ಶಿವಮೊಗ್ಗ: ಅಪಘಾತದಲ್ಲಿ ಗಾಯಗೊಂಡಿದ್ದ ಬೈಕ್ ಸವಾರ ಸಾವು

ಶಿವಮೊಗ್ಗ, ಆ. 30: ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಶಿವಮೊಗ್ಗದ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಾಗರ ಮೂಲದ ಬೈಕ್ ಸವಾರನೋರ್ವ ಚಿಕಿತ್ಸೆ ಫಲಕಾರಿಯಾಗದೆ ಅಸುನೀಗಿರುವ ಘಟನೆ ವರದಿಯಾಗಿದೆ.
ಸಾಗರದ ಕಾಗೋಡಿನ ಎಸ್.ಸಿ.ಕಾಲೋನಿಯ ನಿವಾಸಿ, ಟಿಂಬರ್ ಮರ ಕಟಾವು ಕೆಲಸ ಮಾಡುವ ಕೂಲಿಕಾರ್ಮಿಕ ರಾಜೇಶ್ (18) ಮೃತಪಟ್ಟ ಬೈಕ್ ಸವಾರ ಎಂದು ಗುರುತಿಸಲಾಗಿದೆ. ಇವರು ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಗೋಡು ಬಳಿ ಮತ್ತೊಂದು ಬೈಕ್ ಢಿಕ್ಕಿ ಹೊಡೆದಿತ್ತು. ಘಟನೆಯಲ್ಲಿ ಒಟ್ಟಾರೆ ಎರಡೂ ಬೈಕ್‍ಗಳಲ್ಲಿದ್ದ ಮೂವರು ಗಾಯಗೊಂಡಿದ್ದರು.
ಗಂಭೀರವಾಗಿ ಗಾಯಗೊಂಡಿದ್ದ ರಾಜೇಶ್‍ರನ್ನು ಸಾಗರದ ಸರ್ಕಾರಿ ಉಪ ವಿಭಾಗೀಯ ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಆಸ್ಪತ್ರೆಯೊಂದಕ್ಕೆ ದಾಖಲಿಸಲಾಗಿತ್ತು. ಈ ಸಂಬಂಧ ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





