Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಡುಪಿ ನಗರ ಸ್ಥಳೀಯ ಸಂಸ್ಥೆ ಚುನಾವಣೆ:...

ಉಡುಪಿ ನಗರ ಸ್ಥಳೀಯ ಸಂಸ್ಥೆ ಚುನಾವಣೆ: ಶೇ.72.30 ಮತದಾನ

ಜಿಲ್ಲೆಯಲ್ಲಿ ಶಾಂತಿಯುತ ಮತದಾನ

ವಾರ್ತಾಭಾರತಿವಾರ್ತಾಭಾರತಿ31 Aug 2018 8:58 PM IST
share
ಉಡುಪಿ ನಗರ ಸ್ಥಳೀಯ ಸಂಸ್ಥೆ ಚುನಾವಣೆ: ಶೇ.72.30 ಮತದಾನ

ಉಡುಪಿ, ಆ.31: ಜಿಲ್ಲೆಯ ನಾಲ್ಕು ನಗರ ಸ್ಥಳೀಯ ಸಂಸ್ಥೆಗಳಿಗೆ - ಉಡುಪಿ ನಗರಸಭೆ, ಕುಂದಾಪುರ ಮತ್ತು ಕಾರ್ಕಳ ಪುರಸಭೆ ಹಾಗೂ ಸಾಲಿಗ್ರಾಮ ಪಟ್ಟಣ ಪಂಚಾಯತ್- ಶುಕ್ರವಾರ ನಡೆದ ಚುನಾವಣೆ ಶಾಂತಿಯುತ ಮತದಾನ ದೊಂದಿಗೆ ಮುಕ್ತಾಯಗೊಂಡಿದ್ದು ಜಿಲ್ಲೆಯಲ್ಲಿ ಸಾಸರಿ ಶೇ.72.30 ಮತದಾನ ವಾಗಿದೆ.

ಉಡುಪಿ ನಗರಸಭೆಯಲ್ಲಿ ಶೇ.68.52, ಸಾಲಿಗ್ರಾಮ ಪಟ್ಟಣ ಪಂಚಾಯತ್ ನಲ್ಲಿ ಶೇ.75.26, ಕುಂದಾಪುರ ಪುರಸಭೆಯಲ್ಲಿ ಶೇ.73.81 ಹಾಗೂ ಕಾರ್ಕಳ ಪುರಸಭೆಯಲ್ಲಿ ಶೇ.71.61 ಮತದಾನವಾಗಿದ್ದು, ಜಿಲ್ಲೆಯಲ್ಲಿ ಒಟ್ಟು ಸರಾಸರಿ ಶೇ.72.30 ಮತದಾನವಾಗಿದೆ ಎಂದು ಜಿಲ್ಲಾ ಚುನಾವಣಾ ಕಚೇರಿ ತಿಳಿಸಿದೆ.

ಉಡುಪಿಯ ಕೊಡವೂರು ವಾರ್ಡ್ ಮತ್ತು ನಿಟ್ಟೂರು ವಾರ್ಡುಗಳ ಮತಗಟ್ಟೆಗಳಲ್ಲಿ ಬೆಳಗ್ಗೆ ಮತಯಂತ್ರ ಕೈಕೊಟ್ಟು ಕೆಲಕಾಲ ಮತದಾನ ಸ್ಥಗಿತ ಗೊಂಡಿದ್ದನ್ನು ಹೊರತು ಪಡಿಸಿದರೆ, ಜಿಲ್ಲೆಯ ನಾಲ್ಕು ನಗರ ಸ್ಥಳೀಯ ಸಂಸ್ಥೆ ಗಳಿಂದ ಮತದಾನಕ್ಕೆ ಅಡಚಣೆಯಾದ ಯಾವುದೇ ವರದಿಗಳು ಬಂದಿಲ್ಲ.

ಬೆಳಗ್ಗೆಯಿಂದಲೇ ಮತಗಟ್ಟೆಗಳಿಗೆ ಆಗಮಿಸಿದ ಜನತೆ ಉತ್ಸಾಹದಿಂದ ಮತ ಚಲಾಯಿಸಿದರು. ಬೆಳಗ್ಗೆ 9 ಗಂಟೆಯ ವೇಳೆಗೆ ಜಿಲ್ಲೆಯಲ್ಲಿ ಶೇ.14.25ರಷ್ಟು ಮತದಾನವಾಗಿದ್ದು, 11 ಗಂಟೆಯ ವೇಳೆಗೆ ಶೇ.31.14, ಒಂದು ಗಂಟೆ ವೇಳೆಗೆ ಶೇ.45.40 ಹಾಗೂ ಅಪರಾಹ್ನ 3 ಗಂಟೆಗೆ ಶೇ.56.43ರಷ್ಟು ಮತದಾನ ನಡೆದಿತ್ತು.

ಕಳೆದ ಕೆಲವು ದಿನಗಳಿಂದ ಆಗಾಗ ಸುರಿಯುತಿದ್ದ ಮಳೆ ಇಂದು ವಿಶ್ರಾಂತಿ ಪಡೆದಂತಿದ್ದು, ಇದರಿಂದ ಜನರು ಬೆಳಗ್ಗೆಯೇ ಬಂದು ಮತ ಚಲಾಯಿಸಿದರು. ಉಡುಪಿ, ಸಾಲಿಗ್ರಾಮ, ಕುಂದಾಪುರಗಳ ಹಲವು ಮತಗಟ್ಟೆಗಳಲ್ಲಿ ವೃದ್ದರು, ವಿಕಲಚೇತನರು, ಅನಾರೋಗ್ಯ ಪೀಡಿತರು ಸಹಾಯಕರ ನೆರವಿನಿಂದ ಮತಗಟ್ಟೆಗೆ ಆಗಮಿಸಿ ಮತ ಚಲಾಯಿಸಿದರು.

ಸಾಲಿಗ್ರಾಮ ಪಟ್ಟಣ ಪಂಚಾಯತ್‌ನ ಕಾರ್ಕಡ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಮತಗಟ್ಟೆಯಲ್ಲಿ ಇಬ್ಬರು ಗಾಲಿಕುರ್ಚಿಯಲ್ಲಿ ಬಂದು ಮತ ಚಲಾಯಿಸಿದರೆ, ಹೆಚ್ಚು ಕಡಿಮೆ ಎಲ್ಲಾ ಚುನಾವಣೆಗಳಲ್ಲೂ ಮತ ಚಲಾಯಿಸಿರುವ ಗುಂಡ್ಮಿಯ 88ರ ಹರೆಯದ ಗಿರಿಜಮ್ಮ ತನ್ನ ಮೊಮ್ಮಗಳ ನೆರವಿನಿಂದ ನಿಧಾನವಾಗಿ ನಡೆದುಕೊಂಡು ಬಂದು ತನ್ನ ಮತವನ್ನು ಚಲಾಯಿಸಿದರು.

ಕುಂದಾಪುರ ಪುರಸಭೆಯ ಸರಕಾರಿ ಆಸ್ಪತ್ರೆ ವಾರ್ಡ್‌ನ ಬಂಟ್ವಾಳ ರಘುನಾಥ ರಾವ್ ಹಿರಿಯ ಪ್ರಾಥಮಿಕ ಶಾಲೆಯ ಮತಗಟ್ಟೆಗೆ ಅನಾರೋಗ್ಯ ಪೀಡಿತ 80 ವರ್ಷದ ಸೀತು ಮೊಗೇರ್ತಿ ವಾಕರ್ ನೆರವಿನಿಂದ ನಡೆದುಕೊಂಡು ಬಂದು ಮತ ಚಲಾಯಿಸಿದರು. ಸಾಲಿಗ್ರಾಮ ಪ.ಪಂ.ನ ಯಕ್ಷಮಠ ವಾರ್ಡ್‌ನ ಗುಂಡ್ಮಿ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 50 ವರ್ಷ ಪ್ರಾಯದ ವಿಕಲಚೇತನ ವಾಸು ಅವರು ಪತ್ನಿಯೊಂದಿಗೆ ಬಂದು ತಮ್ಮ ಮತವನ್ನು ಚಲಾಯಿಸಿ ತೆರಳಿದರು.

ಕುಂದಾಪುರ ಪುರಸಭಾ ವ್ಯಾಪ್ತಿಯಲ್ಲಿ ಭಾರೀ ಕುತೂಹಲ ಕೆರಳಿಸಿರುವ ಸೆಂಟ್ರಲ್ ವಾರ್ಡ್‌ನಲ್ಲಿ 11 ಗಂಟೆಯ ಸುಮಾರಿಗೆ ಶೇ.40ರಷ್ಟು ಮತದಾನ ವಾಗಿತ್ತು. ಈ ವಾರ್ಡ್‌ನಲ್ಲಿ ಬಿಜೆಪಿ ಅಧಿಕೃತ ಅಭ್ಯರ್ಥಿ, ಹಿರಿಯ ನಾಯಕ ಮೋಹನದಾಸ ಶೆಣೈ ಅವರು ಬಿಜೆಪಿ ವಿರುದ್ಧ ಬಂಡಾಯವೆದ್ದು ಪಕ್ಷೇತರರಾಗಿ ಅಟೋ ಚಿನ್ನೆಯೊಂದಿಗೆ ಸ್ಪರ್ಧಿಸಿರುವ ರಾಜೇಶ್ ಕಾವೇರಿ ನಡುವೆ ಜಿದ್ದಾಜಿದ್ದಿ ಸೆಣಸಾಟ ನಡೆದಿದೆ.

ಸೆಂಟ್ರಲ್ ವಾರ್ಡಿನ ನಾರಾಯಣಗುರು ಕಲ್ಯಾಣ ಮಂಟಪ ಮತಗಟ್ಟೆಯಲ್ಲಿ ಸುದ್ದಿಗಾರರಿಗೆ ಮಾತನಾಡಲು ಸಿಕ್ಕಿದ ರಾಜೇಶ್ ಕಾವೇರಿ, ಗೆಲುವಿನ ಪೂರ್ಣ ವಿಶ್ವಾಸ ವ್ಯಕ್ತಪಡಿಸಿದರು. ಎರಡು ದಶಕಗಳಿಗೂ ಅಧಿಕ ಸಮಯದಿಂದ ಪಕ್ಷಕ್ಕಾಗಿ ಅಹಿರ್ನಿಶಿ ದುಡಿದ ತನ್ನನ್ನು ರಾಜಕೀಯವಾಗಿ ಮುಗಿಸಲು ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟರ ನೇತೃತ್ವದಲ್ಲಿ ಪ್ರಯತ್ನಗಳು ನಡೆಯುತ್ತಿವೆ. ಆದರೆ ಈ ವಾರ್ಡಿನ ಜನರು ತನ್ನ ಹಿಂದೆ ಬಂಡೆಗಲ್ಲಿನಂತೆ ನಿಂತಿದ್ದಾರೆ ಎಂದರು.

ಕೋಡಿ ಉತ್ತರ ವಾರ್ಡ್‌ನ ಕೋಡಿ ಲೈಟ್‌ಹೌಸ್ ಮತಗಟ್ಟೆಯ ಬಳಿ ಸುದ್ದಿಗಾರರಿಗೆ ಎದುರಾದ ಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ, ಮತದಾನದಲ್ಲಿ ಬಂಡಾಯವೆಲ್ಲಾ ಇದ್ದದ್ದೆ. ಭಿನ್ನಮತವಿಲ್ಲದೇ ಪ್ರಜಾಪ್ರಭುತ್ವ ವಿಲ್ಲ. ಆದರೆ ಮತದಾರರು ಪ್ರಜ್ಞಾವಂತರಿದ್ದಾರೆ. ಅವರಿಗೆ ಯಾರ ಸಾಮರ್ಥ್ಯ ಏನು ಎಂಬುದು ಚೆನ್ನಾಗಿ ಗೊತ್ತಿದೆ. ನಮಗಂತೂ ಪೂರ್ಣ ಬಹುಮತದೊಂದಿಗೆ ಗೆಲ್ಲುವ ವಿಶ್ವಾಸವಿದೆ ಎಂದರು.

ಉಡುಪಿಯ ವಿವಿಧ ಮತಗಟ್ಟೆಗಳಲ್ಲೂ ಸಂಜೆ ನಾಲ್ಕು ಗಂಟೆಯ ಬಳಿಕ ಮತದಾನ ನಿಧಾನವಾಯಿತು. ಹೀಗಾಗಿ ಜಿಲ್ಲೆಯ ನಾಲ್ಕು ಸ್ಥಳೀಯ ಸಂಸ್ಥೆಗಳಲ್ಲಿ ಉಡುಪಿಯಲೆ್ಲೀ ಅತೀ ಕಡಿಮೆ ಮತದಾನವಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X