ನಾಗಮಂಗಲ: ಸೆ.2 ರಂದು ರಾಜ್ಯಮಟ್ಟದ ಕವಿಕಾವ್ಯ ಮೇಳ
ನಾಗಮಂಗಲ, ಆ.30: ಮಂಡ್ಯ ಜಿಲ್ಲಾ ಯುವ ಬರಹಗಾರರ ಬಳಗ ಹಾಗೂ ನಾಗಮಂಗಲದ ಹಾರ್ಟ್(ಹೆಲ್ತ್, ಎಜುಕೇಷನ್, ಅವೆರ್‍ನೆಸ್, ರೂರಲ್ ಡೆವಲಪ್‍ಮೆಂಟ್) ಟ್ರಸ್ಟ್ ವತಿಯಿಂದ ಮೂರನೇ ವರ್ಷದ ಡಾ.ಬಾಲಗಂಗಾಧರನಾಥ ಸ್ವಾಮೀಜಿ ಸ್ಮರಣಾರ್ಥ ರಾಜ್ಯಮಟ್ಟದ ಕವಿಕಾವ್ಯ ಮೇಳವು ಸೆ.2 ರಂದು ಪಟ್ಟಣದ ತಾಲೂಕು ಒಕ್ಕಲಿಗರ ಸಂಘದ ಕಟ್ಟಡದಲ್ಲಿರುವ ಕುವೆಂಪು ಶಾಲೆಯ ದಿವಂಗತ ಬೆಟ್ಟೇಗೌಡ ಸಭಾಂಗಣದಲ್ಲಿ ನಡೆಯಲಿದೆ.
ಬೆಳಗ್ಗೆ 10ಕ್ಕೆ ಕವಿ ಜರಗನಹಳ್ಳಿ ಶಿವಶಂಕರ್ ಉದ್ಘಾಟಿಸಲಿದ್ದು, ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿ ಪುರುಷೋತ್ತಮಾನಂದ ಸ್ವಾಮೀಜಿ ಸಾನಿಧ್ಯವಹಿಸಲಿದ್ದಾರೆ. ಕನ್ನಡ ಸಾಹಿತ್ಯ ಪರಿಷತ್ತಿನ ಕೇಂದ್ರ ಸಮಿತಿ ಗೌರವ ಕಾರ್ಯದರ್ಶಿ ಪಿ. ಮಲ್ಲಿಕಾರ್ಜುನಪ್ಪ ಅಧ್ಯಕ್ಷತೆ ವಹಿಸುವರು. ಕರ್ನಾಟಕದ ಸಂಘದ ಅಧ್ಯಕ್ಷ ಪ್ರೊ. ಬಿ.ಜಯಪ್ರಕಾಶ್‍ಗೌಡ ಪ್ರಶಸ್ತಿ ಪ್ರದಾನ ಮಾಡುವರು.
ಡಾ.ಎಚ್.ಎನ್.ಮಂಜುರಾಜ್ ಅಧ್ಯಕ್ಷತೆಯಲ್ಲಿ ಕವಿಗೋಷ್ಠಿ ನಡೆಯಲಿದೆ. ಇದೇ ವೇಳೆ ವಿವಿಧ ಕ್ಷೇತ್ರದ ಸಾಧಕರಿಗೆ ಡಾ.ಬಾಲಗಂಗಾಧರನಾಥ ಸ್ವಾಮೀಜಿ ಸಮಾಜ ಸೇವಾ ಪ್ರಶಸ್ತಿ ಪ್ರದಾನಿಸಲಾಗುವುದು. ಮಧ್ಯಾಹ್ನ 3.30ಕ್ಕೆ ವಿಧಾನಪರಿಷತ್ ಸದಸ್ಯ ಕೆ.ಟಿ.ಶ್ರೀಕಂಠೇಗೌಡ ಸಮಾರೋಪ ಭಾಷಣ ಮಾಡಲಿದ್ದು, ವಿಧಾನಪರಿಷತ್ ಸದಸ್ಯ ಎನ್.ಅಪ್ಪಾಜಿಗೌಡ ಅಧ್ಯಕ್ಷತೆವಹಿಸಲಿದ್ದಾರೆ.





