Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ತೋಟಗಾರಿಕೆ ಹಾನಿಗೆ ವಿಶೇಷ ಪರಿಹಾರ...

ತೋಟಗಾರಿಕೆ ಹಾನಿಗೆ ವಿಶೇಷ ಪರಿಹಾರ ಪ್ಯಾಕೇಜ್ ಬೇಕು: ಕೃಷಿ ಸಚಿವ ಶಿವಶಂಕರ ರೆಡ್ಡಿ

ವಾರ್ತಾಭಾರತಿವಾರ್ತಾಭಾರತಿ28 Aug 2018 11:14 PM IST
share
ತೋಟಗಾರಿಕೆ ಹಾನಿಗೆ ವಿಶೇಷ ಪರಿಹಾರ ಪ್ಯಾಕೇಜ್ ಬೇಕು: ಕೃಷಿ ಸಚಿವ ಶಿವಶಂಕರ ರೆಡ್ಡಿ

ಮಡಿಕೇರಿ, ಆ.28: ಕೊಡಗಿನಲ್ಲಿ ಸಂಭವಿಸಿದ ಪ್ರಕೃತಿ ವಿಕೋಪದಿಂದ ತೋಟಗಾರಿಕಾ ಕ್ಷೇತ್ರಕ್ಕೆ 82 ಕೋಟಿ ರೂ.ಗಳಷ್ಟು ನಷ್ಟವಾಗಿದ್ದು, ‘ವಿಶೇಷ ಪರಿಹಾರ ಪ್ಯಾಕೇಜ್’ ಘೋಷಿಸುವಂತೆ ಮುಖ್ಯಮಂತ್ರಿಗಳಲ್ಲಿ ಮನವಿ ಮಾಡಿಕೊಳ್ಳುವುದಾಗಿ ಕೃಷಿ ಸಚಿವ ಶಿವಶಂಕರ ರೆಡ್ಡಿ ತಿಳಿಸಿದ್ದಾರೆ.

ನಗರದ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯ 12 ಸಾವಿರ ಹೆಕ್ಟೇರ್ ತೋಟಗಾರಿಕಾ ಪ್ರದೇಶದಲ್ಲಿ ಬೆಳೆ ನಷ್ಟವಾಗಿದೆ ಎಂದರು. ನೂತನ ತಂತ್ರಜ್ಞಾನದ ಆ್ಯಪ್ ಬಳಸಿ ಬೆಳೆ ನಷ್ಟದ ಕುರಿತು ಸರ್ವೇ ಮತ್ತು ಸಮೀಕ್ಷೆ ನಡೆಸಿ ವರದಿ ತಯಾರಿಸಲಾಗುವುದು ಎಂದು ಸಚಿವರು ತಿಳಿಸಿದರು.

ಜಿಲ್ಲಾ ವ್ಯಾಪ್ತಿಯ 8500 ಹೆಕ್ಟೇರ್ ಕರಿಮೆಣಸು, 800 ಹೆಕ್ಟೇರ್ ಬಾಳೆ, 600 ಹೆಕ್ಟೇರ್ ಶುಂಠಿ, 1200 ಹೆಕ್ಟೇರ್ ಅಡಿಕೆ, 9800 ಹೆಕ್ಟೇರ್ ಪ್ರದೇಶದಲ್ಲಿ ಭತ್ತದ ಕೃಷಿ, 4000 ಹೆಕ್ಟೇರ್ ಪ್ರದೇಶದ ಮೆಕ್ಕೆಜೋಳ ನಾಶವಾಗಿದೆ. ಎಲ್ಲವೂ ಒಟ್ಟಾಗಿ 35 ಸಾವಿರ ಹೆಕ್ಟೇರ್ ಪ್ರದೇಶದ ಕೃಷಿ ಬೆಳೆ ನಾಶವಾಗಿದೆ. ಕಾಫಿ ಬೆಳೆ ಶೇ.90 ರಷ್ಟು ಭಾಗ ನಷ್ಟವಾಗಿದ್ದು, ಇದರ ಅಂದಾಜು 350 ಕೋಟಿ ರೂ. ಎಂದು ಅಂದಾಜಿಸಿರುವುದಾಗಿ ಮಾಹಿತಿ ನೀಡಿದರು.

ದಾಖಲೆ ಮಳೆ
ಆಗಸ್ಟ್ ಒಂದು ತಿಂಗಳಿನಲ್ಲೆ ಕೊಡಗಿನಲ್ಲಿ 900 ಮಿ.ಮೀ.ಗೂ ಅಧಿಕ ಮಳೆಯಾಗಿದ್ದು, ಪ್ರಕೃತಿ ವಿಕೋಪ ಸಂಭವಿಸಿದ ಒಂದು ವಾರದಲ್ಲಿ ದಾಖಲೆಯ 450 ಮಿ.ಮೀ. ಮಳೆಯಾಗಿದೆಯೆಂದು ಸಚಿವ ಶಿವಶಂಕರ್ ರೆಡ್ಡಿ ತಿಳಿಸಿದರು. ತೋಟಗಾರಿಕಾ ಬೆಳೆಗಳ ನಷ್ಟದ ಸಮೀಕ್ಷೆ ನಡೆಸಲು ಈಗಾಗಲೆ 60 ಅಧಿಕಾರಿಗಳನ್ನು ನಿಯೋಜಿಸಲಾಗಿದ್ದು, ಶೇ.30 ರಷ್ಟು ಸರ್ವೇ ಕಾರ್ಯ ಪೂರ್ಣಗೊಂಡಿದೆ. ಇನ್ನು 15 ದಿನಗಳಲ್ಲಿ ಸಮೀಕ್ಷೆ ಪೂರ್ಣಗೊಂಡು ಅಧಿಕಾರಿಗಳು ವರದಿ ನೀಡಲಿದ್ದಾರೆ ಎಂದು ಸಚಿವರು ತಿಳಿಸಿದರು. ಕೃಷಿ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಮುಂದಿನ 15 ದಿನಗಳಲ್ಲಿ ಪರಿಹಾರ ವಿತರಿಸುವ ಪ್ರಕ್ರಿಯೆ ನಡೆಯಲಿದೆ ಎಂದರು.

ಶಾಸಕ ಅಪ್ಪಚ್ಚು ರಂಜನ್ ಈ ಸಂದರ್ಭ ಹಾಜರಿದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X