Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಚಿಕ್ಕಮಗಳೂರು: ತಗ್ಗಿದ ಮಳೆ; ಮಲೆನಾಡಿನ...

ಚಿಕ್ಕಮಗಳೂರು: ತಗ್ಗಿದ ಮಳೆ; ಮಲೆನಾಡಿನ ಅಲ್ಲಲ್ಲಿ ಭೂ ಕುಸಿತ

ವಾರ್ತಾಭಾರತಿವಾರ್ತಾಭಾರತಿ20 Aug 2018 10:21 PM IST
share
ಚಿಕ್ಕಮಗಳೂರು: ತಗ್ಗಿದ ಮಳೆ; ಮಲೆನಾಡಿನ ಅಲ್ಲಲ್ಲಿ ಭೂ ಕುಸಿತ

ಚಿಕ್ಕಮಗಳೂರು, ಆ.20: ಜಿಲ್ಲೆಯ ಮಲೆನಾಡು ಭಾಗದಲ್ಲಿ ಸೋಮವಾರ ಮಳೆ ಪ್ರಮಾಣ ಕೊಂಚ ಕಡಿಮೆಯಾಗಿದ್ದು, ಆಗಾಗ್ಗೆ ಸಾಧಾರಣ ಮಳೆಯಾಗಿದೆ. ಸತತ ಮಳೆಯಿಂದ ಕಂಗೆಟ್ಟಿದ್ದ ಮಲೆನಾಡಿನ ಜನತೆ ಮಳೆ ವಿರಾಮ ನೀಡಿರುವುದರಿಂದ ನಿರಾಳರಾಗಿದ್ದಾರೆ. ಮಳೆ ಕಡಿಮೆಯಾದ ಹಿನ್ನೆಲೆಯಲ್ಲಿ ಮಲೆನಾಡು ಭಾಗದ ಹೇಮಾವತಿ, ತುಂಗಾ, ಭದ್ರಾನದಿಗಳಲ್ಲಿ ನೀರಿನ ಹರಿವಿನ ಪ್ರಮಾಣವೂ ಕಡಿಮೆಯಾಗಿದೆ. ಮಳೆ ಕಡಿಮೆಯಾಗಿದ್ದರೂ ಮಲೆನಾಡಿನ ಅಲ್ಲಲ್ಲಿ ಭೂ ಕುಸಿತದಂತಹ ಹಾನಿಗಳು ಮುಂದುವರಿದಿವೆ.

ಸತತವಾಗಿ ಸುರಿಯುತ್ತಿರುವ ಮಳೆಯಿಂದಾಗಿ ರೋಸಿ ಹೋಗಿದ್ದ ಮಲೆನಾಡಿನ ಜನತೆ ಕಳೆದ ಶನಿವಾರದಿಂದ ವರುಣಾರ್ಭಟ ಕೊಂಚ ಕಡಿಮೆಯಾಗಿರುವುದರಿಂದ ನಿಟ್ಟುಸಿರು ಬಿಟ್ಟಿದ್ದಾರೆ. ಶನಿವಾರ ಮಳೆ ಕಡಿಮೆಯಾಗಿ ಬಿಸಿಲು ಕಂಡಿದ್ದ ಮಲೆನಾಡಿನ ಜನತೆಗೆ ರವಿವಾರ ದಿಢೀರ್ ಸುರಿದ ಧಾರಾಕಾರ ಮಳೆಯಿಂದಾಗಿ ನಿರಾಶರಾಗಿದ್ದರು. ಆದರೆ ಸೋಮವಾರ ಬೆಳಗಿನಿಂದಲೇ ಮಳೆ ಪ್ರಮಾಣ ಕಡಿಮೆಯಾಗಿದ್ದು, ಕೆಲವೆಡೆ ಬಿಸಿಲಿನ ವಾತಾವರಣ ಇತ್ತಾದರೂ ಮಲೆನಾಡಿನ ಅಲ್ಲಲ್ಲಿ ಆಗಾಗ್ಗೆ ಸಾಧಾರಣ ಮಳೆ ಸುರಿಯಿತು.

ಸೋಮವಾರ ಮಲೆನಾಡು ಭಾಗದ ಮೂಡಿಗೆರೆ ತಾಲೂಕಿನ ಅಲ್ಲಲ್ಲಿ ಆಗಾಗ್ಗೆ ಉತ್ತಮ ಮಳೆಯಾಗಿದೆ. ಮಳೆ ಕಡಿಯಾದರು ಭೂ ಕುಸಿತದಂತಹ ಹಾನಿಗಳು ಇನ್ನೂ ಮುಂದುವರಿದಿವೆ. ಸೋಮವಾರ ಮಳೆ ಕಡಿಮೆಯಾದರೂ ಮಳೆಯಿಂದ ಅನೇಕ ವಿದ್ಯುತ್ ಕಂಬಗಳು ಧರೆಗುರುಳಿದ್ದು, ಮಲೆನಾಡಿನ ಗ್ರಾಮೀಣ ಭಾಗಗಲ್ಲಿ ವಿದ್ಯುತ್ ಕಣ್ಣಾಮುಚ್ಚಾಲೇ ಆಡುತ್ತಿದೆ. ಶೃಂಗೇರಿ ತಾಲೂಕಿನ ಕೆರೆಕಟ್ಟೆ ಸಮೀಪದ ಹುಲುಗಾರುಬೈಲು ಗ್ರಾಮದಲ್ಲಿ ಗುಡ್ಡ ಕುಸಿದು ಮಣ್ಣು ಭತ್ತದ ಗದ್ದೆಗೆ ಬಿದ್ದಿರುವುದರಿಂದ ಅಪಾರ ಪ್ರಮಾಣದ ಬೆಳೆ ನಷ್ಟವಾಗಿದೆ. ಕೊಪ್ಪ ತಾಲೂಕಿನ ಬಂಡಿಗಡಿ ಸಮೀಪ ಈಚಲಬೈಲು ಗ್ರಾಮದಲ್ಲಿ ಭೂಕುಸಿತ ಉಂಟಾಗಿ ವಿದ್ಯುತ್ ಟ್ರಾನ್ಸ್ ಫಾರ್ಮರ್ ಮತ್ತು ನಾಲ್ಕು ಕಂಬಗಳು ಧರೆಗುರುಳಿವೆ. ಗ್ರಾಮದಲ್ಲಿ ವಿದ್ಯುತ್ ಸ್ಥಗಿತಗೊಂಡಿದ್ದರಿಂದ ಜನರು ಪರದಾಡುವಂತಾಗಿದೆ.

ಚಿಕ್ಕಮಗಳೂರು ತಾಲೂಕು ಪರ್ವತ ಪ್ರದೇಶದಲ್ಲಿ ಸಾಧಾರಣ ಮಳೆಯಾಗುತ್ತಿದ್ದು, ಸೋಮವಾರ ಮಧ್ಯಾಹ್ನ ಭಾರಿ ಗಾತ್ರದ ಮರವೊಂದು ರಸ್ತೆ ಮೇಲೆ ಬಿದ್ದ ಪರಿಣಾಮ ಕೆಲ ಕಾಲ ರಸ್ತೆ ಸಂಚಾರ ಬಂದ್ ಆಗಿತ್ತು. ಅರಣ್ಯ ಇಲಾಖೆ ಅಧಿಕಾರಿಗಳು ಮರ ತೆರವುಗೊಳಿಸಿ ಸಂಚಾರಕ್ಕೆ ಅನುವು ಮಾಡಿಕೊಟ್ಟರು. ಇನ್ನು ಮೂಡಿಗೆರೆ ತಾಲೂಕಿನ ಹಳೇ ಮೂಡಿಗೆರೆಯಲ್ಲಿ ರವಿವಾರ ರಾತ್ರಿ ಸುರಿದ ಮಳೆ, ಗಾಳಿಗೆ ಧೂಮಪ್ಪಶೆಟ್ಟಿ ಎಂಬವವರ ಮನೆ ಭಾಗಶಃ ಕುಸಿದು ಬಿದ್ದಿರುವ ಬಗ್ಗೆ ವರದಿಯಾಗಿದೆ.

ಮಳೆ ವಿವರ: ಪ್ರಸ್ತುತ ಸಾಲಿನಲ್ಲಿ ಜಿಲ್ಲೆಯಲ್ಲಿ ಈವರೆಗೂ ವಾಡಿಕೆಗಿಂತ ಶೇ.83.2 ರಷ್ಟು ಹೆಚ್ಚು ಮಳೆಯಾಗಿದೆ. ಪ್ರಸ್ತುತ ಸಾಲಿನ ಆ.20ರವರೆಗೆ ವಾಡಿಕೆಯಂತೆ ಜಿಲ್ಲೆಯಲ್ಲಿ 9365 ಮಿ.ಮೀ. ಮಳೆಯಾಗಬೇಕಿತ್ತು. ಆದರೆ 17153.9 ಮಿ.ಮೀ. ಮಳೆಯಾಗಿದೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X