Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಆಳ್ವಾಸ್ ರೋಸ್ಟ್ರಮ್: ವಿಶೇಷ ಉಪನ್ಯಾಸ

ಆಳ್ವಾಸ್ ರೋಸ್ಟ್ರಮ್: ವಿಶೇಷ ಉಪನ್ಯಾಸ

ವಾರ್ತಾಭಾರತಿವಾರ್ತಾಭಾರತಿ23 Aug 2018 8:25 PM IST
share
ಆಳ್ವಾಸ್ ರೋಸ್ಟ್ರಮ್: ವಿಶೇಷ ಉಪನ್ಯಾಸ

ಮೂಡುಬಿದಿರೆ, ಆ. 23 : ವಿದ್ಯಾರ್ಥಿಗಳು ಉದ್ಯೋಗವನ್ನು ಹುಡುಕಿಕೊಂಡು ಹೋಗಬಾರದು. ಉದ್ಯೋಗವೇ ವಿದ್ಯಾರ್ಥಿಗಳನ್ನು ಹುಡುಕಿಕೊಂಡು ಬರಬೇಕು. ಅಂತಹ ಕೌಶಲ್ಯವನ್ನು ವಿದ್ಯಾರ್ಥಿಗಳು ಹೊಂದಿರಬೇಕು ಎಂದು ಅಲಹಬಾದ್ ಐಐಐಟಿ ನಿರ್ದೇಶಕರಾದ ಡಾ. ಪಿ. ನಾಗಭೂಷಣ್ ಹೇಳಿದರು.

ಆಳ್ವಾಸ್ ಕಾಲೇಜಿನ ರೋಸ್ಟ್ರಮ್ ಸ್ಪೀಕರ್ ಕ್ಲಬ್‌ನ ವತಿಯಿಂದ ಆಯೋಜಿಸಲಾಗಿದ್ದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿ ಗಳನ್ನು ಉದ್ದೇಶಿಸಿ ಮಾತನಾಡಿದರು.

ವಿದ್ಯಾರ್ಥಿಗಳು ತಮ್ಮ ಆಸಕ್ತಿಯ ಅನುಸಾರವಾಗಿ ಶಿಕ್ಷಣ ಪಡೆಯಬೇಕೇ ಹೊರತು, ತಂದೆ ತಾಯಿಯ ಇಚ್ಛೆಯಂತೆ ಅಲ್ಲ. ಪ್ರಸ್ತುತ ಪರಿಸ್ಥಿತಿಯಲ್ಲಿ ಪೋಷಕರ ಒತ್ತಾಯಕ್ಕೆ ವಿದ್ಯಾರ್ಥಿಗಳು ಇಂಜಿನಿಯರಿಂಗ್ ಕೋರ್ಸ್ ಅಭ್ಯಾಸ ಮಾಡುತ್ತಿದ್ದಾರೆ. ಇದು ಉತ್ತಮ ಲಕ್ಷಣ ಅಲ್ಲ. ನೀವು ಭವಿಷ್ಯದಲ್ಲಿ ನಿಮ್ಮ ಮಕ್ಕಳ ಇಚ್ಛೆಗೆ ಅನುಸಾರವಾಗಿ ಶಿಕ್ಷಣ ಕೊಡಿಸಿ ಎಂದು ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು.

ಜೀವನದ ಯಶಸ್ಸಿಗೆ ಕಲಿಕೆ ಎಂಬ ತಳಪಾಯ ಮುಖ್ಯ. ಉದ್ಯೋಗವನ್ನು ಪಡೆಯಲು, ಪರೀಕ್ಷೆ ಎದುರಿಸಲು ವಿದ್ಯಾರ್ಥಿಗಳು ವಿಷಯಗಳನ್ನು ಕಲಿಯಬೇಕೆ ಹೊರತು, ತಯಾರಿ ನಡೆಸಬಾರದು. ಎಲ್ಲಾ ಕಾಲೇಜುಗಳಲ್ಲಿ ಇಂಜಿನಿಯರ್‌ಗಳನ್ನು ತಯಾರು ಮಾಡುತ್ತಿದ್ದಾರೆ ಹೊರತು ಸಕಲ ಕೌಶಲ್ಯಗಳಿಂದ ಸಿದ್ದಗೊಳಿಸುತ್ತಿಲ್ಲ. ಆದರೆ ಆಳ್ವಾಸ್ ಕಾಲೇಜ್‌ನ ಇಂಜಿನಿಯರ್ ವಿದ್ಯಾರ್ಥಿಗಳು ಇದಕ್ಕೆ ಹೊರತಾಗಿದ್ದಾರೆ ಎಂದು ತಿಳಿಸಿದರು.

ಎಲ್ಲರೂ ಸಮಸ್ಯೆಗಳಿಗೆ ಕಾರಣ ಹುಡುಕುತ್ತಾರೆಯೇ ಹೊರತು ಯಾರು ಎದುರಿಸಲು ಸಿದ್ಧರಿಲ್ಲ. ಜೀವನದಲ್ಲಿ ಆಗಿ ಹೋದ ಘಟನೆಯ ಬಗ್ಗೆ ಯೋಚನೆ ಮಾಡಬಾರದು. ನಾಳೆಯ ಬಗ್ಗೆ ಚಿಂತಿಸದೇ ಇಂದಿನ ಬಗ್ಗೆ ಯೋಜನೆ ಮಾಡಬೇಕು. ನಿಮ್ಮ ಮೇಲೆ ನೀವು ನಂಬಿಕೆ ಇಟ್ಟು ನಿಮ್ಮ ವಿಚಾರಗಳನ್ನ ಧೈರ್ಯದಿಂದ ಹೊರಸೂಸಿ ಎಂದು ವಿದ್ಯಾರ್ಥಿಗಳಿಗೆ ಸ್ಪೂರ್ತಿಯ ನುಡಿಗಳನ್ನಾಡಿದರು.

ಅಳ್ವಾಸ್ ಕಾಲೇಜಿನ ಮ್ಯಾನೇಜಿಂಗ್ ಟ್ರಸ್ಟಿ ವಿವೇಕ್ ಆಳ್ವ ಮಾತನಾಡಿ ಈ ಒಪ್ಪಂದ ನಮ್ಮ ಕಾಲೇಜಿನ ವಿದ್ಯಾರ್ಥಿಗಳು ಮತ್ತು ಶಿಕ್ಷಕ ವೃಂದಕ್ಕೆ ವಿವಿಧ ರಂಗಗಳಲ್ಲಿ ಹೆಚ್ಚಿನ ಜ್ಞಾನ ಸಂಪಾದನೆಗೆ ಸಹಕಾರಿಯಾಗಿದೆ. ಇದನ್ನು ಸರಿಯಾಗಿ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಹೇಳಿದರು.

ಈ ಕಾರ್ಯಕ್ರಮದ ಮುಂಚೆ, ಐಐಐಟಿ ಅಲಹಬಾದ್ ಮತ್ತು ಆಳ್ವಾಸ್ ಕಾಲೇಜಿನ ನಡುವಿನ ಒಡಂಬಡಿಕೆಯ ವಿನಿಮಯವು ಆಳ್ವಾಸ್ ಕಾಲೇಜಿನ ಅಧ್ಯಕ್ಷರಾದ ಡಾ. ಎಂ ಮೋಹನ್ ಆಳ್ವ ಮತ್ತು ಐಐಐಟಿ ಅಲಹಾಬಾದ್‌ನ ನಿರ್ದೇಶಕರಾದ ಡಾ. ಪಿ ನಾಗಭೂಷಣ್ ನಡುವೆ ಆಳ್ವಾಸ್ ಪ್ರತಿಷ್ಠಾನದ ಪ್ರದಾನ ಕಚೇರಿಯಲ್ಲಿ ಜರುಗಿತು. ಈ ಸಂದರ್ಭದಲ್ಲಿ ಆಳ್ವಾಸ್ ಕಾಲೇಜಿನ ವಿವಿಧ ಇಂಜಿನಿಯರ್ ವಿಭಾಗಗಳ ಮುಖ್ಯಸ್ಥರು ಮತ್ತು ಡಾ. ಪಿ ನಾಗಭೂಷಣ್ ರವರ ಪತ್ನಿ ಲಕ್ಷ್ಮಿ ನಾಗಭೂಷಣ್ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಶ್ರದ್ಧಾ ಶೆಟ್ಟಿ ನಿರೂಪಣೆ ಮಾಡಿದರು.

ಈ ಒಡಂಬಡಿಕೆಯ ಮೊದಲ ಹಂತವಾಗಿ ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನ ಉಪನ್ಯಾಸಕರ ಒಂದು ತಂಡ ಸದ್ಯದಲ್ಲೆ ಐಐಐಟಿ ಅಲಹಬಾದ್‌ಗೆ ಅದ್ಯಯನದ ಹಿನ್ನಲೆಯಲ್ಲಿ ತೆರಳಲಿದ್ದು, ನಂತರ ದಿನಗಳಲ್ಲಿ ಅಲ್ಲಿನ ನುರಿತ ಆರು ಜನ ಉಪನ್ಯಾಸಕರ ತಂಡ ಮೂಡುಬಿದಿರೆಗೆ ಆಗಮಿಸಿ ಕಾಲೇಜಿನ ಉಪನ್ಯಾಸಕರಿಗೆ ವಿವಿಧ ಕ್ಷೇತ್ರಗಳಲ್ಲಿ ತರಬೇತಿಯನ್ನು ನೀಡಲಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X