Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬಿಬಿಎಂಪಿ: ಮೊಬೈಲ್ ಟವರ್‌ಗಳಿಗೆ ಶುಲ್ಕ...

ಬಿಬಿಎಂಪಿ: ಮೊಬೈಲ್ ಟವರ್‌ಗಳಿಗೆ ಶುಲ್ಕ ವಿಧಿಸಲು ಚಿಂತನೆ

ವಾರ್ತಾಭಾರತಿವಾರ್ತಾಭಾರತಿ29 Aug 2018 9:38 PM IST
share
ಬಿಬಿಎಂಪಿ: ಮೊಬೈಲ್ ಟವರ್‌ಗಳಿಗೆ ಶುಲ್ಕ ವಿಧಿಸಲು ಚಿಂತನೆ

ಬೆಂಗಳೂರು, ಆ.29: ಬಿಬಿಎಂಪಿ ವ್ಯಾಪ್ತಿಯಲ್ಲಿ ಅಳವಡಿಸಿರುವ ಮೊಬೈಲ್ ಟವರ್‌ಗಳಿಗೆ ಶುಲ್ಕ ವಿಧಿಸುವ ಮೂಲಕ ಪಾಲಿಕೆಗೆ ಸಂಪನ್ಮೂಲ ಕ್ರೋಡೀಕರಣ ಹಾಗೂ ಟವರ್‌ಗಳ ನಿಯಂತ್ರಣಕ್ಕೆ ಮುಂದಾಗಿದ್ದಾರೆ.

ನಗರದಲ್ಲಿ ಅಳವಡಿಸಿರುವ ಮೊಬೈಲ್ ಟವರ್‌ಗಳಿಂದ ಹೊರ ಬರುವ ಸೂಕ್ಷ್ಮ ವಿಕಿರಣಗಳಿಂದ ಮನುಷ್ಯರ ಮೇಲೆ ದುಷ್ಪರಿಣಾಮ ಬೀರುತ್ತಿದೆ. ಇದರಿಂದಾಗಿ ವಿವಿಧ ರೋಗಗಳಿಗೆ ತುತ್ತಾಗುತ್ತಿದ್ದಾರೆ ಎಂಬ ದೂರುಗಳು ಕೇಳಿ ಬರುತ್ತಿದ್ದರಿಂದ, ಪಾಲಿಕೆಯು ಶುಲ್ಕ ವಿಧಿಸುವ ಮೂಲಕ ಅವುಗಳ ನಿಯಂತ್ರಣಕ್ಕೆ ಮುಂದಾಗಿದೆ.

ಪಾಲಿಕೆಯ ಹೊಸ ನಿಯಮದಂತೆ, ಮೊಬೈಲ್ ಟವರ್‌ಗೆ ಬಿಬಿಎಂಪಿಯಿಂದ ಅನುಮತಿ ಪಡೆಯಬೇಕಾಗುತ್ತದೆ. ಅನುಮತಿ ಪಡೆಯುವಾಗ ಎರಡೂವರೆ ಲಕ್ಷ ರೂ. ಪಾವತಿಸಬೇಕು. ಅಲ್ಲದೆ, ವಾರ್ಷಿಕ 50 ಸಾವಿರ ರೂ. ಶುಲ್ಕ ಪಾವತಿಸಬೇಕಾಗುತ್ತದೆ ಎಂದು ತಿಳಿಸಲಾಗಿದೆ. ಆದರೆ, ಈ ನಿರ್ಧಾರಕ್ಕೆ ಖಾಸಗಿ ಮೊಬೈಲ್ ಕಂಪೆನಿಗಳಿಂದ ವಿರೋಧ ವ್ಯಕ್ತವಾಗುತ್ತಿದೆ ಎನ್ನಲಾಗಿದೆ.

ನಗರದಲ್ಲಿ ಒಟ್ಟು 6766 ವಿವಿಧ ಮೊಬೈಲ್ ಟವರ್‌ಗಳಿದ್ದು, ಅವುಗಳಿಂದ ವಾರ್ಷಿಕ ಶುಲ್ಕ ಪಡೆದು ಪಾಲಿಕೆಯ ವರಮಾನವನ್ನು ಹೆಚ್ಚಿಸುವ ಗುರಿಯನ್ನು ಹೊಂದಲಾಗಿದೆ. ಎಟಿಸಿ ಅಮೆರಿಕ ಸಂಸ್ಥೆಯ 1920, ಇಂಡಸ್-2904, ಟವರ್ ಮಿಷನ್-448, ರಿಲಯನ್ಸ್-873, ರಿ ಇನ್‌ಫ್ರಾ-621 ಸೇರಿ ಒಟ್ಟು 9766 ಟವರ್‌ಗಳನ್ನು ನಗರದ ವಿವಿಧೆಡೆ ಹಾಕಲಾಗಿದೆ.

ಜನವಸತಿ ಪ್ರದೇಶಗಳಲ್ಲೇ ಮೊಬೈಲ್ ಟವರ್‌ಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಸ್ಥಾಪಿಸಿರುವುದರಿಂದ ಜನರು ಮತ್ತು ಪಕ್ಷಿ ಸಂಕುಲಕ್ಕೆ ತೊಂದರೆಯಾಗುತ್ತಿದೆ ಎಂದು ಸಾರ್ವಜನಿಕರು ಹಲವಾರು ಬಾರಿ ದೂರು ನೀಡಿದ್ದರು. ಹೀಗಾಗಿ, ಪಾಲಿಕೆ ಸಭೆಯಲ್ಲಿ ವಿಷಯ ಪ್ರಸ್ತಾಪಗೊಂಡಿದ್ದು, ಹೊಸ ನಿರ್ಧಾರಕ್ಕೆ ಅನುಮೋದನೆ ಪಡೆಯಲು ನಿರ್ಧರಿಸಲಾಗಿತ್ತು.

ವಿರೋಧ ಪಕ್ಷ ಬಿಜೆಪಿ ಸದಸ್ಯರು ಈ ಯೋಜನೆಗೆ ವಿರೋಧ ವ್ಯಕ್ತಪಡಿಸುವ ಮುನ್ಸೂಚನೆ ದೊರೆತ ಹಿನ್ನೆಲೆಯಲ್ಲಿ ಪ್ರಸ್ತಾಪವನ್ನು ಅಲ್ಲಿ ಮಂಡಿಸಿರಲಿಲ್ಲ. ಈಗಾಗಲೇ ಈ ನಿರ್ಣಯಕ್ಕೆ ತೆರಿಗೆ ಮತ್ತು ಆರ್ಥಿಕ ಸ್ಥಾಯಿ ಸಮಿತಿ ಅನುಮೋದನೆ ನೀಡಿದೆ. ಸೆ.10ರಂದು ನಡೆಯುವ ವಿಷಯಾಧಾರಿತ ಸಭೆಯಲ್ಲಿ ಟವರ್‌ಗಳಿಗೆ ಶುಲ್ಕ ವಿಧಿಸುವ ಪ್ರಸ್ತಾಪಕ್ಕೆ ಅನುಮೋದನೆ ಪಡೆಯಲು ನಿರ್ಧರಿಸಲಾಗಿದೆ. ಮೇಯರ್ ಅಧಿಕಾರಾವಧಿ ಮುಗಿಯುವುದರೊಳಗೆ ಈ ನಿಯಮ ಜಾರಿಗೆ ಬರುವ ಸಾಧ್ಯತೆ ಇದೆ ಎಂದು ಪಾಲಿಕೆಯ ಮೂಲಗಳು ಹೇಳಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X