ಮಹಾರಾಣಿ ಕಾಲೇಜು ವಿದ್ಯಾರ್ಥಿನಿ ನಿಗೂಢ ಸಾವು
ಬೆಂಗಳೂರು, ಆ.26: ಮಹಾರಾಣಿ ಮಹಿಳಾ ಕಾಲೇಜಿನ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ ಇಲ್ಲಿನ ಹೈಗ್ರೌಂಡ್ಸ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಮಹಾರಾಣಿ ಮಹಿಳಾ ಕಾಲೇಜಿನಲ್ಲಿ ತೃತೀಯ ವರ್ಷದ ಬಿಎ ಓದುತ್ತಿದ್ದ ಶೃತಿ (21) ಮೃತಪಟ್ಟಿರುವ ದುರ್ದೈವಿ ಎಂದು ಪೊಲೀಸರು ತಿಳಿಸಿದ್ದಾರೆ.
ಶುಕ್ರವಾರ ವರಮಹಾಲಕ್ಷ್ಮೀ ಹಬ್ಬದ ಹಿನ್ನೆಲೆಯಲ್ಲಿ ವಿದ್ಯಾರ್ಥಿನಿಗಳ ವಸತಿ ಗೃಹದಲ್ಲಿ ಕೇವಲ ಬೆರಳೆಣಿಕೆಯಷ್ಟು ವಿದ್ಯಾರ್ಥಿನಿಯರಿದ್ದರು. ಯಾರೂ ಇಲ್ಲದ ವೇಳೆ ಶೃತಿ, ಕೊಠಡಿಯ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಯುವತಿಯ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ.
ಈ ಸಂಬಂಧ ಹೈಗ್ರೌಂಡ್ಸ್ ಠಾಣಾ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
Next Story





