Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನನ್ನ ತಂದೆಯನ್ನು ಕೊಂದವನು ಸತ್ತಾಗ ಆತನ...

ನನ್ನ ತಂದೆಯನ್ನು ಕೊಂದವನು ಸತ್ತಾಗ ಆತನ ಮಕ್ಕಳಲ್ಲಿ ನನ್ನನ್ನು ಕಂಡಿದ್ದೇನೆ: ರಾಹುಲ್ ಗಾಂಧಿ

ವಾರ್ತಾಭಾರತಿವಾರ್ತಾಭಾರತಿ23 Aug 2018 8:25 PM IST
share
ನನ್ನ ತಂದೆಯನ್ನು ಕೊಂದವನು ಸತ್ತಾಗ ಆತನ ಮಕ್ಕಳಲ್ಲಿ ನನ್ನನ್ನು ಕಂಡಿದ್ದೇನೆ: ರಾಹುಲ್ ಗಾಂಧಿ

ಹೊಸದಿಲ್ಲಿ, ಆ.23: “ನನ್ನ ತಂದೆ ರಾಜೀವ್ ಗಾಂಧಿಯನ್ನು ಹತ್ಯೆಗೈದ ಎಲ್‌ಟಿಟಿಇ ಮುಖ್ಯಸ್ಥ ಪ್ರಭಾಕರನ್ ಹತ್ಯೆಯಾದಾಗ ನನಗೆ ಮತ್ತು ನನ್ನ ಸಹೋದರಿ ಪ್ರಿಯಾಂಕಾಗೆ ಸಂತೋಷವಾಗಿರಲಿಲ್ಲ” ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ತಿಳಿಸಿದ್ದಾರೆ.

ಪ್ರಭಾಕರನ್ ಹತ್ಯೆಯಿಂದ ಅವರ ಮಕ್ಕಳ ಜೀವನದ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ ಎಂದು ನಮಗನ್ನಿಸಿತ್ತು ಎಂದು ಅವರು ತಿಳಿಸಿದ್ದಾರೆ. ಜರ್ಮನಿಯ ಬುಸೆರಿಯಸ್ ಸಮ್ಮರ್ ಸ್ಕೂಲ್‌ನಲ್ಲಿ ಜನರನ್ನುದ್ದೇಶಿಸಿ ಮಾತನಾಡುತ್ತಿದ್ದ ವೇಳೆ, “ಹಿಂಸಾಚಾರದ ಕಾರಣ ನಾನು ನನ್ನ ಕುಟುಂಬದ ಇಬ್ಬರು ಸದಸ್ಯರನ್ನು ಕಳೆದುಕೊಂಡಿದ್ದೇನೆ” ಎಂದು ತಿಳಿಸಿದ್ದಾರೆ. “ನನ್ನ ಅಜ್ಜಿ (ಇಂದಿರಾ ಗಾಂಧಿ) ಮತ್ತು ತಂದೆ (ರಾಜೀವ್ ಗಾಂಧಿ) ಇಬ್ಬರನ್ನೂ ಹತ್ಯೆ ಮಾಡಲಾಗಿತ್ತು. ಹಾಗಾಗಿ ನಾನು ಹಿಂಸಾಚಾರದಿಂದ ಸಂಕಷ್ಟಕ್ಕೊಳಗಾಗಿದ್ದೇನೆ. ನಾನು ನನ್ನ ಅನುಭವದಿಂದ ಮಾತನಾಡುತ್ತಿದ್ದೇನೆ. ಹಿಂಸಾಚಾರದ ನಂತರ ನೀವು ಮುಂದಕ್ಕೆ ಸಾಗಬೇಕಾದರೆ ಕ್ಷಮೆಯೊಂದೇ ದಾರಿ. ಬೇರೆ ಯಾವ ದಾರಿಯೂ ಇಲ್ಲ. ಮತ್ತು ಕ್ಷಮಿಸಬೇಕಾದರೆ ನಿಜವಾಗಿ ಏನಾಯಿತು ಮತ್ತು ಯಾಕಾಯಿತು ಎಂಬುದನ್ನು ಅರ್ಥಮಾಡಿಕೊಳ್ಳುವ ಅಗತ್ಯವಿದೆ” ಎಂದು ರಾಹುಲ್ ಗಾಂಧಿ ತಿಳಿಸಿದ್ದಾರೆ. “1991ರಲ್ಲಿ ನನ್ನ ತಂದೆ ಉಗ್ರರಿಗೆ ಬಲಿಯಾಗಿದ್ದರು. ಅವರನ್ನು ಹತ್ಯೆ ಮಾಡಿದ್ದ ವ್ಯಕ್ತಿ 2009ರಲ್ಲಿ ಶ್ರೀಲಂಕಾದ ಗದ್ದೆಯಲ್ಲಿ ಸತ್ತು ಬಿದ್ದಿದ್ದ. ಆಗ ನಾನು ನನ್ನ ಸಹೋದರಿಗೆ ಕರೆ ಮಾಡಿದೆ. ಆದರೆ ನಾನು ಸಂತೋಷಗೊಂಡಿರಲಿಲ್ಲ. ಈ ಸಂದರ್ಭದಲ್ಲಿ ನಾನು ಸಂಭ್ರಮಿಸಬೇಕಿತ್ತು. ಆದರೆ ನನಗೆ ಆಗುತ್ತಿಲ್ಲ ಎಂದು ನಾನು ಆಕೆಗೆ ತಿಳಿಸಿದೆ. ಆಕೆ ಕೂಡಾ ಹೌದು, ನನಗೂ ಸಂತೋಷವಾಗಲಿಲ್ಲ ಎಂದು ಹೇಳಿದ್ದಳು” ಎಂದು ರಾಹುಲ್ ಆ ದಿನವನ್ನು ಮೆಲುಕು ಹಾಕಿದ್ದಾರೆ.

ಪ್ರಭಾಕರನ್ ಓರ್ವ ದುಷ್ಟ ವ್ಯಕ್ತಿಯಾಗಿರಬಹುದು. ಆದರೆ ಆತನ ಸಾವಿನಿಂದ ಆತನ ಮಕ್ಕಳ ಮೇಲೆ ಪರಿಣಾಮ ಬೀಳುವ ಸಾಧ್ಯತೆಯಿತ್ತು. “ಆ ಮಕ್ಕಳಲ್ಲಿ ನಾನು ನನ್ನನ್ನು ಕಂಡಿದ್ದೇನೆ. ನನ್ನ ತಂದೆ ಸತ್ತಾಗ ನಾನು ಹೇಗೆ ಅತ್ತಿದ್ದೇನೋ ಅವರೂ ಹಾಗೆಯೇ ಅಳುತ್ತಿರಬಹುದು” ಎಂದು ರಾಹುಲ್ ವಿಷಾದ ವ್ಯಕ್ತಪಡಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X