Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕಾಂಡನಕೊಲ್ಲಿಯಲ್ಲಿ ವೃದ್ಧ ದಂಪತಿಗಳ...

ಕಾಂಡನಕೊಲ್ಲಿಯಲ್ಲಿ ವೃದ್ಧ ದಂಪತಿಗಳ ರಕ್ಷಣೆ: ಸಾವನ್ನೇ ಗೆದ್ದು ಬಂದ ಶತಾಯುಷಿ ಕಾವೇರಮ್ಮ

ಕೊಡಗು ಜಲಪ್ರಳಯ

ವಾರ್ತಾಭಾರತಿವಾರ್ತಾಭಾರತಿ23 Aug 2018 8:59 PM IST
share
ಕಾಂಡನಕೊಲ್ಲಿಯಲ್ಲಿ ವೃದ್ಧ ದಂಪತಿಗಳ ರಕ್ಷಣೆ: ಸಾವನ್ನೇ ಗೆದ್ದು ಬಂದ ಶತಾಯುಷಿ ಕಾವೇರಮ್ಮ

ಮಡಿಕೇರಿ, ಆ.23: ಮಹಾಮಳೆಯಿಂದ ಗ್ರಾಮಕ್ಕೆ ಗ್ರಾಮವೇ ಕೆಸರಿನಾರ್ಭಟದಲ್ಲಿ ಸಿಲುಕಿ ಹಲವು ಸಾವು ನೋವುಗಳು ಸಂಭವಿಸಿದ್ದರೂ, 103 ವರ್ಷ ಪ್ರಾಯದ ಕಾವೇರಮ್ಮ ಅವರು ಸಾವನ್ನು ಗೆದ್ದು ಬಂದಿದ್ದಾರೆ. 

ಮುಕ್ಕೋಡ್ಲುವಿನ ತಮ್ಮ ಮನೆಯಲ್ಲಿ ನಡೆಯಲಾಗದ ಸ್ಥಿತಿಯಲ್ಲಿದ್ದ ಅವರು, ಮಹಾಮಳೆಯಿಂದಾಗಿ ಏನೂ ಮಾಡಲಾಗದೆ, ಅತಂತ್ರ ಸ್ಥಿತಿಯಲ್ಲಿ ಪಕ್ಕದ ಮನೆಯವರ ನಿಗಾದಲ್ಲಿದ್ದರು. ಗ್ರಾಮ ದ್ವೀಪದಂತಾಗಿದ್ದ ಕಾರಣ, ಗ್ರಾಮಸ್ಥರಿಂದಲೂ ಕಾವೇರಮ್ಮ ಅವರನ್ನು ರಕ್ಷಿಸಲು ಸಾಧ್ಯವಾಗಿರಲಿಲ್ಲ. ಕಳೆದ ಎರಡು ದಿನಗಳಿಂದ ಈ ಭಾಗದಲ್ಲಿ ಸಂತ್ರಸ್ತರನ್ನು ರಕ್ಷಿಸುವ ಕಾರ್ಯಾಚರಣೆ ಚುರುಕು ಗೊಂಡಿದ್ದು, ಇಂದು ಗ್ರಾಮಸ್ಥರು ಹಾಗೂ ಕಾರ್ಯಾಚರಣೆ ತಂಡ ಮನೆಯೊಳಗೆ ಅಸಹಾಯಕ ಸ್ಥಿತಿಯಲ್ಲಿದ್ದ ಕಾವೇರಮ್ಮ ಅವರನ್ನು ರಕ್ಷಿಸಿದ್ದಾರೆ. ನಡೆಯಲಾಗದೆ ನಿಶಕ್ತರಾಗಿದ್ದ ಅವರನ್ನು ಗ್ರಾಮಸ್ಥರು ಎತ್ತಿಕೊಂಡು ಬಂದು ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿದ್ದು, ಈಗ ಅವರು ಚೇತರಿಸಿಕೊಳ್ಳುತ್ತಿದ್ದಾರೆ. 

ಮಹಾಮಳೆಯಿಂದ ಸಂತ್ರಸ್ತರಾದ ಜನರನ್ನು ರಕ್ಷಿಸುವ ಕಾರ್ಯಾಚರಣೆ ಗುರುವಾರವೂ ಮುಂದುವರೆದಿದ್ದು, ಲೈನ್‍ಮನೆಯೊಂದರಲ್ಲಿ ಸಿಲುಕಿದ್ದ ವೃದ್ಧ ದಂಪತಿಗಳನ್ನು ಎನ್‍ಡಿಆರ್‍ಎಫ್, ಪೊಲೀಸ್, ಅಗ್ನಿಶಾಮಕ ದಳ ಮತ್ತು ಸ್ಥಳೀಯರು ರಕ್ಷಿಸಿದ್ದಾರೆ. 

ಹೆಮ್ಮೆತ್ತಾಳು ಸಮೀಪದ ಕಾಂಡನಕೊಲ್ಲಿ ಎಂಬಲ್ಲಿ ಗುಡ್ಡ ಕುಸಿದು ರಸ್ತೆ ಸಂಪರ್ಕವಿಲ್ಲದೆ ತೋಟದ ಲೈನ್ ಮನೆಯಲ್ಲಿ ಪಳನಿ ಮತ್ತು ಶಾಂತ ದಂಪತಿಗಳು ಕಳೆದು 4 ದಿನಗಳಿಂದ ಸಿಲುಕಿದ್ದರು. ಮೊಬೈಲ್ ಸಂಪರ್ಕ ವ್ಯವಸ್ಥೆಯಿಲ್ಲದ್ದರಿಂದಾಗಿ ಈ ವೃದ್ಧ ದಂಪತಿಗಳಿಗೆ ಯಾರನ್ನೂ ಸಂಪರ್ಕಿಸಲು ಸಾಧ್ಯವಾಗಿರಲಿಲ್ಲ. ಮಾತ್ರವಲ್ಲದೆ ತೀವ್ರ ಅನಾರೋಗ್ಯ ಮತ್ತು ಹಸಿವಿನಿಂದ ಬಳಲಿದ ವೃದ್ಧ ದಂಪತಿಗಳು ಬದುಕುವ ಆಸೆಯನ್ನೇ ಕೈ ಬಿಟ್ಟಿದ್ದರು. ಸ್ಥಳೀಯ ಗ್ರಾಮಸ್ಥರು ಕೂಡ ಈ ದಂಪತಿಗಳು ನಿರಾಶ್ರಿತ ಕೇಂದ್ರಗಳಲ್ಲಿ ಆಶ್ರಯ ಪಡೆದಿರಬಹುದೆಂದು ಭಾವಿಸಿದ್ದರು. 

ಆದರೆ ಯಾವುದೇ ಕೇಂದ್ರಗಳಲ್ಲೂ ಈ ದಂಪತಿಗಳು ಇಲ್ಲದಿರುವುದನ್ನು ಗಮನಿಸಿದ ಯುವಕರ ತಂಡ ತೋಟದ ಲೈನ್ ಮನೆಯಲ್ಲಿ ದಂಪತಿಗಳು ಸಿಲುಕಿಕೊಂಡಿರುವುದನ್ನು ಪತ್ತೆ ಹಚ್ಚಿದೆ. ಬಳಿಕ ಪೊಲೀಸ್ ಇಲಾಖೆ ಮತ್ತು ಜಿಲ್ಲಾಡಳಿತ ಕಂಟ್ರೋಲ್ ರೂಂಗೆ ಮಾಹಿತಿ ನೀಡಿದ್ದಾರೆ. ಗುರುವಾರ ಬೆಳಿಗ್ಗೆ ಮಕ್ಕಂದೂರು ಮೇಘಾತ್ತಾಳುವಿನ ಮೂಲಕ ಕಾಂಡಕೊಲ್ಲಿ ತಲುಪಿದ ಎನ್‍ಡಿಆರ್‍ಎಫ್ ಅಗ್ನಿಶಾಮಕ ಮತ್ತು ಪೊಲೀಸ್ ಇಲಾಖೆ ಸಿಬ್ಬಂದಿಗಳು ಸ್ಥಳೀಯ ಯುವಕ ನೇತೃತ್ವದಲ್ಲಿ ಲೈನ್ ಮನೆಯಲ್ಲಿ ಸಿಲುಕಿದ್ದ ದಂಪತಿಗಳನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ. ದಂಪತಿಗಳನ್ನು ಮಡಿಕೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X