Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಡುಪಿ: ವಿಶ್ವ ಬಂಟರ ಸಮ್ಮಿಲನದ ಆಹ್ವಾನ...

ಉಡುಪಿ: ವಿಶ್ವ ಬಂಟರ ಸಮ್ಮಿಲನದ ಆಹ್ವಾನ ಪತ್ರಿಕೆ ಬಿಡುಗಡೆ

ವಾರ್ತಾಭಾರತಿವಾರ್ತಾಭಾರತಿ30 Aug 2018 9:59 PM IST
share
ಉಡುಪಿ: ವಿಶ್ವ ಬಂಟರ ಸಮ್ಮಿಲನದ ಆಹ್ವಾನ ಪತ್ರಿಕೆ ಬಿಡುಗಡೆ

ಉಡುಪಿ, ಜು. 30: ಜಾಗತಿಕ ಬಂಟರ ಸಂಘಗಳ ಒಕ್ಕೂಟ ಹಾಗೂ ಉಡುಪಿ ಜಿಲ್ಲೆಯ ಸಮಸ್ತ ಬಂಟರ ಸಂಘಗಳ ಸಹಯೋಗದಲ್ಲಿ  ಸೆ. 9ರಂದು ಉಡುಪಿಯ ಶ್ರೀಮತಿ ಅಮ್ಮಣ್ಣಿ ರಾಮಣ್ಣ ಶೆಟ್ಟಿ ಸಭಾಂಗಣದಲ್ಲಿ ನಡೆಯಲಿರುವ ‘ವಿಶ್ವ ಬಂಟರ ಸಮ್ಮಿಲನ-2018’ರ ಆಹ್ವಾನ ಪತ್ರಿಕೆಯನ್ನು ಇಂದು ಸಂಜೆ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಬಿಡುಗಡೆ ಗೊಳಿಸಿದರು.

ವಿಶ್ವಮಟ್ಟದ ಸಮಸ್ತ ಬಂಟರನ್ನು ಒಗ್ಗೂಡಿಸಿ ವಿಶ್ವ ಬಂಟರ ಸಮ್ಮಿಲನವನ್ನು ಹಮ್ಮಿಕೊಳ್ಳಲಾಗಿದ್ದು, ರಾಜ್ಯದ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಸಮ್ಮ್ಞಿಲನದಲ್ಲಿ ಪಾಲ್ಗೊಳ್ಳಲಿದ್ದಾರೆ. ಅದೇ ರೀತಿ ಬಾಲಿವುಡ್ ಹಾಗೂ ಕನ್ನಡ ಚಿತ್ರರಂಗದ ಬಹಳಷ್ಟು ತಾರೆಯರು ಸಹ ಈ ಒಂದು ದಿನದ ಈ ಸಮ್ಮೇಳನದಲ್ಲಿ ಭಾಗವಹಿಸಲಿದ್ದಾರೆ ಎಂದವರು ನುಡಿದರು.

ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಸಮ್ಮೇಳನ ಸಮಿತಿಯ ಅಧ್ಯಕ್ಷ ಇಂದ್ರಾಳಿ ಜಯಕರ ಶೆಟ್ಟಿ ಮಾತನಾಡಿ, ಬೆಳಗ್ಗೆ 8 ರಿಂದ ರಾತ್ರಿ 9 ರವರೆಗೆ ದಿನವಿಡೀ ವೈವಿಧ್ಯಮಯ ಕಾರ್ಯಕ್ರಮಗಳು ನಡೆಯಲಿವೆ. ಈ ಸಮ್ಮೇಳನ ದಲ್ಲಿ ವಿಶ್ವದಾದ್ಯಂತ ಇರುವ ಸುಮಾರು 15,000 ಬಂಟರು ಭಾಗವಹಿಸುವ ನಿರೀಕ್ಷೆ ಇದೆ ಎಂದರು.

ದೇಶ-ವಿದೇಶಗಳಲ್ಲಿರುವ ನೂರಾರು ಮಂದಿ ಬಂಟ ಸಮುದಾಯದವರು ಭಾಗವಹಿಸುವ ‘ಅನಿವಾಸಿ-ಎನ್‌ಆರ್‌ಐ ಸಮ್ಮಿಲನ’, ‘ಬಂಟರ ರಾಜಕೀಯ ಸಮ್ಮೇಳನ’, ಗಡಿಪ್ರಧಾನರ ಸಮ್ಮಿಲನ, ‘ಬಂಟರ ಆರಾಧನೆ ಮತ್ತು ಆಚಾರ ವಿಚಾರಗಳು’ ಕುರಿತು ವಿಚಾರ ಮಂಥನವೂ ನಡೆಯಲಿದೆ ಎಂದರು.

ಜಗತ್ತಿನ ನಾನಾ ಭಾಗಗಳಲ್ಲಿ ನೆಲೆಸಿರುವ ಎಲ್ಲಾ ಬಂಟರನ್ನು, ಬಂಟರ ಸಂಘ ಗಳನ್ನು ಒಗ್ಗೂಡಿಸಿ ಎಲ್ಲರ ನಡುವೆ ಸಂವಾದ ಏರ್ಪಡಿಸುವುದು. ಬಂಟರ ಮೂಲ ಸಂಸ್ಕಾರ, ಸಂಸ್ಕೃತಿಯ ಬಗ್ಗೆ ಅರಿವು ಮೂಡಿಸುವುದು ಈ ಸಮ್ಮೇಳನದ ಉದ್ದೇಶವಾಗಿದೆ. ಕರಾವಳಿಯ ಗ್ರಾಮೀಣ ಭಾಗದ ಬಂಟರ ಭಾಗವಹಿಸುವಿಕೆಗೆ ಹೆಚ್ಚಿನ ಒತ್ತು ನೀಡಲಾಗುವುದು ಎಂದು ಐಕಳ ಹರೀಶ್ ಶೆಟ್ಟಿ ಮತ್ತು ಜಯಕರ ಶೆಟ್ಟಿ ಇಂದ್ರಾಳಿ ತಿಳಿಸಿದರು.

ಇಂದಿನ ಕಾರ್ಯಕ್ರಮದಲ್ಲಿ ಒಕ್ಕೂಟದ ಕಾರ್ಯದರ್ಶಿ ವಿಜಯಪ್ರಸಾದ್ ಶೆಟ್ಟಿ, ಕೋಶಾಧಿಕಾರಿ ಕೊಲಾಡಿ ಬಾಲಕೃಷ್ಣ ಶೆಟ್ಟಿ, ಸಮ್ಮೇಳನದ ಸಂಚಾಲಕ ಕಾಪು ಲೀಲಾಧರ ಶೆಟ್ಟಿ, ಉಡುಪಿ ಬಂಟರ ಸಂಘದ ಕಾರ್ಯದರ್ಶಿ ಮೋಹನ ಶೆಟ್ಟಿ ಮೂಡನಿಡಂಬೂರು, ಕೋಶಾಧಿಕಾರಿ ಮನೋಹರ ಶೆಟ್ಟಿ ತೋನ್ಸೆ, ಪುರುಷೋತ್ತಮ ಶೆಟ್ಟಿ, ಅಂಡಾರು ದೇವಿಪ್ರಸಾದ್ ಶೆಟ್ಟಿ, ಗುರ್ಮೆ ಸುರೇಶ್ ಶೆಟ್ಟಿ ಮುಂತಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X