ಸಚಿವ ಪ್ರಿಯಾಂಕ್ ಖರ್ಗೆ ಅಧ್ಯಕ್ಷತೆಯಲ್ಲಿ ಸಚಿವ ಸಂಪುಟ ಉಪ ಸಮಿತಿ

ಬೆಂಗಳೂರು, ಆ. 23: ಹೈದರಾಬಾದ್ ಕರ್ನಾಟಕಕ್ಕೆ ನೀಡಿರುವ ವಿಶೇಷ ಸ್ಥಾನಮಾನದಡಿ ಹೊರಡಿಸಲಾಗಿರುವ ಆದೇಶಗಳ ಅನುಷ್ಠಾನದ ಪ್ರಗತಿ ಪರಿಶೀಲನೆ ಹಾಗೂ ಪರಿಶೀಲನೆಗೆ ಸಮಾಜ ಕಲ್ಯಾಣ ಸಚಿವ ಪ್ರಿಯಾಂಕ್ ಖರ್ಗೆ ಅಧ್ಯಕ್ಷತೆಯಲ್ಲಿ ಸಚಿವ ಸಂಪುಟ ಉಪ ಸಮಿತಿ ರಚಿಸಲಾಗಿದೆ.
ಸಹಕಾರ ಸಚಿವ ಬಂಡೆಪ್ಪ ಕಾಶೆಂಪೂರ್, ಜಲ ಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್, ಗ್ರಾಮೀಣಾಭಿವೃದ್ಧಿ ಸಚಿವ ಕೃಷ್ಣ ಭೈರೇಗೌಡ, ಪಶು ಸಂಗೋಪನಾ ಸಚಿವ ವೆಂಕಟರಾವ್ ನಾಡಗೌಡ, ಗಣಿ ಮತ್ತು ಭೂವಿಜ್ಞಾನ ಸಚಿವ ರಾಜಶೇಖರ್ ಪಾಟೀಲ್ ಹಾಗೂ ಅರಣ್ಯ ಸಚಿವ ಆರ್.ಶಂಕರ್ ಸಮಿತಿ ಸದಸ್ಯರನ್ನಾಗಿ ನೇಮಿಸಿ ಆದೇಶ ಹೊರಡಿಸಲಾಗಿದೆ.
Next Story





