ದಾವಣಗೆರೆ: ಕಾರಿನ ಟೈಯರ್ ಸಿಡಿದು ಐವರಿಗೆ ಗಾಯ
ದಾವಣಗೆರೆ,ಆ.29: ಚಲಿಸುತ್ತಿದ್ದ ಕಾರಿನ ಟೈಯರ್ ಸಿಡಿದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ, ಪಕ್ಕದ ಗುಂಡಿಗೆ ಇಳಿದಿದ್ದರಿಂದ ಕಾರಿನಲ್ಲಿದ್ದ ಐವರು ಗಾಯಗೊಂಡು ಪ್ರಾಣಾಪಾಯದಿಂದ ಪಾರಾದ ಘಟನೆ ತಾಲೂಕಿನ ಬಾತಿ ರೈಸ್‍ಮಿಲ್ ಬಳಿ ರಾಷ್ಟ್ರೀಯ ಹೆದ್ದಾರಿ-4ರಲ್ಲಿ ಸಂಭವಿಸಿದೆ.
ಬೆಂಗಳೂರಿನಿಂದ ಹುಬ್ಬಳ್ಳಿ ಕಡೆಗೆ ಹೊರಟಿದ್ದ ಮಾರುತಿ ಅಲ್ಟೋ ಕಾರಿನ ಹಿಂಭಾಗದ ಚಕ್ರ ಸಿಡಿದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಪಕ್ಕದ ಗುಂಡಿಗೆ ನುಗ್ಗಿದ್ದು, ಕಾರಿನಲ್ಲಿದ್ದ ಓರ್ವ ಬಾಲಕಿ, ಮೂವರು ಮಹಿಳೆಯರಿಗೆ ತೀವ್ರ ಪೆಟ್ಟಾಗಿದೆ. ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ವಿದ್ಯಾನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದ್ದು, ಪೊಲೀಸರು ಸ್ಥಳಕ್ಕೆ ಧಾವಿಸಿದರು.
Next Story





