ಗುಂಡಿನ ಚಕಮಕಿ: ಇಬ್ಬರು ಉಗ್ರರ ಸಾವು
ಶ್ರೀನಗರ, ಆ. 30: ಜಮ್ಮು ಹಾಗೂ ಕಾಶ್ಮೀರದ ಬಂಡಿಪೋರ ಜಿಲ್ಲೆಯಲ್ಲಿ ಗುರುವಾರ ನಡೆದ ಭದ್ರತಾ ಪಡೆಯ ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರು ಹತರಾಗಿದ್ದಾರೆ. ಉಗ್ರರು ಇದ್ದ ಹಿನ್ನೆಲೆಯಲ್ಲಿ ಭಾರತೀಯ ಸೇನೆಯ ಗಸ್ತು ಪಡೆ ಹಾಗೂ ರಾಜ್ಯ ಪೊಲೀಸರು ಹಾಜಿನ್‌ರ ಪಾರೆ ಮೊಹಲ್ಲಾವನ್ನು ಸುತ್ತುವರಿದರು. ಈ ಸಂದರ್ಭ ಉಗ್ರರು ಗುಂಡು ಹಾರಿಸಿದರು. ಇದಕ್ಕೆ ಯೋಧರು ಪ್ರತಿದಾಳಿ ನಡೆಸಿದರು. ಗುಂಡಿನ ಚಕಮಕಿಯಲ್ಲಿ ಇಬ್ಬರು ಉಗ್ರರು ಹತರಾದರು ಎಂದು ಪೊಲೀಸರು ತಿಳಿಸಿದ್ದಾರೆ.
Next Story





