ಉಚಿತ ಬಸ್ ಪಾಸ್ ಹಿಂಪಡೆದಿರುವ ವಿಚಾರ: ಸರಕಾರದಿಂದ ಮಾಹಿತಿ ಪಡೆಯಲು ಹೈಕೋರ್ಟ್ ಸೂಚನೆ
ಬೆಂಗಳೂರು, ಆ.28: ಸಂಪೂರ್ಣ ಅಂಧತ್ವ ಹೊಂದಿರುವವರಿಗೆ ವಜ್ರ (ವೋಲ್ವೋ) ಬಸ್ಗಳ ಉಚಿತ ಪಾಸ್ ಸೌಲಭ್ಯ ಹಿಂಪಡೆದಿರುವ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಕ್ರಮ ಪ್ರಶ್ನಿಸಿ ಹೈಕೋರ್ಟ್ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿದೆ.
ರಾಷ್ಟ್ರೀಯ ಅಂಧರ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಗೌತಮ್ ಪ್ರಕಾಶ್ ಅಗರ್ವಾಲ್ ಸಲ್ಲಿಸಿರುವ ಪಿಐಎಲ್ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ದಿನೇಶ್ ಮಾಹೇಶ್ವರಿ ಹಾಗೂ ನ್ಯಾಯಮೂರ್ತಿ ಆರ್. ದೇವದಾಸ್ ಅವರಿದ್ದ ಪೀಠ, ಈ ಸಂಬಂಧ ಸರಕಾರದಿಂದ ಮಾಹಿತಿ ಪಡೆದು ಒದಗಿಸುವಂತೆ ಸರಕಾರಿ ವಕೀಲರಿಗೆ ಸೂಚಿಸಿ ಅರ್ಜಿ ವಿಚಾರಣೆಯನ್ನು ಸೆ.19ಕ್ಕೆ ಮುಂದೂಡಿತು.
Next Story