Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕೊಡಗಿನ ನಿರಾಶ್ರಿತರಿಗೆ ಆಶ್ರಯ ನೀಡಲು 42...

ಕೊಡಗಿನ ನಿರಾಶ್ರಿತರಿಗೆ ಆಶ್ರಯ ನೀಡಲು 42 ಎಕರೆ ಜಾಗ ನಿಗದಿ: ಸಚಿವ ಯು.ಟಿ.ಖಾದರ್

ವಾರ್ತಾಭಾರತಿವಾರ್ತಾಭಾರತಿ23 Aug 2018 8:53 PM IST
share
ಕೊಡಗಿನ ನಿರಾಶ್ರಿತರಿಗೆ ಆಶ್ರಯ ನೀಡಲು 42 ಎಕರೆ ಜಾಗ ನಿಗದಿ: ಸಚಿವ ಯು.ಟಿ.ಖಾದರ್

ಮಡಿಕೇರಿ,ಆ.23: ಕೊಡಗು ಜಿಲ್ಲೆಯಲ್ಲಿ ಪ್ರಕೃತಿ ವಿಕೋಪದಿಂದ ಸಂತ್ರಸ್ತರಾದ ಗ್ರಾಮಸ್ಥರಿಗೆ ಮಡಿಕೇರಿ, ಸೋಮವಾರಪೇಟೆ ತಾಲೂಕಿನ ವಿವಿಧೆಡೆ 42 ಎಕರೆ ಜಾಗವನ್ನು ಗುರುತಿಸಲಾಗಿದ್ದು, ಸಮಾರೋಪಾದಿಯಲ್ಲಿ ನವ ತಂತ್ರಜ್ಞಾನ ಬಳಸಿ ಮಾದರಿ ಮನೆಗಳನ್ನು ಸರ್ಕಾರ ನಿರ್ಮಿಸಿಕೊಡಲಿದೆ ಎಂದು  ನಗರಾಭಿವೃದ್ಧಿ ಮತ್ತು ವಸತಿ ಸಚಿವ ಯು.ಟಿ.ಖಾದರ್ ತಿಳಿಸಿದ್ದಾರೆ. 

ಮಡಿಕೇರಿಯಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಈಗಾಗಲೇ 42 ಎಕರೆ ಜಾಗವನ್ನು ಮಡಿಕೇರಿ ತಾಲೂಕಿನ ಕೆ.ನಿಡುಗಣೆ, 1 ನೇ ಮೊಣ್ಣಂಗೇರಿ, ಕರ್ಣಂಗೇರಿ, ಸೋಮವಾರಪೇಟೆ ತಾಲೂಕಿನ ತಾಕೇರಿ ಗ್ರಾಮಗಳಲ್ಲಿ ಗುರುತಿಸಲಾಗಿದೆ. ಪ್ರತಿ ಪಂಚಾಯತ್ ನಿಂದಲೂ ಲಭ್ಯವಿರುವ ಜಮೀನಿನ ಮಾಹಿತಿ ತರಿಸಿಕೊಳ್ಳಲಾಗುತ್ತಿದೆ. ಮುಂದಿನ ದಿನಗಳಲ್ಲಿ ಸೂಕ್ತ ನಿವೇಶನಗಳನ್ನು ಗುರುತಿಸಿ ನಿರಾಶ್ರಿತರಿಗೆ ಸೂಕ್ತ ಮನೆಗಳನ್ನು ನಿರ್ಮಿಸಿಕೊಡಲಾಗುತ್ತದೆ ಎಂದರು. ಕೊಡಗಿನಲ್ಲಿ ಲಭ್ಯವಿರುವ ಜಾಗಗಳನ್ನು ಗುರುತಿಸಿ ಪರಿಶೀಲನೆ ನಡೆಸಲೆಂದೇ ವಿಶೇಷ ಹೆಚ್ಚುವರಿ ಜಿಲ್ಲಾಧಿಕಾರಿಯಾಗಿ ಎಂ.ಕೆ.ಜಗದೀಶ್ ಅವರನ್ನು ನೇಮಿಸಲಾಗಿದೆ ಎಂದು ಹೇಳಿದರು.

ಎಲ್ಲವನ್ನೂ ಮ್ಯಾಜಿಕ್ ಮಾಡಲು ಅಸಾಧ್ಯ, ಆದರೆ ಕೊಡಗಿನ ಸಂಸ್ತರಿಗೆ ನಿವೇಶನ, ಮನೆ ನಿರ್ಮಾಣ ಕಾರ್ಯವನ್ನು ನಿರೀಕ್ಷೆಗೂ ಮೀರಿದ ವೇಗದಲ್ಲಿ ಸರ್ಕಾರ ಮಾಡಲು ಮುಂದಾಗಿದೆ ಎಂದು ಸಚಿವರು ತಿಳಿಸಿದರು.

ಭವಿಷ್ಯದಲ್ಲಿ ಇಂಥಹ ಪ್ರಕೃತಿ ವಿಕೋಪದ ದುರಂತ ತಪ್ಪಿಸಲು ಗುಡ್ಡದ ಮೇಲೆ ಮನೆ ನಿರ್ಮಾಣಕ್ಕೆ ಸಂಬಂಧಿಸಿದಂತೆ ಕಟ್ಟುನಿಟ್ಟಿನ ನೀತಿ ಜಾರಿಗೆ ತರಲಾಗುತ್ತದೆ. ಕರ್ನಾಟಕ ಸರಕಾರ ಕಟ್ಟಡ ನಿರ್ಮಾಣ ಕಾನೂನು ಜಾರಿಗೊಳಿಸಲು ಚಿಂತನೆ ನಡೆಸಿದೆ ಎಂದು ಅವರು ತಿಳಿಸಿದರು.

ರಾಜ್ಯ ಸರಕಾರದ ಪಾಲಿಗೆ ಕೊಡಗಿನ ಪ್ರಕೃತಿ ವಿಕೋಪ ನಿರ್ವಹಣೆ ಪರೀಕ್ಷೆಯಂತಿದೆ. ಇದನ್ನು ಸಮರ್ಥವಾಗಿ ನಿರ್ವಹಿಸಲು ರಾಜ್ಯ ಸರಕಾರ ಬದ್ದವಾಗಿದೆ ಎಂದು ಹೇಳಿದ ಖಾದರ್, ಸರಕಾರ ಇರುವುದೇ ಜನರಿಗಾಗಿ. ಹೀಗಿರುವಾಗ ಸಂಕಷ್ಟದಲ್ಲಿರುವ ಜನತೆಯ ಸಮಸ್ಯೆ ಪರಿಹಾರಕ್ಕೆ ಎಷ್ಟು ಖರ್ಚಾದರೂ ನಿಭಾಯಿಸಲು ಸರಕಾರ ಸಿದ್ದವಿದೆ ಎಂದು ಹೇಳಿದರು.

ಜಿಲ್ಲೆಯಾದ್ಯಂತ ಪ್ರಕೃತಿ ವಿಕೋಪದಿಂದ ಮನೆ ಕಳೆದುಕೊಂಡವರ ಪಟ್ಟಿ ತಯಾರಿಸುವ ಕಾರ್ಯಕ್ಕೆ ಚಾಲನೆ ದೊರಕಲಿದ್ದು ಆಗ ಸ್ಪಷ್ಟ ಚಿತ್ರಣ ದೊರಕಲಿದೆ ಎಂದು ಹೇಳಿದ ಸಚಿವರು, ಫಲಾನುಭವಿಗಳಿಗೆ ಯೋಗ್ಯ ಜೀವನ ನಿರ್ವಹಣೆ ಸ್ಥಿತಿ ಕಲ್ಪಿಸಲು ಸರಕಾರ ಮುಂದಾಗಲಿದೆ ಎಂದು ಭರವಸೆ ನೀಡಿದರು.

ಜಿಲ್ಲೆಯಲ್ಲಿ ಪ್ರಕೃತಿ ವಿಕೋಪದಿಂದ 1120 ಮನೆಗಳು ಹಾನಿಗೊಳಗಾಗಿದ್ದು 186 ಮನೆಗಳು ಸಂಪೂರ್ಣ ನಾಶವಾಗಿದೆ. ಕುಶಾಲನಗರದಲ್ಲಿ ಕಾವೇರಿ ನದಿ ತೀರಿದಲ್ಲಿನ 16 ಮನೆ ಕಳೆದುಕೊಂಡವರಿಗೆ ಮನೆ ನಿರ್ಮಿಸಲಾಗುತ್ತದೆ ಎಂದವರು ತಿಳಿಸಿದರು.

ಜಿಲ್ಲಾಧಿಕಾರಿ ಶ್ರೀವಿದ್ಯಾ ಹಾಗೂ ರಾಜ್ಯ ಕಂದಾಯ ಇಲಾಖೆಯ ಕಾರ್ಯದರ್ಶಿ ಅನ್ಬುದಾಸ್ ಸುದ್ದಿಗೋಷ್ಟಿಯಲ್ಲಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X