಲ್ಲಿ ಕನಿಷ್ಟ 100 ಕೋಟಿ ರೂ.ಗಳನ್ನು ನಿರೀಕ್ಷಿಸುತ್ತಿದೆ ಎಂದು ಹೇಳಿದರು.

ಅತಿವೃಷ್ಟಿ ಪೀಡಿತ ಕೊಡಗು ಜಿಲ್ಲೆಗೆ ಭೇಟಿ ನೀಡಿದ ಪರಮೇಶ್ವರ್ ಮಡಿಕೇರಿಯಲ್ಲಿನ ನಿರಾಶ್ರಿತರ ಕೇಂದ್ರಗಳಿಗೂ ತೆರಳಿ ಅಲ್ಲಿ ಆಶ್ರಯ ಪಡೆದಿರುವ ಜನರಿಗೆ ಸಾಂತ್ವನ ಹೇಳಿದರು. ನಂತರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಪರಮೇಶ್ವರ್, ಪ್ರಕೃತಿ ವಿಕೋಪದಿಂದಾಗಿ ಉಂಟಾಗಿರುವ ಸಮಸ್ಯೆಯನ್ನು ಸರ್ಕಾರ ಅತ್ಯಂತ ಗಂಭೀರ ಎಂದು ಪರಿಗಣಿಸಿದೆ ಎಂದರು. 7 ಜನ ಸಾವನ್ನಪ್ಪಿರುವುದು ಅಧಿಕೃತವಾಗಿದ್ದರೂ ಮಣ್ಣಿನಡಿ ಇನ್ನೂ ಕೆಲವರು ಸಿಲುಕಿ ಸಾವನ್ನಪ್ಪಿರುವ ಶಂಕೆಯಿದೆ ಎಂದು ಹೇಳಿದರು. ಈವರೆಗೆ 5 ಸಾವಿರ ಮನೆಗಳು ನಾಶವಾಗಿದ್ದು, ನಿರಾಶ್ರಿತರಿಗೆ ಮನೆಗಳನ್ನು ಹೊಸ ಬಡಾವಣೆ ನಿರ್ಮಾಣದ ಮೂಲಕ ನಿರ್ಮಿಸಿಕೊಡಲಾಗುತ್ತದೆ ಎಂದೂ ಸಚಿವರು ಹೇಳಿದರು.

ಕೊಡಗಿನಲ್ಲಿ ಸಂಭವಿಸಿರುವ ನಷ್ಟದ ಲೆಕ್ಕ ಹಾಕಲು ಇನ್ನೂ ಸಾಧ್ಯವಾಗಿಲ್ಲ. ಅನೇಕ ಗ್ರಾಮಗಳಿಗೆ ಸಂಪರ್ಕ ರಸ್ತೆಯೇ ಇಲ್ಲವಾದ್ದರಿಂದಾಗಿ ನಷ್ಟದ ಸಮೀಕ್ಷೆಯೇ ಸಿಗುತ್ತಿಲ್ಲ ಎಂದರು. ಮಳೆ ಸಂಪೂರ್ಣವಾಗಿ ನಿಂತ ಮೇಲಷ್ಟೇ ಕೊಡಗಿನಲ್ಲಿ ಸಂಭವಿಸಿರುವ ನಷ್ಟದ ಅಂದಾಜು ದೊರಕಲಿದೆ ಎಂದೂ ಸಚಿವರು ತಿಳಿಸಿದರು.

ಕಳೆದೆರಡು ದಿನಗಳಿಗೆ ಹೋಲಿಸಿದರೆ ಈಗಿನ ಪರಿಸ್ಥಿತಿಯಲ್ಲಿ ಸುಧಾರಣೆ ಕಂಡುಬಂದಿದೆ ಎಂದು ಹೇಳಿದ ಡಾ.ಜಿ.ಪರಮೇಶ್ವರ್, ಕೊಡಗಿನ ಸಂತ್ರಸ್ತರ ಪರಿಹಾರ ನಿಧಿಗೆ ರಾಜ್ಯದ ಪೊಲೀಸ್ ಸಿಬ್ಬಂದಿಗಳು 1 ದಿನದ ವೇತನವಾದ 5.82 ಕೋಟಿ ರೂ. ಮತ್ತು ಅಗ್ನಿಶಾಮಕ ದಳದ 10 ಸಾವಿರ ಸಿಬ್ಬಂದಿಗಳು 1 ದಿನದ ವೇತನ ನೀಡಲಿದ್ದು, ಸುಮಾರು 7 ಕೋಟಿ ರು. ಆರ್ಥಿಕ ಪರಿಹಾರ ನೀಡಲಿದ್ದಾರೆ ಎಂದು ತಿಳಿಸಿದರು. ಕೊಡಗಿಗೆ ರವಾನಿಸಿರುವ ಪರಿಹಾರ ಸಾಮಾಗ್ರಿಗಳು ದುರ್ಬಳಕೆಯಾಗುತ್ತಿದೆ ಎಂದು ಕೇಳಿಬಂದಿರುವ ದೂರಿನ ಬಗ್ಗೆ ಗಮನ ಹರಿಸಲಾಗುತ್ತದೆ ಎಂದೂ ಪರಮೇಶ್ವರ್  ಹೇಳಿದರು.

ಕೊಡಗು ಉಸ್ತುವಾರಿ ಸಚಿವ ಸಾ.ರಾ.ಮಹೇಶ್, ಶಾಸಕ  ಶ್ರೀನಿವಾಸ್, ಎಡಿಜಿಪಿ ಬಿ.ಭಾಸ್ಕರ್ ರಾವ್, ಸುನೀಲ್ ಅಗರ್ ವಾಲ್, ಜಿಲ್ಲಾಧಿಕಾರಿ ಶ್ರಿವಿದ್ಯಾ, ಪೊಲೀಸ್ ವರಿಷ್ಟಾಧಿಕಾರಿ ಸುಮನ್ ಪನ್ನೇಕರ್ ಹಾಜರಿದ್ದರು. 

ಗ್ರಾಮಸ್ಥರ ರಕ್ಷಣೆಯಾಗಿದೆ: ಕೊಡಗಿನ ಮಕ್ಕಂದೂರು, ಮುಕ್ಕೋಡ್ಲು ಸೇರಿದಂತೆ ಭೂಕುಸಿತಕ್ಕೊಳಕ್ಕಾಗಿ ಸಂಕಷ್ಟದಲ್ಲಿರುವ ಗ್ರಾಮ  ವ್ಯಾಪ್ತಿಯ ಎಲ್ಲಾ ಜನತೆಯನ್ನು ರಕ್ಷಿಸಲಾಗಿದೆ. ಸೋಮವಾರ ಕೂಡ ಸೇನಾ ಕಾರ್ಯಾಚರಣೆ ನಡೆಸಲಾಗಿದ್ದು,  ಅಪಾಯದಲ್ಲಿದ್ದ ಎಲ್ಲಾ ಗ್ರಾಮಸ್ಥರನ್ನು ಸುರಕ್ಷಿತವಾಗಿ ಕರೆತರಲಾಗಿದೆ. ಸೇನಾ ಕಾರ್ಯಾಚರಣೆ ಯಶಸ್ವಿಯಾಗಿದೆ ಎಂದು ಅಗ್ನಿಶಾಮಕ ದಳ ಮತ್ತು ಗೃಹ ರಕ್ಷಕ ದಳದ ಮಹಾನಿರ್ದೇಶಕ ಎಂ.ಎನ್.ರೆಡ್ಡಿ ಮಾಹಿತಿ ನೀಡಿದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X