Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಕೊಡಗನ್ನು ಅತಿವೃಷ್ಟಿ ಪೀಡಿತ ಜಿಲ್ಲೆ...

ಕೊಡಗನ್ನು ಅತಿವೃಷ್ಟಿ ಪೀಡಿತ ಜಿಲ್ಲೆ ಎಂದು ಘೋಷಿಸಿ

ಶಾಸಕ ಕೆ.ಜಿ.ಬೋಪಯ್ಯ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ22 Aug 2018 4:32 PM IST
share
ಕೊಡಗನ್ನು ಅತಿವೃಷ್ಟಿ ಪೀಡಿತ ಜಿಲ್ಲೆ ಎಂದು ಘೋಷಿಸಿ

ಮಡಿಕೇರಿ ಆ.22: ಕೊಡಗು ಜಿಲ್ಲೆಯಲ್ಲಿ ಹಿಂದೆಂದೂ ಕಂಡು ಕೇಳರಿಯದ ಪ್ರಾಕೃತಿಕ ವಿಕೋಪ ಸಂಭವಿಸಿರುವುದರಿಂದ ಸರಕಾರ ಕೂಡಲೇ ಕೊಡಗನ್ನು ಅತಿವೃಷ್ಟಿ ಪೀಡಿತ ಜಿಲ್ಲೆ ಎಂದು ಘೋಷಿಸಬೇಕು ಎಂದು ವೀರಾಜಪೇಟೆ ಕ್ಷೇತ್ರದ ಶಾಸಕ ಕೆ.ಜಿ.ಬೋಪಯ್ಯ ಆಗ್ರಹಿಸಿದ್ದಾರೆ.
ವಿವಿಧೆಡೆಗಳಲ್ಲಿ ತೆರೆಯಲಾಗಿರುವ ಪರಿಹಾರ ಕೇಂದ್ರಗಳಿಗೆ ಖುದ್ದು ಭೇಟಿ ನೀಡಿ ಸಂತ್ರಸ್ತರ ಅಳಲು ಆಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊಡಗು ಜಿಲ್ಲೆಯನ್ನು ಅತಿವೃಷ್ಟಿ ಪೀಡಿತ ಜಿಲ್ಲೆ ಎಂದು ಘೋಷಿಸುವುದರೊಂದಿಗೆ ನಿರಾಶ್ರಿತರಿಗೆ ಅಗತ್ಯ ಪರಿಹಾರ ಕಾರ್ಯಗಳನ್ನು ಕೂಡಲೇ ಕೈಗೆತ್ತಿಕೊಳ್ಳಬೇಕು. ಜಿಲ್ಲೆಯಲ್ಲಿ ಮನೆ, ಜಮೀನು, ಸ್ಥಿರ ಮತ್ತು ಚರಾಸ್ತಿಗಳನ್ನು ಕಳೆದುಕೊಂಡು ಸಂತ್ರಸ್ತರಾಗಿರುವ ಕುಟುಂಬಗಳ ಸಮಗ್ರ ಮಾಹಿತಿಯನ್ನು ಜಿಲ್ಲಾಡಳಿತ ಕೂಡಲೇ ಕಲೆ ಹಾಕಿ ರಾಜ್ಯ ಸರಕಾರಕ್ಕೆ ವರದಿ ಸಲ್ಲಿಸಬೇಕು ಎಂದು ಒತ್ತಾಯಿಸಿದರು.
ಜಿಲ್ಲಾಡಳಿತ ಸಲ್ಲಿಸುವ ವರದಿಯನ್ನು ರಾಜ್ಯ ಸರಕಾರ ಕೇಂದ್ರಕ್ಕೂ ರವಾನಿಸುವ ಮೂಲಕ ಕೇಂದ್ರದ ನೆರವಿಗೆ ಪ್ರಸ್ತಾವನೆ ಸಲ್ಲಿಸಬೇಕುಎಂದೂ ಬೋಪಯ್ಯ ಆಗ್ರಹಿಸಿದರು.
ಸಾಮಾಗ್ರಿ ದುರುಪಯೋಗ ತಡೆಗಟ್ಟಿ
ನೊಂದವರ ನೆರವಿಗಾಗಿ ಬರುತ್ತಿರುವ ಪರಿಹಾರ ಸಾಮಾಗ್ರಿಗಳು ದುರುಪಯೋಗವಾಗುತ್ತಿರುವ ಬಗ್ಗೆಯೂ ಪ್ರಸ್ತಾಪಿಸಿದ ಬೋಪಯ್ಯ, ಇದನ್ನು ತಡೆಗಟ್ಟಲು ಜಿಲ್ಲಾಡಳಿತ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಸಾರ್ವಜನಿಕರು ಹಾಗೂ ಹೊ   ರ ಜಿಲ್ಲೆಯ ಸಂಘಸಂಸ್ಥೆಗಳಿಂದ ವ್ಯಾಪಕವಾಗಿ ಹರಿದು ಬರುತ್ತಿರುವ ನೆರವು ಸದ್ಬಳಕೆಯಾಗದೆ ಭಾರೀ ದುರುಪಯೋಗವಾಗುತ್ತಿರುವ ಬಗ್ಗೆ ದೂರುಗಳು ಬಂದಿವೆ. ಬೆಂಗಳೂರು, ಮೈಸೂರಿನಂತಹ ಮಹಾನಗರ ಸೇರಿದಂತೆ ಎಲ್ಲೆಡೆಯಿಂದ ಹರಿದು ಬರುತ್ತಿರುವ ಸಹಾಯವನ್ನು ಅಲ್ಲಲ್ಲಿ ತಡೆಯುತ್ತಿರುವ ಅವಕಾಶವಾದಿಗಳು, ಕೆಲವು ವಾಹನಗಳಿಗೆ ಸಂತ್ರಸ್ತರ ನೆರವಿನ ಹೆಸರಿನಲ್ಲಿ ಬ್ಯಾನರ್, ಭಿತ್ತಿಪತ್ರ ಅಳವಡಿಸಿಕೊಂಡು ವ್ಯವಸ್ಥಿತವಾಗಿ ಆಹಾರ ವಸ್ತುಗಳು, ವಸ್ತ್ರಗಳು, ಇತರ ಸಾಮಾಗ್ರಿಗಳನ್ನು ದೋಚುತ್ತಿದ್ದಾರೆ ಎಂದು ಬೋಪಯ್ಯ ದೂರಿದರು.
 ಈ ಬಗ್ಗೆ ಜಿಲ್ಲಾಧಿಕಾರಿಗಳು, ಪೊಲೀಸ್ ವರಿಷ್ಠಾಧಿಕಾರಿಗಳು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ಗಮನಕ್ಕೂ ತರಲಾಗಿದ್ದು, ಪ್ರಾಕೃತಿಕ ವಿಕೋಪದಿಂದ ಸಂತ್ರಸ್ತರಾಗಿರುವ ಗ್ರಾಮೀಣ ಜನತೆಗೆ ಇನ್ನೂ ನೆರವು ಲಭಿಸಿಲ್ಲ ಎಂದು ವಿಷಾದಿಸಿದರು.
ಮಡಿಕೇರಿ ಹಾಗೂ ಸೋಮವಾರಪೇಟೆ ತಾಲೂಕಿನ ಕೆಲವು ಗ್ರಾಮಸ್ಥರು ತೀವ್ರ ತೊಂದರೆಗೆ ಸಿಲುಕಿ ಕಣ್ಣೀರಿನ ಬದುಕು ಸಾಗಿಸುತ್ತಿದ್ದರೂ, ಸ್ವಾಭಿಮಾನದಿಂದ ಸಂಸತ್ರಸ್ತರ ಕೇಂದ್ರಗಳಿಗೂ ಬರದೆ ಬಂಧು ಬಳಗದ ಆಸರೆಯಲ್ಲಿದ್ದಾರೆ. ಅಂತಹವರನ್ನು ಗುರುತಿಸಿ ಅವರ ಮನೆ ಬಾಗಿಲಿಗೆ ನೆರವು ಒದಗಿಸುವ ಕೆಲಸವಾಗಬೇಕು ಎಂದ
ು ಬೋಪಯ್ಯ ಸಲಹೆ ಮಾಡಿದರು.ನಾಡಿನ ಜನತೆ ನೊಂದವರ ಕಣ್ಣೀರು ಒರೆಸುವಲ್ಲಿ ಏಕತೆಯಿಂದ ಸಮರೋಪಾದಿಯಲ್ಲಿ ಕಾರ್ಯಪ್ರವೃತ್ತರಾಗುವಂತೆಯೂ ಅವರು ಸಾರ್ವಜನಿಕರಲ್ಲಿ ಮನವಿ ಮಾಡಿದರು.
ಉಸ್ತುವಾರಿ ಸಚಿವರ ಭೇಟಿ
ಹೆಬ್ಬೆಟ್ಟಗೇರಿ ಗ್ರಾಮ ಸೇರಿದಂತೆ ಗುಡ್ಡ ಕುಸಿತದಿಂದ ಸಾಕಷ್ಟು ಹಾನಿಯಾಗಿರುವ ಅನೇಕ ಸ್ಥಳಗಳಿಗೆ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಸಾ.ರಾ.ಮಹೇಶ್ ರವರೊಂದಿಗೆ ಭೇಟಿ ನೀಡಿ ಪರಿಶೀಲಿಸಿ ಅಧಿಕಾರಿಗಳಿಂದ ಮಾಹಿತಿ ಪಡೆದರು. ಈ ಸಂದರ್ಭ ವಿಧಾನ ಪರಿಷತ್ ಸದಸ್ಯ ಸುನಿಲ್ ಸುಬ್ರಮಣಿ ಹಾಜರಿದ್ದರು

share
ವಾರ್ತಾಭಾರತಿ
ವಾರ್ತಾಭಾರತಿ
Next Story
X