Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ದೇಶದ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ...

ದೇಶದ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಅವೈಜ್ಞಾನಿಕ ಮಾಹಿತಿ ಪ್ರಚಾರ: ನರೇಂದ್ರ ನಾಯಕ್‌

ನರೇಂದ್ರ ದಾಬೋಲ್ಕರ್ ಸ್ಮರಣಾರ್ಥ ರಾಷ್ಟ್ರೀಯ ವೈಜ್ಞಾನಿಕ ಮನೋಭಾವ ದಿನಾಚರಣೆ

ವಾರ್ತಾಭಾರತಿವಾರ್ತಾಭಾರತಿ20 Aug 2018 10:43 PM IST
share
ದೇಶದ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಅವೈಜ್ಞಾನಿಕ ಮಾಹಿತಿ ಪ್ರಚಾರ: ನರೇಂದ್ರ ನಾಯಕ್‌

ಮಂಗಳೂರು, ಆ.20: ಐಐಟಿಯಂತಹ ದೇಶದ ಉನ್ನತ ತಾಂತ್ರಿಕ ಶಿಕ್ಷಣ ಸಂಸ್ಥೆಗಳಲ್ಲೂ ಅವೈಜ್ಞಾನಿಕ ಮಾಹಿತಿಯನ್ನು ಪ್ರಚಾರ ಮಾಡುವ ವ್ಯಕ್ತಿಗಳಿಂದ ಉಪನ್ಯಾಸ ಕಾರ್ಯಕ್ರಮ ಹಮ್ಮಿಕೊಳ್ಳುತ್ತಿರುವುದು ಸಂವಿಧಾನದ ಆಶಯಕ್ಕೆ ವಿರುದ್ಧವಾಗಿದೆ ಎಂದು ರಾಷ್ಟ್ರೀಯ ವಿಚಾರವಾದಿಗಳ ಒಕ್ಕೂಟದ ಅಧ್ಯಕ್ಷ ಪ್ರೊ. ನರೇಂದ್ರ ನಾಯಕ್ ತಿಳಿಸಿದ್ದಾರೆ.

ನಗರದ ಕೆಬಿಇಎ ಸಭಾಂಗಣದಲ್ಲಿಂದು ನರೇಂದ್ರ ದಾಬೋಲ್ಕರ್ ಅವರ ಸ್ಮರಣಾರ್ಥ ರಾಷ್ಟ್ರೀಯ ವೈಜ್ಞಾನಿಕ ಮನೋಭಾವ ದಿನಾಚರಣೆಯನ್ನುದ್ದೇಶಿಸಿ ಮಾತನಾಡುತ್ತಿದ್ದರು. ದೇಶದ ನಾಗರಿಕರಲ್ಲಿ ವೈಜ್ಞಾನಿಕ ಮನೋಭಾವವನ್ನು ಬೆಳೆಸಬೇಕು ಎನ್ನುವುದು ಸಂವಿಧಾನದ ಆಶಯವಾಗಿದೆ. ಆದರೆ ಈ ನಿಟ್ಟಿನಲ್ಲಿ ಸಕ್ರೀಯವಾಗಿರುವ ವಿಚಾರವಾದಿಗಳ ಮೇಲೆ ಹೋರಾಟ ನಡೆಸುತ್ತಿರುವವರ ಮೇಲೆ ,ಕೊಲೆಗಳು ನಡೆಯುತ್ತಿವೆ.ಈ ಘಟನೆಗೆ ಹತ್ಯೆಗೀಡಾದ ನರೇಂದ್ರ ದಾಬೋಲ್ಕರ್ ಒಂದು ಉದಾಹರಣೆ. ನರೇಂದ್ರ ದಾಬೋಲ್ಕರ್ ಅವೈಜ್ಞಾನಿಕವಾದ ಆಚರಣೆಗಳು, ಕಂದಾ ಚಾರಗಳನ್ನು ವಿರೋಧಿಸಿದರು. ಅವರ ಹೋರಾಟದ ಫಲವಾಗಿ ದಾಬೋಲ್ಕರರ ಹತ್ಯೆಯ ಬಳಿಕ ಮಹಾರಾಷ್ಟ್ರದಲ್ಲಿ ಮೌಢ್ಯವಿರೋಧಿ ಕಾನೂನು ಜಾರಿಗೆ ಬಂತು ಎನ್ನುವುದು ಒಳ್ಳೆಯ ಬೆಳವಣಿಗೆ ಸದ್ಯದ ಪರಿಸ್ಥಿತಿಯನ್ನು ಗಮನಿಸಿದಾಗ ವೈದ್ಯಕೀಯ ವಿಚಾರಗಳಲ್ಲಿ ಮಾನಸಿಕ ಆರೋಗ್ಯದ ವಿಚಾರಗಳಲ್ಲಿ ಸಾಕಷ್ಟು ಅವೈಜ್ಞಾನಿಕವಾದ ವಿಚಾರಗಳನ್ನು ಜನಸಾಮಾನ್ಯರ ಮತ್ತು ಸಾಕಷ್ಟು ಶಿಕ್ಷಣ ಪಡೆದ ಎರಡು ವರ್ಗಗಳಲ್ಲಿ ಪ್ರಚಾರ ಮಾಡಲಾಗುತ್ತದೆ ಎಂದು ನರೇಂದ್ರ ನಾಯಕ್ ತಿಳಿಸಿದ್ದಾರೆ.

ಮನೋರೋಗಳ ಬಗ್ಗೆ ಸಾಕಷ್ಟು ಮೂಢ ನಂಬಿಕೆಗಳಿವೆ:- ಸಾಕಷ್ಟು ಮನೋರೋಗಳ ಜನರಿಗೆ ಅರಿವಿನ ಕೊರತೆ ಇರುವ ಕಾರಣ ಮೌಢ್ಯದ ಆಚರಣೆ ಇಂದಿಗೂ ನಡೆಯುತ್ತದೆ. ಇದರಿಂದ ಜೀವಹಾನಿಯಾದ ಉದಾಹರಣೆಗಳು ಇವೆ ಎಂದು ಮನೋ ರೋಗ ತಜ್ಞ ಡಾ.ಪಿ.ವಿ.ಭಂಡಾರಿ ತಿಳಿಸಿದ್ದಾರೆ. ಅಪಸ್ಮಾರ (ಪಿಟ್ಸ್) ಕಾಯಿಲೆಯ ಬಗ್ಗೆ ಅದರ ಚಿಕಿತ್ಸೆಯ ಬಗ್ಗೆ ಇಂದಿಗೂ ಸಾಕಷ್ಟು ಮೂಢ ನಂಬಿಕೆಗಳು ಆಚರಣೆಗಳು ನಡೆಯುತ್ತಲೆ ಇದೆ. ರೋಗ ಪೀಡಿತನಾದಾಗ ಆತನ ಕೈಗೆ, ಬಾಯಿಗೆ ಕಬ್ಬಿಣ ತುರುಕುವುದು ಈರುಳ್ಳಿ ಕೊಡುವುದು ನಡೆಯುತ್ತಿದೆ. ಅಪಸ್ಮಾರವಾದಾಗ ಮೊದಲು ಆತನಿಗೆ ಪ್ರಥಮ ಚಿಕಿತ್ಸೆ ನೀಡಬೇಕು. ಬಳಿಕ ವೈದ್ಯರ ಬಳಿ ಕರೆದುಕೊಂಡು ಹೋಗಬೇಕು. ಅದು ಮೂರರಿಂದ ನಾಲ್ಕು ನಿಮಿಷದ ಅವಧಿಗೆ ಸೀಮಿತವಾಗುತ್ತದೆ. ದೆವ್ವ ಬಿಡಿಸುವುದು, ಹಿಂದಿನ ಜನ್ಮ ವೃತ್ತಾಂತವನ್ನು ತಿಳಿಸುವ ಹೆಸರಿನಲ್ಲಿ ಅವೈಜ್ಞಾನಿಕವಾದ ಮೌಢ್ಯ ಆಚರಣೆಗಳನ್ನು ಬಿತ್ತಲಾಗುತ್ತಿದೆ. ತಮಿಳು ನಾಡಿನ ಎರವಾಡದಲ್ಲಿ ನಡೆದ ದುರಂತದಲ್ಲಿ ಮಾನಸಿಕ ರೋಗಿಗಳ ಕೇಂದ್ರದಲ್ಲಿ ಬೆಂಕಿ ಅನಾಹುತವಾದ ಸಂದರ್ಭದಲ್ಲಿ ಕೆಲವು ದೇಹಗಳನ್ನು ಸರಪಳಿಯಲ್ಲಿ ಬಿಗಿದಿರುವ ಚಿತ್ರಗಳು ಮಾಧ್ಯಮಗಳಲ್ಲಿ ಪ್ರಕಟವಾಗಿದೆ. ಈ ರೀತಿ ಮಾನವಹಕ್ಕುಗಳ ಉಲ್ಲಂಘನೆಯ ಪ್ರಕರಣಗಳು ಮೌಢ್ಯತೆಯ ಹೆಸರಿನಲ್ಲಿ ನಡೆಯುತ್ತಿದೆ ಎಂದು ನರೇಂದ್ರ ನಾಯಕ್ ತಿಳಿಸಿದ್ದಾರೆ.

ಮಾನಸಿಕ ರೋಗಿಗಳಿಗೆ ಚಿಕಿತ್ಸೆ ನೀಡಲು ಮಾನಸಿಕ ತಜ್ಞರ ಕೊರತೆ ಇದೆ. ದುರ್ಬಲ ಮಾನಸಿಕ ಸ್ಥಿತಿಯಲ್ಲಿರುವ ಮಾನಸಿಕ ರೋಗದ ಜನರು ಈ ರೀತಿಯ ಮೌಢ್ಯ ಆಚರಣೆ ನಡೆಸುವವರ ಹಿಂದೆ ಹೋಗುತ್ತಿರುವುದು ಕಂಡು ಬರುತ್ತಿದೆ.ಖಿನ್ನತೆ ಯಂತಹ ಮಾನಸಿಕ ಸಮಸ್ಯೆಯಿಂದ ಬಳಲುತ್ತಿರುವವರಿಗೆ ಸೂಕ್ತವಾದ ಮಾರ್ಗದರ್ಶನ ಚಿಕಿತ್ಸೆಯ ಅಗತ್ಯವಿದೆ ಎಂದು ಡಾ.ಪಿ.ವಿಭಂಡಾರಿ ತಿಳಿಸಿದ್ದಾರೆ.

ಸಮುದಾಯ ಸಂಘಟನೆಯ ಸಂಚಾಲಕರಾದ ವಾಸುದೇವ ಉಚ್ಚಿಲ್ ಸ್ವಾಗತಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X