ಚಾಮರಾಜನಗರ: ಮರಳು ತೆಗೆಯುತ್ತಿದ್ದ ವೇಳೆ ಮಣ್ಣು ಕುಸಿದು ಇಬ್ಬರು ಕಾರ್ಮಿಕರು ಮೃತ್ಯು
ಚಾಮರಾಜನಗರ,ಆ.24: ಜಮೀನಿನಲ್ಲಿ ಮರಳು ತೆಗೆಯುತ್ತಿದ್ದ ವೇಳೆ ಮಣ್ಣು ಜರಿದು ಇಬ್ಬರು ಕಾರ್ಮಿಕರು ಮೃತಪಟ್ಟ ಘಟನೆ ಚಾಮರಾಜನಗರ ಜಿಲ್ಲೆಯ ಕೆಂಪನಪುರ ಗ್ರಾಮದಲ್ಲಿ ನಡೆದಿದೆ.
ಕೆಂಪನಪುರ ಗ್ರಾಮದ ಜಮೀನಿನಲ್ಲಿ ಮರಳು ಸಂಗ್ರಹಣೆ ಮಾಡುವ ವೇಳೆ ಮಣ್ಣಿನ ಹೆಂಟೆ ಬಿದ್ದಿದ್ದು, ಪರಿಣಾಮ ಇಬ್ಬರು ಕಾರ್ಮಿಕರು ಅಡಿಯಲ್ಲಿ ಸಿಲುಕಿ ಮೃತಪಟ್ಟಿದ್ದಾರೆ. ಮೃತರನ್ನು ಗ್ರಾಮದ ನಾಗರಾಜು(25), ಸಿದ್ದೇಶ್ (20) ಎಂದು ಗುರುತಿಸಲಾಗಿದೆ.
ತಾಲೂಕಿನ ಸಂತೇಮರಹಳ್ಳಿ ಹೋಬಳಿಯ ಕೆಂಪನಪುರ ಗ್ರಾಮದ ರಮೇಶ್ ಎಂಬವರ ಜಮೀನಿನಲ್ಲಿ ಮರಳು ಸಂಗ್ರಹಣೆ ಮಾಡುವ ವೇಳೆ ಈ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ.
ಘಟನೆಗೆ ಸಂಬಂಧಿಸಿದಂತೆ ಸಂತೇಮರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.
Next Story