ಉಡುಪಿ ಜಿಲ್ಲೆಗೆ ಬಂದ ವಾಜಪೇಯಿ ಚಿತಾಭಸ್ಮ ಕಲಶದ ವಾಹನ

ಉಡುಪಿ, ಆ. 25: ಕುಂದಾಪುರ, ಉಡುಪಿ ಹಾಗೂ ಕಾಪುವಿಗೆ ಶನಿವಾರ ಆಗಮಿಸಿದ ಮಾಜಿ ಪ್ರಧಾನಿ, ಭಾರತ ರತ್ನ ಅಟಲ್ ಬಿಹಾರಿ ವಾಜಪೇಯಿ ಅವರ ಚಿತಾಭಸ್ಮ ಕಲಶದ ವಾಹನವನ್ನು ಬಿಜೆಪಿ ವತಿಯಿಂದ ಸ್ವಾಗತಿಸಿ, ಪುಷ್ಪಾರ್ಚನೆ ಮಾಡಲಾಯಿತು.
ಕುಂದಾಪುರದಲ್ಲಿ ಚಿತಭಸ್ಮಕ್ಕೆ ಪುಷ್ಪಾರ್ಚನೆಗೈದು ಮಾತನಾಡಿದ ಸಂಸದೆ ಶೋಭಾ ಕರಂದ್ಲಾಜೆ, ವಾಜಪೇಯಿ ಇಂದು ನಮ್ಮಾಂದಿಗಿಲ್ಲದಿದ್ದರೂ, ಅವರು ಮಾಡಿರುವ ಕೆಲಸ, ದೇಶಕ್ಕಾಗಿ ಸಲ್ಲಿಸಿದ ಸೇವೆಯನ್ನು ನೆನಪು ಮಾಡುವ ನಿಟ್ಟಿನಲ್ಲಿ ದೇಶಾದ್ಯಂತ ಪವಿತ್ರ ನದಿಗಳಲ್ಲಿ ಚಿತಾಭಸ್ಮವನ್ನು ವಿಸರ್ಜನೆ ಮಾಡ ಲಾಗುತ್ತಿದೆ. ಅದೇ ರೀತಿ ರಾಜ್ಯದ 8 ಪವಿತ್ರ ನದಿಗಳಲ್ಲಿಯೂ ವಿರ್ಜನೆ ಮಾಡಲಾಗುವುದು ಎಂದರು.
ವಿಧಾನ ಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ, ಮಂಗಳೂರು ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ, ರಾಜ್ಯ ಬಿಜೆಪಿ ಕಾರ್ಯದರ್ಶಿ ತಿಂಗಳೆ ವಿಕ್ರಮಾರ್ಜುನ ಹೆಗ್ಡೆ, ರಾಜ್ಯ ಕಾರ್ಯಕಾರಣಿ ಸದಸ್ಯ ಕಿರಣ್ ಕೊಡ್ಗಿ, ಜಿಲ್ಲಾಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಪ್ರಧಾನ ಕಾರ್ಯದರ್ಶಿಗಳಾದ ಕುಯಿಲಾಡಿ ಸುರೇಶ್ ನಾಯಕ್, ಕುತ್ಯಾರು ನವೀನ್ ಶೆಟ್ಟಿ, ಕ್ಷೇತ್ರಾಧ್ಯಕ್ಷ ಕಾಡೂರು ಸುರೇಶ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು. ರಾಜ್ಯ ಬಿಜೆಪಿ ಕಾರ್ಯಕಾರಣಿ ಸದಸ್ಯ ಕೆ.ಉದ್ ಕುಮಾರ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು







