Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಭಾರತ ಮೂಲದ ವ್ಯಕ್ತಿಗೆ 8.4 ಕೋಟಿ ರೂ....

ಭಾರತ ಮೂಲದ ವ್ಯಕ್ತಿಗೆ 8.4 ಕೋಟಿ ರೂ. ಪರಿಹಾರ ಘೋಷಿಸಿದ ಕೆನಡ ನ್ಯಾಯಾಲಯ

ಅಲ್ ಖೈದಕ್ಕೆ ನೆರವು ನೀಡಿದವ ಎಂಬ ನಕಲಿ ಸುದ್ದಿ

ವಾರ್ತಾಭಾರತಿವಾರ್ತಾಭಾರತಿ24 Aug 2018 10:33 PM IST
share
ಭಾರತ ಮೂಲದ ವ್ಯಕ್ತಿಗೆ 8.4 ಕೋಟಿ ರೂ. ಪರಿಹಾರ ಘೋಷಿಸಿದ ಕೆನಡ ನ್ಯಾಯಾಲಯ

ಹೊಸದಿಲ್ಲಿ, ಆ.24: ಅಮೆರಿಕದ ಜಾಲತಾಣವೊಂದರಲ್ಲಿ ಪ್ರಕಟಗೊಂಡ ನಕಲಿ ಸುದ್ದಿಗಳಿಂದ ಅವಮಾನಕ್ಕೀಡಾಗಿದ್ದ ಭಾರತೀಯ ಮೂಲದ ವ್ಯಕ್ತಿಗೆ ಕೆನಡ ಸರ್ವೋಚ್ಚ ನ್ಯಾಯಾಲಯ 8.4 ಕೋಟಿ ರೂ. ಪರಿಹಾರ ನೀಡುವಂತೆ ಆದೇಶಿಸಿದೆ.

ಗುಜರಾತ್‌ನ ಭುಜ್ ನಿವಾಸಿಯಾಗಿರುವ ಅಲ್ತಾಫ್ ನಝೀರಲಿ ಕೆನಡದಲ್ಲಿ ಉದ್ಯಮವನ್ನು ಹೊಂದಿದ್ದಾರೆ. ಇವರ ವಿರುದ್ಧ ಅಮೆರಿಕದ ಆನ್‌ಲೈನ್ ಮಾರಾಟ ಮಳಿಗೆ ಓವರ್‌ಸ್ಟಾಕ್.ಕಾಮ್‌ನ ಸಿಇಒ ಪ್ಯಾಟ್ರಿಕ್ ಬೈರ್ನ್ ಅವಮಾನಕರ ಸುದ್ದಿಗಳನ್ನು ತಮ್ಮದೇ ಮಾಲಕತ್ವದ ಸುದ್ದಿ ಜಾಲತಾಣ ಡೀಪ್‌ಕ್ಯಾಪ್ಚರ್.ಕಾಮ್ ಮೂಲಕ ಹರಡಿದ್ದರು.

ಆರ್ಥಿಕ ಅಪರಾಧ ಸಂಚುಗಳ ಬಗ್ಗೆ ವರದಿ ಮಾಡುವ ಡೀಪ್‌ಕ್ಯಾಪ್ಚರ್.ಕಾಮ್‌ನಲ್ಲಿ ನಝೀರಲಿಯನ್ನು ಓರ್ವ ಮಾದಕದ್ರವ್ಯ ಕಳ್ಳಸಾಗಾಟಗಾರ, ಶಸ್ತ್ರಾಸ್ತ್ರ ಮಾರಾಟಗಾರ ಹಾಗೂ ಅಲ್-ಖೈದ ಸಂಘಟನೆಗೆ ಆರ್ಥಿಕ ನೆರವು ನೀಡುವಾತ ಎಂಬಂತೆ ಬಿಂಬಿಸಲಾಗಿತ್ತು. ಈ ವರದಿಗಳನ್ನು ಬೈರ್ನ್ ಅಪ್ಪಣೆಯಂತೆ ಮಾರ್ಕ್ ಮಿಶೆಲ್ ಎಂಬಾತ ಬರೆದಿದ್ದ. ಬೈರ್ನ್ ತಮ್ಮ ಜಾಲತಾಣದಲ್ಲಿ ಅಲ್ತಾಫ್ ನಝೀರಲಿ ಬಗ್ಗೆ ಮಾಡಿರುವ ವರದಿಗಳಿಗೆ ಯಾವುದೇ ಆಧಾರವಿಲ್ಲ. ಬೈರ್ನ್ ಮತ್ತು ಮಿಶೆಲ್ ಕೇವಲ ದ್ವೇಷದ ಹಿನ್ನೆಲೆಯಲ್ಲಿ ನಝೀರಲಿಗೆ ಅವಮಾನ ಮಾಡುವ ಉದ್ದೇಶದಿಂದ ಈ ಲೇಖನಗಳನ್ನು ಪ್ರಕಟಿಸಿದ್ದಾರೆ ಎಂದು 2016ರಲ್ಲಿ ವ್ಯಾಂಕೋವರ್‌ನಲ್ಲಿರುವ ಬ್ರಿಟಿಶ್ ಸರ್ವೋಚ್ಚ ನ್ಯಾಯಾಲಯ ತನ್ನ ಆದೇಶದಲ್ಲಿ ತಿಳಿಸಿತ್ತು ಮತ್ತು ನಝೀರಲಿಗೆ 8.4 ಕೋಟಿ ರೂ. ಪರಿಹಾರ ನೀಡುವಂತೆ ಸೂಚಿಸಿತ್ತು.

ಬ್ರಿಟಿಶ್ ನ್ಯಾಯಾಲಯದ ಈ ಆದೇಶದ ವಿರುದ್ಧ ಬೈರ್ನ್ ಕೆನಡದ ಸರ್ವೋಚ್ಚ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸಿದ್ದರು. ಆದರೆ ಇದೀಗ ಕೆನಡದ ಸರ್ವೋಚ್ಚ ನ್ಯಾಯಾಲಯ ಬ್ರಿಟಿಶ್ ನ್ಯಾಯಾಲಯದ ಆದೇಶವನ್ನು ಎತ್ತಿಹಿಡಿದಿದ್ದು ನಝೀರ್ ಅಲಿಗೆ ಘೋಷಿಸಲಾಗಿದ್ದ ಪರಿಹಾರ ಮೊತ್ತವನ್ನು ನೀಡುವಂತೆ ಸೂಚಿಸಿದೆ. ನಝೀರಲಿ ವಿರುದ್ಧ 2011ರಲ್ಲಿ ಸುಳ್ಳು ಸುದ್ದಿಗಳ ಸರಣಿ ಲೇಖನಗಳನ್ನು ಡೀಪ್‌ಕ್ಯಾಪ್ಚರ್.ಕಾಮ್ ಜಾಲತಾಣದಲ್ಲಿ ಪ್ರಕಟಿಸಲಾಗಿತ್ತು. ಇದರ ವಿರುದ್ಧ ನಝೀರಲಿ ಬ್ರಿಟಿಶ್ ಸರ್ವೋಚ್ಚ ನ್ಯಾಯಾಲಯದಲ್ಲಿ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X