ಆ.27: ಬ್ಯಾರಿ ಸಾಹಿತ್ಯ ಅಕಾಡಮಿಯಿಂದ ವಿವಿಧ ಸ್ಪರ್ಧೆ
ಮಂಗಳೂರು, ಆ.24: ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡಮಿಯಿಂದ, ಹಿರಾ ವಿಮೆನ್ಸ್ ಕಾಲೇಜುಗಳ ಸಹಯೋಗದಲ್ಲಿ ಆ.27ರಂದು ಬೆಳಗ್ಗೆ 9:30ಕ್ಕೆ ಬಬ್ಬುಕಟ್ಟೆಯ ಹಿರಾ ವಿಮೆನ್ಸ್ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಬ್ಯಾರಿ ಸಾಹಿತ್ಯ, ಸಾಂಸ್ಕತಿಕ ಸ್ಪರ್ಧೆ ಮತ್ತು ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡಮಿ ಅಧ್ಯಕ್ಷ ಕರಂಬಾರ್ ಮುಹಮ್ಮದ್ ಕಾರ್ಯಕ್ರಮ ಉದ್ಘಾಟಿಸಲಿದ್ದು, ಬಹುಭಾಷಾ ಸಾಹಿತಿ ಮುಹಮ್ಮದ್ ಬಡ್ಡೂರು ಮುಖ್ಯಅತಿಥಿಯಾಗಿ ಭಾಗವಹಿಸಲಿದ್ದಾರೆ.
ಬಳಿಕ ವಿದ್ಯಾರ್ಥಿಗಳಿಗಾಗಿ ವಾಚನ, ಗಾಯನ, ಪ್ರಬಂಧ, ಕಥೆ, ಕವನ ಮತ್ತು ಭಾಷಾಂತರ ಸ್ಪರ್ಧೆಗಳು ನಡೆಯಲಿವೆ. ಮಧ್ಯಾಹ್ನ 2:30ಕ್ಕೆ ಸಮಾರೋಪ ಸಮಾರಂಭ ನಡೆಯಲಿದೆ. ಕರ್ನಾಟಕ ರಾಜ್ಯ ಆಹಾರ ಆಯೋಗದ ಸದಸ್ಯರಾದ ಬಿ.ಎ.ಮುಹಮ್ಮದ್ ಅಲಿ ಮುಖ್ಯಅತಿಥಿಗಳಾಗಿ ಮತ್ತು ಶಾಂತಿ ಎಜುಕೇಶನ್ ಟ್ರಸ್ಟ್ ಅಧ್ಯಕ್ಷ ಅಬ್ದುರ್ರಹ್ಮಾನ್ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ ಎಂದು ಅಕಾಡಮಿ ರಿಜಿಸ್ಟ್ರಾರ್ ಚಂದ್ರಹಾಸ ರೈ ಬಿ. ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Next Story





