Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಅತಿವೃಷ್ಟಿ ಸಂಕಷ್ಟ: ಹೆಚ್ಚುವರಿ ಅಕ್ಕಿ,...

ಅತಿವೃಷ್ಟಿ ಸಂಕಷ್ಟ: ಹೆಚ್ಚುವರಿ ಅಕ್ಕಿ, ಸೀಮೆಎಣ್ಣೆಗೆ ಕುಡಿಯ ಜನಾಂಗ ಬೇಡಿಕೆ

ವಾರ್ತಾಭಾರತಿವಾರ್ತಾಭಾರತಿ31 Aug 2018 11:40 PM IST
share
ಅತಿವೃಷ್ಟಿ ಸಂಕಷ್ಟ: ಹೆಚ್ಚುವರಿ ಅಕ್ಕಿ, ಸೀಮೆಎಣ್ಣೆಗೆ ಕುಡಿಯ ಜನಾಂಗ ಬೇಡಿಕೆ

ಮಡಿಕೇರಿ, ಆ.31 : ಮಡಿಕೇರಿ ತಾಲೂಕಿನ ಬ್ರಹ್ಮಗಿರಿ ಬೆಟ್ಟದ ತಪ್ಪಲಲ್ಲಿ ವಾಸಿಸುವ ಕುಡಿಯ ಜನಾಂಗದವರು ಕಳೆದ ಎರಡು ತಿಂಗಳುಗಳಿಂದ ಕೂಲಿ ಕೆಲಸವಿಲ್ಲದಿರುವುದರಿಂದ ಪೌಷ್ಠಿಕ ಆಹಾರದ ಕೊರತೆಯಿಂದ ಬಳಲುತ್ತಿದ್ದಾರೆ. ಅತಿವೃಷ್ಟಿಯಿಂದ ಮುಂದಿನ ಎರಡು ತಿಂಗಳುಗಳ ಕಾಲವೂ ಕೂಲಿ ಕೆಲಸ ದೊರೆಯುವುದು ಕಷ್ಟವಾಗಿದ್ದು, ಸರಕಾರ ಕುಡಿಯ ಜನಾಂಗದ ಕುಟುಂಬಗಳಿಗೆ ಮಾಸಿಕ 25 ಕೆ.ಜಿ ಅಕ್ಕಿ ಹಾಗೂ 5 ಲೀಟರ್ ಸೀಮೆಎಣ್ಣೆಯನ್ನು ಒದಗಿಸಬೇಕು ಎಂದು ಬುಡಕಟ್ಟು ಕೃಷಿಕರ ಸಂಘದ ಮಡಿಕೇರಿ ತಾಲೂಕು ಅಧ್ಯಕ್ಷ ಕುಡಿಯರ ಎ.ಮುತ್ತಪ್ಪ ಒತ್ತಾಯಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅತಿವೃಷ್ಟಿಯಿಂದಾಗಿ ಕೊಡಗಿನ ಬೆಳೆಗಾರರು ಸೇರಿದಂತೆ ಜನಸಾಮಾನ್ಯರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದು, ಸಹಕಾರ ಸಂಸ್ಥೆ ಹಾಗೂ ರಾಷ್ಟ್ರೀಕೃತ ಬ್ಯಾಂಕ್‍ಗಳಲ್ಲಿ ಮಾಡಿರುವ ಎಲ್ಲಾ ವಿಧದ ಸಾಲಗಳನ್ನು ಸರಕಾರ ಮನ್ನಾ ಮಾಡಬೇಕು ಎಂದು ಆಗ್ರಹಿಸಿದರು.

ಜಿಲ್ಲೆಯ ಐಟಿಡಿಪಿ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸಮಗ್ರ ಗಿರಿಜನ ಅಭಿವೃದ್ಧಿ ಯೋಜನಾಧಿಕಾರಿ ಶಿವಕುಮಾರ್ ಅವರು ಉತ್ತಮ ರೀತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದು, ಅವರಿಂದ ಜಿಲ್ಲೆಯ ಪರಿಶಿಷ್ಟ ಪಂಗಡದ ಜನತೆಗೆ ಹಲವಾರು ಯೋಜನೆಗಳು ತಲುಪುತ್ತಿವೆ. ಆದರೆ ಅವರನ್ನು ಬೇರೆಡೆಗೆ ವರ್ಗಾವಣೆ ಮಾಡುವ ಕುರಿತು ಮಾಹಿತಿ ದೊರೆತಿದ್ದು, ಯಾವುದೇ ಕಾರಣಕ್ಕೂ ವರ್ಗಾವಣೆ ಮಾಡಬಾರದು ಎಂದು ಮುತ್ತಪ್ಪ ಒತ್ತಾಯಿಸಿದರು.

ಕೊಡಗು ಜಿಲ್ಲೆಯಲ್ಲಿ ಪರಿಶಿಷ್ಟ ಪಂಗಡದ ಜೇನುಕುರುಬ, ಯರವ, ಸೋಲಿಗ ಮತ್ತು ಕಾಡುಕುರುಬ ಜನಾಂಗಗಳಿಗೆ ವಿತರಿಸಲಾಗುತ್ತಿದ್ದ ಪೌಷ್ಠಿಕ ಆಹಾರ ಸಾಮಾಗ್ರಿಗಳನ್ನು ಪ್ರಸಕ್ತ ಜಿಲ್ಲೆಯಲ್ಲಿರುವ 400 ಕುಡಿಯ ಜನಾಂಗದ ಕುಟುಂಬಗಳಿಗೂ ವಿಸ್ತರಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಜಿಲ್ಲೆಯಲ್ಲಿ ವಾಸಿಸುತ್ತಿರುವ ಪರಿಶಿಷ್ಟ ಪಂಗಡದ ಜೇನುಕುರುಬ, ಯರವ, ಸೋಲಿಗ ಕಾಡುಕುರುಬ ಜನಾಂಗದ ಕುಟುಂಬಗಳಿಗೆ ಪೌಷ್ಠಿಕ ಆಹಾರ ಸಾಮಾಗ್ರಿಗಳನ್ನು ವಿತರಿಸಲಾಗುತ್ತಿತ್ತು. ಅದನ್ನು ಗುಡ್ಡಗಾಡು ಪ್ರದೇಶಗಳಲ್ಲಿ ವಾಸಿಸುತ್ತಿರುವ ಪರಿಶಿಷ್ಟ ಪಂಗಡದ ಕುಡಿಯ ಜನಾಂಗದವರಿಗೂ ವಿಸ್ತರಿಸುವಂತೆ 2012ರಿಂದಲೂ ಮನವಿ ನೀಡಿ ಹೋರಾಟಗಳನ್ನು ನಡೆಸಲಾಗಿತ್ತು. ಆದರೆ ಈ ಸಂಬಂಧ ಸರಕಾರದಿಂದ ಯಾವುದೇ ಆದೇಶ ಹೊರಬಿದ್ದಿರಲಿಲ್ಲ. ಆದರೆ ಜಿಲ್ಲೆಯಲ್ಲಿ ಪ್ರಕೃತಿ ವಿಕೋಪದಿಂದ ಉಂಟಾದ ಹಾನಿಯಲ್ಲಿ ಕುಡಿಯ ಜನಾಂಗದವರಿಗೂ ತೀವ್ರ ಹಾನಿಯಾಗಿರುವುದನ್ನು ಹಾಗೂ ಮಳೆಗಾಲದಲ್ಲಿ ಕೂಲಿ ಕೆಲಸ ದೊರೆಯದೆ ಜೀವನ ನಿರ್ವಹಣೆ ಕಷ್ಟ ಸಾಧ್ಯವಾಗಿರುವುದರಿಂದ ತಮಗೂ ಪೌಷ್ಠಿಕ ಆಹಾರಗಳನ್ನು ಒದಗಿಸಬೇಕೆಂದು ಜಿಲ್ಲೆಗೆ ಭೇಟಿ ನೀಡಿದ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ನಿರ್ದೇಶಕರಿಗೆ ಮನವಿ ಸಲ್ಲಿಸಿದ ಮೇರೆ ಇದೀಗ ಕುಡಿಯ ಜನಾಂಗದ 400 ಕುಟುಂಬಗಳಿಗೆ ಪೌಷ್ಠಿಕ ಆಹಾರ ವಿತರಿಸುವಂತೆ ಸರಕಾರ ಆದೇಶಿಸಿದೆ ಎಂದು ಅವರು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು, ಆ.23ರಂದು ಸಂಘದ ವತಿಯಿಂದ ಸಲ್ಲಿಸಿದ ಮನವಿಗೆ ಸ್ಪಂದಿಸಿದ ನಿರ್ದೇಶಕರು ಸರಕಾರದ ಗಮನಸೆಳೆಯುವುದರೊಂದಿಗೆ ಈ ಆದೇಶವನ್ನು ಹೊರಡಿಸುವಲ್ಲಿ ಯಶಸ್ವಿಯಾಗಿದ್ದು, ಕುಡಿಯ ಜನಾಂಗಕ್ಕೂ ಪೌಷ್ಠಿಕ ಆಹಾರ ಸಾಮಾಗ್ರಿ ದೊರಕಿಸಲು ಕಾರಣರಾದ ಮುಖ್ಯಮಂತ್ರಿಗಳು, ಸಮಾಜಕಲ್ಯಾಣ ಸಚಿವರು, ಕೊಡಗು ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲೆಯ ಶಾಸಕರುಗಳಾದ ಕೆ.ಜಿ.ಬೋಪಯ್ಯ, ಅಪ್ಪಚ್ಚುರಂಜನ್, ಸುನಿಲ್ ಸುಬ್ರಮಣಿ, ವೀಣಾ ಅಚ್ಚಯ್ಯ, ಸಮಾಜ ಕಲ್ಯಾಣ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳು, ಜಿಲ್ಲಾಧಿಕಾರಿಗಳು, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ನಿರ್ದೇಶಕರಿಗೆ, ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಹಾಗೂ ಐಟಿಡಿಪಿ ಅಧಿಕಾರಿಗಳಿಗೆ ಕುಡಿಯ ಜನಾಂಗದ ಪರವಾಗಿ ಹಾಗೂ ಸಂಘಟನೆಯ ಪರವಾಗಿ ಕೃತಜ್ಞತೆ ಸಲ್ಲಿಸುವುದಾಗಿ ಮುತ್ತಪ್ಪ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಭಾಗಮಂಡಲ ಲ್ಯಾಂಪ್ಸ್ ಅಧ್ಯಕ್ಷ ಕೆ.ಕುಮಾರ, ಸಂಘಟನೆಯ ಪ್ರಮುಖರಾದ ಮಿಲನ್, ಬೋಪಯ್ಯ, ರತ್ನಾಕರ ಹಾಗೂ ನಾಣಯ್ಯ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X