Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಆಳ್ವಾಸ್‍ನಲ್ಲಿ 'ಸತ್ಕಾರ್ಯಕ್ಕಾಗಿ...

ಆಳ್ವಾಸ್‍ನಲ್ಲಿ 'ಸತ್ಕಾರ್ಯಕ್ಕಾಗಿ ಕೊಡುಗೆ' ಅಭಿಯಾನ

ವಾರ್ತಾಭಾರತಿವಾರ್ತಾಭಾರತಿ27 Aug 2018 10:02 PM IST
share
ಆಳ್ವಾಸ್‍ನಲ್ಲಿ ಸತ್ಕಾರ್ಯಕ್ಕಾಗಿ ಕೊಡುಗೆ ಅಭಿಯಾನ

ಮೂಡುಬಿದಿರೆ, ಅ.27:  ಆಳ್ವಾಸ್ ಪದವಿ ಕಾಲೇಜಿನ ವಿದ್ಯಾರ್ಥಿಗಳು ಪರಿಸರ ಸಂರಕ್ಷಣೆ ಹಾಗೂ ಕಾಳಜಿಯ ಜವಾಬ್ದಾರಿಯಲ್ಲಿ ಒಂದು ಹೆಜ್ಜೆ ಮುಂದೆ ಸಾಗಿ, 'ಸತ್ಕಾರ್ಯಕ್ಕಾಗಿ ಕೊಡುಗೆ' ಎಂಬ ದ್ಯೇಯ ವಾಕ್ಯದಡಿ 'ಕಾಗದ ಉಳಿಸಿ, ಹಸಿರು ಬೆಳಸಿ'  ಎಂಬ ವಿನೂತನ ಅಭಿಯಾನವನ್ನು ಪ್ರಾರಂಭಿಸಿದ್ದಾರೆ.

ಈ ಅಭಿಯಾನದ ಮೂಲಕ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಎಲ್ಲಾ ಶಿಕ್ಷಣ ಸಂಸ್ಥೆಗಳಲ್ಲಿರುವ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಬಳಸಿದ ಹಾಗೂ ಬಳಸದ ಕಾಗದಗಳು, ಕಥೆ, ಕವನ, ಕಾದಂಬರಿ, ಪುಸ್ತಕ, ನಿಯತಕಾಲಿಕೆ, ಪಠ್ಯಪುಸ್ತಕಗಳನ್ನು ಸಂಗ್ರಹಿಸಲಾಗುತ್ತದೆ. ನಂತರ ಬಳಸಲು ಯೋಗ್ಯವಾದ ಸಂಗ್ರಹಗಳನ್ನು ಅಗತ್ಯವಿರುವ ಬಡ ವಿದ್ಯಾರ್ಥಿಗಳಿಗೆ ಉಚಿತವಾಗಿ ಹಂಚಲಾಗುತ್ತದೆ. ಮರುಬಳಕೆಗೆ ಯೋಗ್ಯವಾದ ಸಂಗ್ರಹವನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಇಂಜಿನಿಯರಿಂಗ್ ಕಾಲೇಜಿನ ಮ್ಯಾಕ್ಯನಿಕಲ್ ವಿಭಾಗದದವರ ಸಹಾಯದಿಂದ ಮರುಬಳಕೆಗೆ ಮಾಡಿ ಅವುಗಳನ್ನು ಅಗತ್ಯವಿರುವ ವಿದ್ಯಾರ್ಥಿಗಳ ಬೇಡಿಕೆಗೆ ಅನುಗುಣವಾಗಿ ಉಚಿತವಾಗಿ ಪೂರೈಸಲಾಗುತ್ತದೆ.  ಮರುಬಳಕೆ ಪ್ರಕ್ರಿಯೆಗೆ ತಗಲುವ ವೆಚ್ಚವನ್ನು ನೀಗಿಸಲು ಕೊಡುಗೆ ನೀಡುವ ಎಲ್ಲಾ ದಾನಿಗಳಿಂದ ಒಂದು ರೂಪಾಯಿಯಂತೆ ದೇಣಿಗೆಯಾಗಿ ಸಂಗ್ರಹಿಸಲಾಗುತ್ತದೆ.  ಈ ಪ್ರಕ್ರಿಯೆಗೆ  ಸಹಕಾರಿಯಾಗಲು ಎಲ್ಲಾ ಕಾಲೇಜು ಕಾರ್ಯಲಯಗಳಲ್ಲಿ ಹಾಗೂ ಕಾಲೇಜಿನ ಎಲ್ಲಾ ವಸತಿ ಗೃಹಗಳಲ್ಲಿ ನಾಲ್ಕು ಪೆಟ್ಟಿಗೆಯನ್ನು ಇಡಲಾಗುವುದು. ಒಂದು ಪೆಟ್ಟಿಗೆಯಲ್ಲಿ ಬಳಸಿದ ಕಾಗದಕ್ಕಾಗಿ, ಇನ್ನೊಂದು ಪೆಟ್ಟಿಗೆಯಲ್ಲಿ  ಬಳಸದ ಕಾಗದಕ್ಕಾಗಿ, ಮತ್ತೊಂದು ಪೆಟ್ಟಿಗೆಯಲ್ಲಿ ಪುಸ್ತಕ, ಕವನ, ಕಾದಂಬರಿಗಳನ್ನು, ಹಾಗೂ ಇನ್ನೊಂದು ಪೆಟ್ಟಿಗೆಯಲ್ಲಿ ಒಂದು ರೂಪಾಯಿಯ ದೇಣಿಗೆ ಸಂಗ್ರಹಿಸಲು ಬಳಸಲಾಗುತ್ತದೆ.

ಈ ಅಭಿಯಾನವು ಕಾಲೇಜಿನ ''ಗ್ರೀನ್ ಝೋನ್'' ಫೋರಂನ ಮೂಲಕ ಆಯೋಜಿಸಲಾಗಿದೆ.  ಈ ಫೋರಂ ನಲ್ಲಿ ಆಳ್ವಾಸ್ ಪದವಿ ಕಾಲೇಜಿನ ಬಿಎಸ್‍ಡಬ್ಲ್ಯೂ ಹಾಗೂ ಬಿಬಿಎ ವಿಭಾಗದ 60  ವಿದ್ಯಾರ್ಥಿಗಳು ಸದಸ್ಯರಾಗಿ ಆಯ್ಕೆಗೊಂಡಿದ್ದಾರೆ.  ಪರಿಸರ ಜಾಗೃತಿಯ ಕಾರ್ಯಕ್ರಮವನ್ನು ಹಮ್ಮಿಕೊಳ್ಳುವ ಈ ವೇದಿಕೆ ಬೆಂಗಳೂರಿನ ಸೆಂಟರ್ ಫಾರ್ ಎನ್ವಿರಾನಮೆಂಟ್ ಎಜುಕೇಶನ್, ಯಲಹಂಕ ಇದರ ಮಾರ್ಗದರ್ಶನದಲ್ಲಿ ಕಾರ್ಯನಿರ್ವಹಿಸುತ್ತದೆ. ಬಿಎಸ್‍ಡಬ್ಲ್ಯೂ ವಿಭಾಗದ  ಉಪನ್ಯಾಸಕಿ ಪವಿತ್ರಾಪ್ರಸಾದ್ ಹಾಗೂ ಬಿಬಿಎ ವಿಭಾಗದ ನಿಶಾ ಕೆ ಈ ವೇದಿಕೆಯ ಸಂಯೋಜಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.  

'ನೀವು ತ್ಯಾಜ್ಯ ಎನ್ನುವುದು ಇತರರಿಗೆ ಉಪಯುಕ್ತವಾಗಲಿ' ಎಂಬ ಉದ್ದೇಶದಿಂದ ಈ ಅಭಿಯಾನವನ್ನು ಪ್ರಾರಂಬಿಸಿದ್ದು, ಮುಂದಿನ ದಿನಗಳಲ್ಲಿ ಈ ವೇದಿಕೆಯ ಮೂಲಕ ಇನ್ನೂ ಹಲವು ಪರಿಸರ ಹಾಗೂ ಸಾಮಾಜಿಕ ಕಾಳಜಿಯ ಕಾರ್ಯಕ್ರಮಗಳು ಕಾರ್ಯರೂಪಕ್ಕೆ ಬರಲಿದೆ.  ''ವೇಸ್ಟ್ ಫ್ರೀ ಹಾಸ್ಟೆಲ್ ಮೆಸ್ ಫುಡ್ '' ಎಂಬ ಇನ್ನೊಂದು ಅಭಿಯಾನವನ್ನು ಸದ್ಯದಲ್ಲೇ ಪ್ರಾರಂಭಿಸಲಾಗುವುದು ಎಂದು ಆಳ್ವಾಸ್ ಕಾಲೇಜಿನ ಪ್ರಾಚಾರ್ಯ ಡಾ ಕುರಿಯನ್ ತಿಳಿಸಿದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X