Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ‘ಸ್ವರಕ್ಷಾ ಫಾರ್ ವಿಮನ್’ನ ಕಾರ್ತಿಕ್...

‘ಸ್ವರಕ್ಷಾ ಫಾರ್ ವಿಮನ್’ನ ಕಾರ್ತಿಕ್ ಎಸ್.ಕಟೀಲ್‌ರಿಂದ ಮಣಿಪಾಲದಲ್ಲಿ ಮಿಕ್ಸೆಡ್ ಮಾರ್ಷಲ್ ಆರ್ಟ್ ಅಕಾಡೆಮಿ

ವಾರ್ತಾಭಾರತಿವಾರ್ತಾಭಾರತಿ31 Aug 2018 9:38 PM IST
share
‘ಸ್ವರಕ್ಷಾ ಫಾರ್ ವಿಮನ್’ನ ಕಾರ್ತಿಕ್ ಎಸ್.ಕಟೀಲ್‌ರಿಂದ ಮಣಿಪಾಲದಲ್ಲಿ ಮಿಕ್ಸೆಡ್ ಮಾರ್ಷಲ್ ಆರ್ಟ್ ಅಕಾಡೆಮಿ

ಉಡುಪಿ, ಆ.31: ನಾಲ್ಕು ವರ್ಷಗಳ ಹಿಂದೆ ಶಾಲಾ ವಿದ್ಯಾರ್ಥಿನಿಯರು, ಯುವತಿಯರು ಹಾಗೂ ಮಹಿಳೆಯರ ಸ್ವರಕ್ಷಣೆಗಾಗಿ ‘ಸ್ವರಕ್ಷಾ ಫಾರ್ ವಿಮೆನ್’ ಕಾರ್ಯಕ್ರಮವನ್ನು ಪ್ರಾರಂಭಿಸಿದ ಮಂಗಳೂರಿನ ಕರಾಟೆಪಟು ಹಾಗೂ ಸ್ವರಕ್ಷಾ ಫಾರ್ ವಿಮೆನ್ ಟ್ರಸ್ಟ್‌ನ ಸ್ಥಾಪಕ ಕಾರ್ತಿಕ್ ಎಸ್. ಕಟೀಲ್ ಅವರು ಮಣಿಪಾಲದಲ್ಲಿ ಮಿಕ್ಸೆಡ್ ಮಾರ್ಷಲ್ ಆರ್ಟ್ ಅಕಾಡೆಮಿಯನ್ನು ಪ್ರಾರಂಭಿಸಲಿದ್ದಾರೆ.

ಉಡುಪಿಯಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ಮಣಿಪಾಲದಲ್ಲಿರುವ ಕೋರ್ ಫಿಟ್‌ನೆಸ್ ಸೆಂಟರ್‌ನಲ್ಲಿ ಈ ಅಕಾಡೆಮಿ ಪ್ರಾರಂಭಗೊಳ್ಳಲಿದೆ ಎಂದರು.

ಅಕಾಡೆಮಿ ಎಲ್ಲಾ ವಯಸ್ಸಿನ ಪುರುಷರು ಮತ್ತು ಮಹಿಳೆಯರಿಗೆ ಸ್ವರಕ್ಷಣೆಯ ವಿವಿಧ ಕಲೆಗಳಲ್ಲಿ ತರಬೇತಿಯನ್ನು ನೀಡಲಿದೆ. ಇದರಲ್ಲಿ ಟೇಕ್ವಾಂಡೋ, ಮುಅತ್ತಾಯ್, ಜೀತ್ಸುಂಡೋ, ಜುಜಿತ್ಸು ಮತ್ತು ಕರಾಟೆ ತರಬೇತಿಯನ್ನು ನೀಡಲಾಗುತ್ತದೆ ಎಂದವರು ವಿವರಿಸಿದರು.

ಅಕಾಡೆಮಿಯಲ್ಲಿ ತರಬೇತಿ ಪಡೆದ ವಿದ್ಯಾರ್ಥಿಗಳಿಗೆ ಜೀತ್ಕುಂಡೊ ಅಕಾಡೆಮಿಯ ಪ್ರಮಾಣ ಪತ್ರದೊಂದಿಗೆ ಅಂತಾರಾಷ್ಟ್ರೀಯ ಸ್ಪರ್ಧೆಗಳಲ್ಲಿ ಭಾಗವಹಿಸಲು ಅವಕಾಶವನ್ನು ನೀಡಲಾಗುತ್ತದೆ ಎಂದು ಕಾರ್ತಿಕ್ ಕಟೀಲ್ ತಿಳಿಸಿದರು.

ಸ್ವರಕ್ಷಾ ಫಾರ್ ವಿಮೆನ್ ಎಂಬುದು 95 ನಿಮಿರ್ಷಗಳ ಸರಳ ಹಾಗೂ ಪರಿಣಾಮಕಾರಿಯಾದ ಮಹಿಳಾ ಸ್ವರಕ್ಷಣಾ ತರಬೇತಿ ಕಾರ್ಯಕ್ರಮವಾಗಿದೆ. ಮನ:ಶಾಸ್ತ್ರ ಹಾಗೂ ನೈಜ ಘಟನೆಗಳ ಆಧಾರದ ಮೇಲೆ ರೂಪಿತವಾದ ಐದು ರಕ್ಷಣಾ ತಂತ್ರಗಳನ್ನು 11ರ ಹರೆಯದ ಬಾಲಕಿಯಿಂದ 60 ವರ್ಷ ಪ್ರಾಯದ ಮಹಿಳೆಯವರೆಗೆ ಎಲ್ಲರೂ ಕಲಿತು ಸ್ವರಕ್ಷಣೆಗೆ ಸುಲಭವಾಗಿ ಉಪಯೋಗಿಸ ಬಹುದಾಗಿದೆ ಎಂದು ಕಟೀಲ್ ವಿವರಿಸಿದರು.

ಕಳೆದ ನಾಲ್ಕು ವರ್ಷಗಳಲ್ಲಿ 430 ಸಂಸ್ಥೆಗಳ 1.30 ಲಕ್ಷಕ್ಕೂ ಅಧಿಕ ವಿದ್ಯಾರ್ಥಿನಿಯರಿಗೆ ಹಾಗೂ ಮಹಿಳೆಯರಿಗೆ 700ಕ್ಕೂ ಅಧಿಕ ಕಾರ್ಯಾಗಾರ ಗಳಲ್ಲಿ ತರಬೇತಿ ನೀಡಲಾಗಿದೆ. ಇದರಿಂದ ನೂರಾರು ಮಹಿಳೆಯರು ಲೈಂಗಿಕ ದೌರ್ಜನ್ಯದಿಂದ ಪಾರಾಗಲು ಸಾಧ್ಯವಾಗಿದ್ದು, ಪೊಲೀಸ್ ಇಲಾಖೆ, ವೈದ್ಯರು, ಶಿಕ್ಷಣ ತಜ್ಞರು ಈ ಕಾರ್ಯಕ್ರಮವನ್ನು ಶ್ಲಾಘಿಸಿದ್ದಾರೆ ಎಂದು ಕಾರ್ತಿಕ್ ಹೇಳಿದರು.

ಸುದ್ಧಿಗೋಷ್ಠಿಯಲ್ಲಿ ಉಡುಪಿ ಪವರ್ ಸಂಸ್ಥೆಯ ಸ್ಥಾಪಕಿ ಸರಿತಾ ಸಂತೋಷ್, ಡಾ.ಜಿ.ಶಂಕರ್ ಮಹಿಳಾ ಕಾಲೇಜಿನ ಪ್ರಾಂಶುಪಾಲ ಡಾ.ಭಾಸ್ಕರ ಶೆಟ್ಟಿ, ಸ್ವರಕ್ಷಾ ಫಾರ್ ವಿಮೆನ್ ಟ್ರಸ್ಟ್‌ನ ಉಪಾಧ್ಯಕ್ಷೆ ಶೋಭಲತಾ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X