ಪ್ರತ್ಯೇಕ ಪ್ರಕರಣ: ಮೂವರು ಆತ್ಮಹತ್ಯೆ

ಕಾಪು, ಆ.21: ವೈಯಕ್ತಿಕ ಕಾರಣದಿಂದ ಮನನೊಂದ ಉಪ್ಪೂರು ಗ್ರಾಮದ ತೆಂಕಬೆಟ್ಟು ನಿವಾಸಿ ಜಯ ಶೇರಿಗಾರ(43) ಎಂಬವರು ಆ.20ರಂದು ರಾತ್ರಿ ವೇಳೆ ಮಲಗುವ ಕೋಣೆಯ ಸೀಲಿಂಗ್ ಫ್ಯಾನ್‌ಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬ್ರಹ್ಮಾವರ: ಹಂದಾಡಿ ಗ್ರಾಮದ ಬೇಳೂರುಜೆಡ್ಡು ನಿವಾಸಿ ಮಂಜ ಎಂಬ ವರ ಮಗ ಕೃಷ್ಣ(43) ಎಂಬವರು ಆ.20ರಂದು ರಾತ್ರಿ ವೇಳೆ ಮನೆಯ ಪಕ್ಕಾಸಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾರ್ಕಳ: ಬೋಳ ಗ್ರಾಮದ ವಂಜಾರಕಟ್ಟೆ ಕೆರೆಕೋಡಿ ನಿವಾಸಿ ಸಂಜೀವ ಪೂಜಾರಿ(60) ಎಂಬವರು ಆ.21ರಂದು ಬೆಳಗ್ಗೆ ಮನೆಯಲ್ಲಿ ಯಾರೂ ಇಲ್ಲದ ವೇಳೆ ಮನೆಯ ತೋಟದಲ್ಲಿರುವ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿ ಕೊಂಡಿದ್ದಾರೆ. ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





