Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಆ. 23ರಿಂದ ಮಡಿಕೇರಿಯಲ್ಲಿ...

ಆ. 23ರಿಂದ ಮಡಿಕೇರಿಯಲ್ಲಿ ಶಾಲಾ-ಕಾಲೇಜುಗಳು ಪುನರ್ ಆರಂಭ

ವಾರ್ತಾಭಾರತಿವಾರ್ತಾಭಾರತಿ22 Aug 2018 10:37 PM IST
share
ಆ. 23ರಿಂದ ಮಡಿಕೇರಿಯಲ್ಲಿ ಶಾಲಾ-ಕಾಲೇಜುಗಳು ಪುನರ್ ಆರಂಭ

ಮಡಿಕೇರಿ, ಆ.22 : ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ಮಳೆ ಪ್ರಮಾಣ ಕಡಿಮೆಯಾಗುತ್ತಿದ್ದು, ಮಡಿಕೇರಿ ಮತ್ತು ಸೋಮವಾರಪೇಟೆ ತಾಲ್ಲೂಕಿನಲ್ಲಿ ಅತಿವೃಷ್ಟಿಯಿಂದ ತೀವ್ರ ಹಾನಿಗೀಡಾಗಿರುವ ಪ್ರದೇಶಗಳ 61 ಶಾಲೆಗಳನ್ನು ಹೊರತುಪಡಿಸಿ, ಉಳಿದಂತೆ ಎಲ್ಲಾ ಶಾಲಾ-ಕಾಲೇಜುಗಳನ್ನು ಆ. 23 ರಿಂದ ಪುನರ್ ಆರಂಭಿಸಲು ಜಿಲ್ಲಾ ಉಸ್ತುವಾರಿ ಸಚಿವರಾದ ಸಾ.ರಾ.ಮಹೇಶ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಮಾಲೋಚನಾ ಸಭೆಯಲ್ಲಿ ತೀಮಾನಿರ್ಸಲಾಗಿದೆ.

ಶಾಸಕರಾದ ಕೆ.ಜಿ.ಬೋಪಯ್ಯ, ಎಂ.ಪಿ.ಅಪ್ಪಚ್ಚುರಂಜನ್, ವಿಧಾನ ಪರಿಷತ್ ಸದಸ್ಯರಾದ ಸುನಿಲ್ ಸುಬ್ರಮಣಿ, ಜಿ.ಪಂ.ಅಧ್ಯಕ್ಷರಾದ ಬಿ.ಎ.ಹರೀಶ್, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಅನ್ಬುಕುಮಾರ್, ಜಿಲ್ಲಾಧಿಕಾರಿ ಪಿ.ಐ.ಶ್ರೀವಿದ್ಯಾ ಅವರ ಅವರ ಉಪಸ್ಥಿತಿಯಲ್ಲಿ ನಡೆದ ಸಭೆಯಲ್ಲಿಈ ನಿರ್ಧಾರ ಕೈಗೊಳ್ಳಲಾಯಿತು.

ನಂತರ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಸಾ.ರಾ.ಮಹೇಶ್ ಅವರು ಮಾತನಾಡಿ, ಅತಿವೃಷ್ಟಿಯಿಂದಾಗಿ ಸಂತ್ರಸ್ಥರು ಸಂಕಷ್ಟಕ್ಕೆ ತುತ್ತಾಗಿದ್ದು, ಸಂತ್ರಸ್ಥರ ಮಕ್ಕಳ ಶಿಕ್ಷಣಕ್ಕಾಗಿ ಐದು ಸಾವಿರ ಶಾಲಾ ಪುಸ್ತಕ ನೀಡಲು ಕ್ರಮ ಕೈಗೊಳ್ಳಲಾಗಿದೆ. ಪರಿಹಾರ ಕೇಂದ್ರಗಳಲ್ಲಿ ಮಕ್ಕಳಿಗೆ ಶಾಲಾ ಪಠ್ಯ ಚಟುವಟಿಕೆ ಆರಂಭಿಸಲಾಗಿದೆ.

ಈಗಾಗಲೇ ಸಂತ್ರಸ್ಥರಿಗೆ ರಾಜ್ಯದ ವಿವಿಧ ಭಾಗಗಳಿಂದ ಆಹಾರ ಹಾಗೂ ಇತರ ಸಾಮಾಗ್ರಿಗಳು ಪೂರೈಕೆಯಾಗಿದ್ದು ಜಿಲ್ಲೆಯಲ್ಲಿ ಆರಂಭಿಸಲಾಗಿರುವ ಪರಿಹಾರ ಕೇಂದ್ರಗಳ ಸಂತ್ರಸ್ಥರಿಗೆ ವ್ಯವಸ್ಥಿತವಾಗಿ ಮತ್ತು ಉತ್ತಮ ಆಹಾರ ಪೂರೈಸಬೇಕು ಎಂದು ಅವರು ನಿರ್ದೇಶನ ನೀಡಿದರು.

ಪರಿಹಾರ ಕೇಂದ್ರಗಳಲ್ಲಿ ಯಾವುದೇ ರೀತಿಯ ದೂರುಗಳು ಬರದಂತೆ ನೋಡಿಕೊಳ್ಳಬೇಕು. ಲೋಪಗಳು ಕಂಡುಬಂದರೆ ಮುಂದಿನ ಕ್ರಮ ತೆಗೆದುಕೊಳ್ಳಬೇಕಾಗುತ್ತದೆ ಎಂದು ಜಿಲ್ಲಾ ಉಸು್ತವಾರಿ ಸಚಿವರು ಎಚ್ಚರಿಕೆ ನೀಡಿದರು.

ಪರಿಹಾರ ಕೇಂದ್ರಗಳಲ್ಲಿ ಸಂತ್ರಸ್ಥರಿಗೆ ಬಿಸಿ ನೀರಿನ ವ್ಯವಸ್ಥೆ ಕಲ್ಪಿಸಲು ಗ್ಯಾಸ್ ಗೀಸರ್ ಹಾಗೂ ಅಡುಗೆ ಅನಿಲ ಪೂರೈಕೆಯನ್ನು ಕೈಗೊಳ್ಳುವಂತೆ ಆಹಾರ ಇಲಾಖೆ ಉಪ ನಿರ್ದೇಶಕರಿಗೆ ಸೂಚನೆ ನೀಡಿದರು.

ಪ್ರವಾಹ ಪೀಡಿತ ಸಂತ್ರಸ್ಥರಿಗೆ ಪರಿಹಾರ ಸಾಮಾಗ್ರಿಗಳನ್ನು ತ್ವರಿತವಾಗಿ ವಿತರೆಣೆ ಮಾಡಲು ಅನುಕೂಲವಾಗುವಂತೆ ಜಿಲ್ಲೆಯ 5 ದಾಸ್ತಾನು ಕೇಂದ್ರಗಳ ಮೂಲಕ 100 ಕ್ಕೂ ಹೆಚ್ಚು ವಾಹನಗಳಲ್ಲಿ ಗ್ರಾ.ಪಂ.ಹಾಗೂ ಇತರೆ ಪಟ್ಟಣ ಪ್ರದೇಶಗಳಿಗೆ ನಿರಂತರವಾಗಿ ತಲುಪಿಸಲಾಗುತ್ತಿದ್ದು, ಅರ್ಹ ಸಂತ್ರಸ್ಥರಿಗೆ ಸಮರ್ಪಕವಾಗಿ ತಲುಪುವಂತಾಗಲು ವಿಶೇಷ ಗಮನಹರಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರು ನಿರ್ದೇಶನ ನೀಡಿದರು.

ಕೊಡಗು ಜಿಲ್ಲೆಯಲ್ಲಿ ಅಡುಗೆ ಅನಿಲ, ಗ್ಯಾಸ್ ಗೀಜರ್, ಪೆಟ್ರೋಲ್, ಡೀಸಲ್ ಪೂರೈಕೆಯಲ್ಲಿ ಯಾವುದೇ ರೀತಿಯಲ್ಲಿ ವ್ಯತ್ಯಯ ಉಂಟಾಗದಂತೆ ನಿಗಾ ವಹಿಸಬೇಕು. ಮೈಸೂರಿನಿಂದ 50 ಸಾವಿರ ಆಹಾರ ಕಿಟ್‌ಗಳು ಪೂರೈಕೆಯಾಗಲಿದ್ದು, ಇವುಗಳನ್ನು ಸಮರ್ಪಕವಾಗಿ ವಿತರಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಆಹಾರ ಇಲಾಖೆ ಉಪ ನಿರ್ದೇಶಕರಿಗೆ ನಿರ್ದೇಶನ ನೀಡಿದರು.

ನಿರಾಶ್ರಿತರಿಗೆ ಒದಗಿಸಲು ಹೆಚ್ಚುವರಿಯಾಗಿ ಟಾರ್ಪಲ್ ಹಾಗೂ ಪ್ಲಾಷ್ಟಿಕ್ ಬ್ಯಾಗ್‌ಗಳು ಅಗತ್ಯವಿದ್ದು, ಉಳಿದಂತೆ ಇತರೆ ಎಲ್ಲಾ ಬಗೆಯ ಪರಿಹಾರ ಸಾಮಗ್ರಿಗಳು ದಾಸ್ತಾನು ಕೇಂದ್ರದಲ್ಲಿ ಸಾಕಷ್ಟು ಪ್ರಮಾಣದಲ್ಲಿ ಲಭ್ಯವಿದೆ. ಅವುಗಳನ್ನು ಸಂತ್ರಸ್ಥರಿಗೆ ಚಾಚು ತಪ್ಪದೆ ತಲುಪಿಸುವಂತೆ ಸಂಬಂಧಪಟ್ಟ ನೋಡಲ್ ಅಧಿಕಾರಿಗಳಿಗೆ ಸಾ.ರಾ.ಮಹೇಶ್ ಅವರು ಸೂಚಿಸಿದರು.

ಜಿಲ್ಲೆಯಲ್ಲಿ ಸಾರಿಗೆ ಸಂಪರ್ಕ ವ್ಯವಸ್ಥೆಯನ್ನು ಪುನರಾರಂಭಿಸುವ ದಿಸೆಯಲ್ಲಿ ಲೋಕೋಪಯೋಗಿ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮತ್ತು ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಇಲಾಖೆಗಳ ಅಧಿಕಾರಿಗಳು ತ್ವರಿತ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರು ನಿರ್ದೇಶನ ನೀಡಿದರು.

ಮುಂದಿನ ದಿನಗಳಲ್ಲಿ ಇನ್ನಷ್ಟು ಅನಾಹುತ ತಪ್ಪಿಸಲು, ವೈಜ್ಞಾನಿಕವಾಗಿ ಕಾಮಗಾರಿ ಕೈಗೊಳ್ಳುವ ನಿಟ್ಟಿನಲ್ಲಿ ಭೂ ಕುಸಿತ ತಡೆಯಲು ರಕ್ಷಣಾ ತಡೆಗೋಡೆ ನಿರ್ಮಿಸುವುದು, ಜೊತೆಗೆ ಮರಳು ಚೀಲಗಳನ್ನು ಬಳಸುವ ಮೂಲಕ ತಾತ್ಕಾಲಿಕ ಪರಿಹಾರ ಕಾಮಗಾರಿ ಕೈಗೊಳ್ಳಲು ಸಂಬಂಧಟ್ಟ ಅಧಿಕಾರಿಗಳಿಗೆ ಸಚಿವರು ಹೇಳಿದರು.

ಜಿಲ್ಲೆಯಾದ್ಯಂತ ಬಸ್ ಸಂಚಾರ ಹಾಗೂ ಸಾರಿಗೆ ಸಂಪರ್ಕ ವ್ಯವಸ್ಥೆಯನ್ನು ಸುಧಾರಿಸಲು ಕೆಎಸ್‌ಆರ್‌ಟಿಸಿ ಹಾಗೂ ಸಾರಿಗೆ ಇಲಾಖೆ ಅಧಿಕಾರಿಗಳು ಕೂಡಲೇ ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಲಾಗಿದೆ.  ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಪರಿಹಾರ ಕಾಮಗಾರಿಗಳನ್ನು ತಕ್ಷಣದಿಂದ ಪ್ರಾರಂಭಿಸಲು ಅಧಿಕಾರಿಗಳಗೆ ಸೂಚಿಸಿದರು.

ಬರುವ ದಿನಗಳಲ್ಲಿ ಪ್ರಕೃತಿ ವಿಕೋಪ ತಡೆಯುವ ನಿಟ್ಟಿನಲ್ಲಿ, ಮಳೆ ನೀರು ಸಾರಾಗವಾಗಿ ಹರಿದು ಹೋಗಲು ವ್ಯವಸ್ಥಿತ ಚರಂಡಿ ನಿರ್ಮಾಣಕ್ಕೆ ಯೋಜನೆ ಸಿದ್ಧಪಡಿಸಲು ಸಚಿವರು ಸೂಚನೆ ನೀಡಿದರು.

ಸಂತ್ರಸ್ಥರಿಗೆ ಪುನರ್ವಸತಿ ಕಲ್ಪಿಸುವ ನಿಟ್ಟಿನಲ್ಲಿ ಸರ್ಕಾರಿ ಭೂಮಿ ಗುರುತಿಸುವ ಪ್ರಕ್ರಿಯೆಯನ್ನು ತಕ್ಷಣವೇ ಕೈಗೊಳ್ಳುವಂತೆ ಕಂದಾಯ ಇಲಾಖೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಪ್ರಕೃತಿ ವಿಕೋಪದಿಂದ ಉಂಟಾದ ಮನೆ ಹಾನಿ, ಕೃಷಿ ಮತ್ತು ತೋಟಗಾರಿಕೆ ಬೆಳೆ ನಷ್ಟದ ಸಮೀಕ್ಷೆ ವರದಿ ಪಡೆದು ಸಂಬಂಧಪಟ್ಟವರಿಗೆ ಪರಿಹಾರ ಧನ ಪಾವತಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸಾ.ರಾ.ವುಹೇಶ್ ಅವರು ಹೇಳಿದರು.

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ, ಲೋಕೋಪಯೋಗಿ ಇಲಾಖೆ, ಪಂಚಾಯತ್ ರಾಜ್ ಎಂಜಿನಿಯರಿಂಗ್ ಇಲಾಖೆ ಇವರ ಸಮನ್ವಯತೆಯಲ್ಲಿ ಅಗತ್ಯಕ್ಕೆ ಅನುಗುಣವಾಗಿ ಡ್ರೋನ್ ಕ್ಯಾಮರಾಗಳನ್ನು ಬಳಸಿ ಸಮೀಕಾ್ಷ ಕಾರ್ಯ ಕೈಗೊಳ್ಳಲಾಗುವುದು. ಅತಿವೃಷ್ಟಿಯಿಂದಾಗಿ ಆಸ್ತಿ-ಪಾಸ್ತಿಯ ದಾಖಲೆಗಳನ್ನು ಕಳೆದುಕೊಂಡವರಿಗೆ ದಾಖಲೆಗಳನ್ನು ಸೃಜಿಸಿಕೊಡುವ ಕಾರ್ಯ ಪ್ರಾರಂಭಿಸಲಾಗುವುದು ಎಂದು ಜಿಲ್ಲಾಧಿಕಾರಿ ಪಿ.ಐ. ಶ್ರೀವಿದ್ಯಾ ಅವರು ಮಾಹಿತಿ ನೀಡಿದರು.

ಶಾಸಕರಾದ ಕೆ.ಜಿ.ಬೋಪಯ್ಯ, ಎಂ.ಪಿ.ಅಪ್ಪಚ್ಚುರಂಜನ್, ವಿಧಾನ ಪರಿಷತ್ ಸದಸ್ಯರಾದ ಸುನಿಲ್ ಸುಬ್ರಮಣಿ, ಜಿ.ಪಂ.ಅಧ್ಯಕ್ಷರಾದ ಬಿ.ಎ.ಹರೀಶ್ ಅವರು ಹಲು ಉಪಯುಕ್ತ ಸಲಹೆ ನೀಡಿದರು. ವಸತಿ ಇಲಾಖೆ ಆಯುಕ್ತರಾದ ಅನ್ಬುಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾದಿಕಾರಿ ಸುಮನ್ ಡಿ.ಪೆನ್ನೇಕರ್, ಚಾರುಲತಾ ಸೋಮಲ್, ಜಿ.ಪಂ.ಸಿಇಒ ಪ್ರಶಾಂತ್ ಕುಮಾರ್ ಮಿಶ್ರ ಇತರರು ಹಾಜರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X