ನೆರೆ ಸಂತ್ರಸ್ತರಿಗೆ ಕೇಂದ್ರದಿಂದ ನಯಾಪೈಸೆ ಪರಿಹಾರ ಸಿಕ್ಕಿಲ್ಲ: ಸಚಿವ ಕೃಷ್ಣ ಭೈರೇಗೌಡ
ಕೋಲಾರ, ಆ.25: ರಾಜ್ಯದ ನೆರೆ ಸಂತ್ರಸ್ತರಿಗೆ ಕೇಂದ್ರ ಸರಕಾರದಿಂದ ಇದುವರೆಗೆ ನಯಾ ಪೈಸೆಯೂ ಪರಿಹಾರ ಸಿಕ್ಕಿಲ್ಲ ಎಂದು ಗ್ರಾಮೀಣ ಅಭಿವೃದ್ಧಿ ಸಚಿವ ಕೃಷ್ಣಭೈರೇಗೌಡ ಹೇಳಿದ್ದಾರೆ.
ಕೋಲಾರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೆರೆ ಪರಿಹಾರವಾಗಿ ಎರಡು ಸಾವಿರ ಕೋಟಿ ರೂ. ಹಣಕಾಸಿನ ನೆರವು ನೀಡುವಂತೆ ರಾಜ್ಯ ಸರ್ಕಾರ ಹೀಗಾಗಲೇ ಕೇಂದ್ರ ಸರಕಾರಕ್ಕೆ ಮನವಿ ಮಾಡಿದೆ. ಆದರೆ ಕೇಂದ್ರ ಸರ್ಕಾರದಿಂದ ಇದಕ್ಕೆ ಪೂರಕ ಸ್ಪಂದನೆ ಸಿಕ್ಕಿಲ್ಲ. ಆದರೂ ರಾಜ್ಯ ಸರ್ಕಾರದಿಂದ ಅಗತ್ಯ ಕಾರ್ಯಗಳಿಗೆ ಚಾಲನೆ ನೀಡಲಾಗಿದೆ. ಇನ್ನಾದರೂ ಕೇಂದ್ರ ಸರ್ಕಾರ ತನ್ನ ಧೋರಣೆಯನ್ನು ಬದಲಾಯಿಸಿಕೊಳ್ಳಬೇಕು ಎಂದು ಕೃಷ್ಣ ಭೈರೇಗೌಡ ಒತ್ತಾಯಿಸಿದರು.
ಇದೇ ಸಂದರ್ಭ ಅವರು ಮತ್ತೆ ಸಿಎಂ ಆಗುವ ಸಿದ್ದರಾಮಯ್ಯ ಹೇಳಿಕೆ ಹಾಗೂ ಕೇಂದ್ರ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮ ಕೊಡಗು ಉಸ್ತುವಾರಿ ಸಚಿವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ವಿಚಾರಕ್ಕೆ ಸಂಬಂಧಿಸಿ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಈ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ‘ನೋ ಕಾಮೆಂಟ್’ ಎಂದಷ್ಟೇ ಹೇಳಿದರು.
Next Story