ಕೊಡಗು ಪ್ರವಾಹ ಸಂತ್ರಸ್ತರ ಪರಿಹಾರ ನಿಧಿಗೆ ನೆರವು

ಮಂಗಳೂರು, ಆ.26: ಕೊಡಗು ಪ್ರವಾಹ ಸಂತ್ರಸ್ತರ ಮುಖ್ಯಮಂತ್ರಿಯ ಪರಿಹಾರ ನಿಧಿಗೆ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ವತಿಯಿಂದ ಅಧ್ಯಕ್ಷ ಪಟ್ಲ ಸತೀಶ್ ಶೆಟ್ಟಿ ಅವರು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ ಖಾದರ್ ಸಮ್ಮುಖದಲ್ಲಿ ದ.ಕ. ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್‌ರಿಗೆ 2 ಲಕ್ಷ ರೂ. ಧನಸಹಾಯದ ಚೆಕ್ ಹಸ್ತಾಂತರಿಸಿದರು.
ಈ ಸಂದರ್ಭ ಫೌಂಡೇಶನಿನ ಪ್ರಧಾನ ಕಾರ್ಯದರ್ಶಿ ಅಡ್ಯಾರ್ ಪುರುಷೋತ್ತಮ ಭಂಡಾರಿ, ಕೋಶಾಧಿಕಾರಿ ಸುದೇಶ್ ಕುಮಾರ್ ರೈ, ಸಂಘಟನಾ ಕಾರ್ಯದರ್ಶಿ ಜಗನ್ನಾಥ ಶೆಟ್ಟಿ ಬಾಳ ಮತ್ತು ಟ್ರಸ್ಟಿ ರವಿ ಶೆಟ್ಟಿ ಅಶೋಕನಗರ ಉಪಸ್ಥಿತರಿದ್ದರು.
Next Story





