Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ನಗರಸಭಾ ಚುನಾವಣೆಯಲ್ಲಿ ಬಿಜೆಪಿ ತಂತ್ರ...

ನಗರಸಭಾ ಚುನಾವಣೆಯಲ್ಲಿ ಬಿಜೆಪಿ ತಂತ್ರ ಫಲಿಸದು- ಎಂ.ಎಸ್. ಮಹಮ್ಮದ್

ವಾರ್ತಾಭಾರತಿವಾರ್ತಾಭಾರತಿ28 Aug 2018 11:30 PM IST
share

ಪುತ್ತೂರು, ಆ. 28: ಶಾಸಕಿ ಶಕುಂತಳಾ ಶೆಟ್ಟಿ ಅವರ ಶಾಸಕತ್ವದ ಅವಧಿಯಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸ ಕಾರ್ಯಗಳು ನಡೆದಿದ್ದರೂ ಬಿಜೆಪಿ ಸುಳ್ಳು ಪ್ರಚಾರ ಹಾಗೂ ಅಪಪ್ರಚಾರದ ಮೂಲಕ ಇಲ್ಲಿ ಗೆಲವು ಸಾಧಿಸಿದೆ. ಆದರೆ ನಗರಸಭಾ ಚುನಾವಣೆಯಲ್ಲಿ ಬಿಜೆಪಿಯ ಈ ತಂತ್ರ ಫಲಿಸದು, ಇಲ್ಲಿ ಕಾಂಗ್ರೆಸ್ ಸ್ಪಷ್ಟ ಬಹುಮತದೊಂದಿಗೆ ಅಧಿಕಾರ ಪಡೆಯಲಿದೆ ಎಂದು ಕೆಪಿಸಿಸಿ ಕಾರ್ಯದರ್ಶಿ ಎಂ.ಎಸ್. ಮಹಮ್ಮದ್ ಹೇಳಿದ್ದಾರೆ. 

ಅವರು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಕೋಮುವಾಧ, ಜಾತಿವಾದಗಳ ಮೂಲಕ ಜನರನ್ನು ಒಡೆದು ಆಳುತ್ತಿರುವ ಕೋಮುವಾದಿ ಬಿಜೆಪಿಯನ್ನು ಚುನಾವಣೆಯಲ್ಲಿ ಅಲ್ಪಸಂಖ್ಯಾತ ಬಂಧುಗಳು ತಿರಸ್ಕರಿಸಿ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡಬೇಕು. ಇಲ್ಲಿ ಸಾಕಷ್ಟು ಪ್ರಜ್ಞಾವಂತರು ಹಾಗೂ ಬುದ್ದಿವಂತ ಮತದಾರರಿದ್ದಾರೆ. ಅಪಪ್ರಚಾರದ ಮೂಲಕ ಬಿಜೆಪಿಗರಿಗೆ ಅವರ ಮತವನ್ನು ಪಡೆಯಲು ಸಾಧ್ಯವಿಲ್ಲ ಎಂದ ಅವರು ಅಲ್ಪ ಸಂಖ್ಯಾತರನ್ನು ತುಚ್ಚವಾಗಿ ಬಿಜೆಪಿ ಕಾಣುತ್ತಿದೆ.  ಇತ್ತೀಚೆಗೆ ಶಾಸಕ ಯತ್ನಾಳ್ ತನ್ನ ಕಚೇರಿಗೆ ಬುರ್ಕಾ ಹಾಗೂ ಟೊಪ್ಪಿ ಹಾಕಿಕೊಂಡವರು ಬರಬಾರದು ಎಂಬ ಹೇಳಿಕೆ ನೀಡಿರುವುದು, ಈಶ್ವರಪ್ಪ ಅಲ್ಪ ಸಂಖ್ಯಾತರು ನಮ್ಮ ಕಚೇರಿಯ ಕಸ ಗುಡಿಸುವ ಕೆಲಸ ಮಾಡಲಿ ಎಂಬ ಹೇಳಿಕೆ ನೀಡಿರುವುದು ಅವರ ಮನೋಸ್ಥಿತಿಯನ್ನು ಸೂಚಿಸುತ್ತದೆ. ಸ್ವಾಭಿಮಾನಿ ಅಲ್ಪ ಸಂಖ್ಯಾತರು ಇದನ್ನು ತಡೆಯಲು ಕಾಂಗ್ರೆಸ್ ಬೆಂಬಲಿಸಬೇಕು ಎಂದರು.

ಕಾಂಗ್ರೆಸ್ ಸಾಮಾಜಿಕ ನ್ಯಾಯಕ್ಕೆ ಒತ್ತು ನೀಡುವ ಕೆಲಸ ಮಾಡಿದೆ. ಎಲ್ಲಾ ಸಮುದಾಯಕ್ಕೂ ಅವಕಾಶ ನೀಡುವ ಮೂಲಕ ನಗರಸಭೆಗೆ ಸಮರ್ಥ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಈ ನಡುವೆ ಬಿಜೆಪಿ ಮುಖಂಡರು ಪುತ್ತೂರಿನ ಎಲ್ಲಾ 31 ಕ್ಷೇತ್ರದಲ್ಲಿ ಗೆಲುವು  ಸಾಧಿಸುತ್ತೇವೆ ಎಂಬ ಪತ್ರಿಕಾ ಹೇಳಿಕೆ ನೀಡಿದ್ದಾರೆ. ಅವರ ಕನಸು ಎಂದಿಗೂ ನನಸಾಗದು ಎಂದರು.

ನಗರಸಭಾ ಅಭ್ಯರ್ಥಿಗಳ ಆಯ್ಕೆಯಲ್ಲಿ ಪಕ್ಷದಿಂದ ಅಲ್ಪ ಸಂಖ್ಯಾತ ಸಮುದಾಯಕ್ಕೆ ಅನ್ಯಾಯವಾಗಿಲ್ಲ. ಕೆಲವರಿಗೆ ವೈಯಕ್ತಿಕ ಅನ್ಯಾಯ ಆಗಿರಬಹುದು ಆದರೆ ಅದು ಸಮುದಾಯಕ್ಕೆ ಆಗಿರುವ ಅನ್ಯಾಯವಲ್ಲ. 11 ಅಲ್ಪ ಸಂಖ್ಯಾತ ಅಭ್ಯರ್ಥಿಗಳನ್ನು ಪಕ್ಷವು ಕಣಕ್ಕಿಳಿಸಿದೆ ಎಂದ ಅವರು ಈಗಾಗಲೇ ತಮಗೆ ಅನ್ಯಾಯವಾಗಿದೆ ಎಂದು ಹೇಳುವ ಯಾರೂ ಪಕ್ಷದ ವಿರೋಧ ಮಾಡಲಾರರು. ಅವರೂ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಪ್ರಯತ್ನ ನಡೆಸಲಿದ್ದಾರೆ ಎಂದರು. 

ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ಅಲ್ಪ ಸಂಖ್ಯಾತ ಮುಖಂಡರಾದ ಇಸಾಕ್ ಸಾಲ್ಮರ, ನಿರ್ಮಲ್ ಕುಮಾರ್ ಜೈನ್, ಯಾಕೂಬ್ ಹಾಜಿ, ವಲೇರಿಯನ್ ಡಯಾಸ್, ಮಹಮ್ಮದ್ ಫಾರೂಕ್ ಉಪಸ್ಥಿತರಿದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X