ಪ್ರಕಾಶ್ ರೈ ವಿರುದ್ಧ ಎಫ್‌ಐಆರ್ ದಾಖಲು

ಬೆಂಗಳೂರು, ಆ.29: ಗೋವು ಕುರಿತ ಹೇಳಿಕೆಯೊಂದರ ಸಂಬಂಧ ಬಹುಭಾಷಾ ನಟ ಪ್ರಕಾಶ್ ರೈ ವಿರುದ್ಧ ಇಲ್ಲಿನ ಹನುಮಂತನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ ಎಂದು ವರದಿಯಾಗಿದೆ.
ಈ ಹಿಂದೆ ಕಿರಣ್ ಎಂಬವರು ಪ್ರಕಾಶ್ ರೈ ವಿರುದ್ಧ ಹನುಮಂತನಗರ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಆದರೆ, ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡಿರಲಿಲ್ಲ. ಪೊಲೀಸರ ಕ್ರಮವನ್ನು ಪ್ರಶ್ನಿಸಿ ಕಿರಣ್, 14ನೆ ಹೆಚ್ಚುವರಿ ಎಸಿಎಂಎಂ ನ್ಯಾಯಾಲಯಕ್ಕೆ ಖಾಸಗಿ ದೂರು ಸಲ್ಲಿಸಿದ್ದರು.
ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ಆದೇಶ ನೀಡಿದ ಹಿನ್ನೆಲೆಯಲ್ಲಿ ಪ್ರಕಾಶ್ ರೈ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಇದರ ಅನ್ವಯ ಪ್ರಕಾಶ್ ರೈ ವಿರುದ್ಧ ಭಾರತೀಯ ದಂಡ ಸಂಹಿತೆ ಕಲಂ 295(ಎ)(ಉದ್ದೇಶಪೂರ್ವಕವಾಗಿ ಮತೀಯ ನಂಬಿಕೆಗೆ ಅಪಮಾನ), 504(ಉದ್ದೇಶಪೂರ್ವಕವಾಗಿ ಶಾಂತಿ ಭಂಗ) ಅಡಿಯಲ್ಲಿ ಎಫ್‌ಐಆರ್ ದಾಖಲಾಗಿದೆ.
Next Story





