Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಆ.28: ಕಂದಾಯ ಅಧಿಕಾರಿಯ ವರ್ಗಾವಣೆ...

ಆ.28: ಕಂದಾಯ ಅಧಿಕಾರಿಯ ವರ್ಗಾವಣೆ ವಿರೋಧಿಸಿ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ27 Aug 2018 9:51 PM IST
share

ಮಂಗಳೂರು, ಆ.27: ಮಂಗಳೂರು ಮಹಾನಗರ ಪಾಲಿಕೆಯ ಕಂದಾಯ ಅಧಿಕಾರಿ ಪ್ರವೀಣ್‌ಚಂದ್ರ ಕರ್ಕೇರ ಅವರ ವರ್ಗಾವಣೆಯ ಹಿಂದೆ ಕಾಂಗ್ರೆಸ್ ಕುಮ್ಮಕ್ಕು ಇದೆ. ಅದನ್ನು ಖಂಡಿಸಿ ಮತ್ತು ಪ್ರವೀಣ್‌ರ ವರ್ಗಾವಣೆ ವಿರೋಧಿಸಿ ಆ.28ರಂದು ಬೆಳಗ್ಗೆ 10 ಗಂಟೆಗೆ ಪಾಲಿಕೆಯ ಮುಂದೆ ಪ್ರತಿಭಟನೆ ಮಾಡಲಾಗುವುದು ಎಂದು ದ.ಕ.ಜಿಲ್ಲಾ ಬಿಜೆಪಿ ಎಸ್‌ಸಿ ಮೋರ್ಚಾ ಅಧ್ಯಕ್ಷ ದಿನೇಶ್ ಅಮ್ಟೂರ್ ಹೇಳಿದ್ದಾರೆ.

ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೇಲಾಧಿಕಾರಿಯ ಆದೇಶದಂತೆ ಪ್ರವೀಣ್ ನಗರದಲ್ಲಿ ಅನಧಿಕೃತವಾಗಿ ಹಾಕಲಾಗಿದ್ದ ಹೋರ್ಡಿಂಗ್, ಫ್ಲೆಕ್ಸ್ ತೆರವಿಗೆ ಮುಂದಾಗಿದ್ದರು. ಆದರೆ ಮಾಜಿ ಶಾಸಕ ಜೆ.ಆರ್.ಲೋಬೊ ರಾಜಕೀಯ ಶಕ್ತಿ ಬಳಸಿ ಪ್ರವೀಣ್‌ರನ್ನು ಎತ್ತಂಗಡಿ ಮಾಡಿದ್ದಾರೆ. ಕಾಂಗ್ರೆಸ್‌ನ ಈ ನಿಲುವನ್ನು ವಿರೋಧಿಸಿ ಪ್ರತಿಭಟನೆ ನಡೆಯಲಿದೆ. ಯಾವುದೇ ಕಾರಣಕ್ಕೂ ಪ್ರವೀಣ್ ವರ್ಗಾವಣೆ ಆಗಬಾರದು ಎಂದರು.

ತಮ್ಮದು ಅಹಿಂದ ಸರಕಾರ ಎನ್ನುತ್ತಿದ್ದ ಕಾಂಗ್ರೆಸ್ ದಲಿತ ಸಮುದಾಯದ ಅಧಿಕಾರಿಗಳಿಗೆ ಕೊಡುವ ಬಹುಮಾನ ವರ್ಗಾವಣೆಯ ಶಿಕ್ಷೆಯೇ?. ಭ್ರಷ್ಟಾಚಾರ ನಿಲ್ಲಬೇಕು ಎನ್ನುವ ಕಾಂಗ್ರೆಸ್ ಅಕ್ರಮವಾಗಿ ಹೋರ್ಡಿಂಗ್ ಅಳವಡಿಸಿದ್ದನ್ನು ತೆರವುಗೊಳಿಸಲು ಮುಂದಾದಾಗ ಅದಕ್ಕೆ ತಡೆ ಒಡ್ಡುವ ಷಡ್ಯಂತ್ರ ನಡೆಸಿದ್ದೇಕೆ ? ಎಂದು ದಿನೇಶ್ ಅಮ್ಟೂರ್ ಪ್ರಶ್ನಿಸಿದರು.

ಹೊಸ ನೀತಿಯಿಂದಾಗಿ ಪಾಲಿಕೆ ವ್ಯಾಪ್ತಿಯಲ್ಲಿ ಪರಿಶಿಷ್ಟ ಸಮುದಾಯದ ಮಂದಿ ಮನೆ ಕಟ್ಟಲು ಅಸಾಧ್ಯವಾದ ಸ್ಥಿತಿ ನಿರ್ಮಾಣವಾಗಿದೆ. ಪಾಲಿಕೆ ಆಯುಕ್ತರು ಮೊದಲಿದ್ದ ಕಾನೂನಿಗೆ ಆದ್ಯತೆ ನೀಡಬೇಕು. ಇಲ್ಲವಾದಲ್ಲಿ ಕಾನೂನನ್ನು ಸರಳೀಕರಣಗೊಳಿಸಿ ಮನೆ ಕಟ್ಟುವಲ್ಲಿ ಎದುರಾಗಿರುವ ಸಮಸ್ಯೆಗೆ ಮುಕ್ತಿ ಕಾಣಿಸಬೇಕು ಎಂದು ದಿನೇಶ್ ಅಮ್ಟೀರ್‌ ಮನವಿ ಮಾಡಿದರು.

ಶಾಸಕ ರಾಜೇಶ್ ನಾಕ್ ಉಳಿಪಾಡಿಗುತ್ತು ಅವರ ಕಾರು ಚಾಲಕರ ನೇಮಕ ವೇಳೆ ಮಾಜಿ ಸಚಿವ ರಮಾನಾಥ ರೈ ಅಡ್ಡಗಾಲು ಹಾಕಿದ್ದಾರೆ. ಈ ಮೂಲಕ ಪರಿಶಿಷ್ಟ ಜಾತಿಯ ಕಾರು ಚಾಲಕನಿಗೆ ಅನ್ಯಾಯ ಮಾಡಿದ್ದಾರೆ ಎಂದು ದಿನೇಶ್ ಅಮ್ಟೂರ್ ಆರೋಪಿಸಿದರು.

ಕುದ್ಮಲ್ ರಂಗರಾವ್ ಹೆಸರಿಡಲು ಆಗ್ರಹ

ಮಂಗಳೂರಿನ ಪುರಭವನಕ್ಕೆ ಕುದ್ಮಲ್ ರಂಗರಾವ್‌ರ ಹೆಸರಿಡಬೇಕು ಎಂದು ಎರಡು ವರ್ಷಗಳ ಹಿಂದೆ ಪಾಲಿಕೆ ತೀರ್ಮಾನ ಕೈಗೊಂಡಿದ್ದರೂ ಇನ್ನೂ ಆ ಕಾರ್ಯ ಆಗಿಲ್ಲ. ಒಂದು ವಾರದೊಳಗೆ ಸೂಕ್ತ ನಿರ್ಧಾರ ಕೈಗೊಳ್ಳದಿದ್ದರೆ ಪಾಲಿಕೆ ಮುಂಭಾಗ ಅಹೋರಾತ್ರಿ ಭಜನಾ ಕಾರ್ಯಕ್ರಮದ ಮೂಲಕ ವಿನೂತನ ರೀತಿಯಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಎಸ್ಸಿ ಮೋರ್ಚಾದ ಪ್ರಧಾನ ಕಾರ್ಯದರ್ಶಿ ವಿನಯನೇತ್ರ ದಡ್ಡಲ್‌ಕಾಡು ಎಚ್ಚರಿಸಿದರು.

ಸುದ್ದಿಗೋಷ್ಠಿಯಲ್ಲಿ ಎಸ್ಸಿ ಮೋರ್ಚಾದ ಮುಖಂಡರಾದ ಬಿ.ಎಸ್.ವಸಂತ ಕುಮಾರ್, ಉಮಾನಾಥ ಅಮೀನ್ ನಂತೂರು, ಉಮೇಶ್ ಕೋಟ್ಯಾನ್ ವಾಮಂಜೂರು, ವಿಠಲ ಸಾಲ್ಯಾನ್, ಆನಂದ ಪಾಂಗಾಳ, ವನಿತಾ ಸೋಮನಾಥ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X