Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸಚಿವ ಝಮೀರ್ ನಮ್ಮ ಸಂತತಿಯವನಲ್ಲ, ಜಿನ್ನಾ...

ಸಚಿವ ಝಮೀರ್ ನಮ್ಮ ಸಂತತಿಯವನಲ್ಲ, ಜಿನ್ನಾ ಸಂತತಿಯವನಿರಬೇಕು ಎಂದ ಮಾಜಿ ಸಚಿವ ಎಸ್.ಶಿವಣ್ಣ

ವಾರ್ತಾಭಾರತಿವಾರ್ತಾಭಾರತಿ1 Sept 2018 10:14 PM IST
share
ಸಚಿವ ಝಮೀರ್ ನಮ್ಮ ಸಂತತಿಯವನಲ್ಲ, ಜಿನ್ನಾ ಸಂತತಿಯವನಿರಬೇಕು ಎಂದ ಮಾಜಿ ಸಚಿವ ಎಸ್.ಶಿವಣ್ಣ

ತುಮಕೂರು, ಸೆ.01: ಬಿಜೆಪಿಗೆ ಮತ ನೀಡುವವರು ನಿಜವಾದ ಮುಸ್ಲಿಮರಲ್ಲ ಎಂಬ ವಿವಾದಾತ್ಮಕ ಹೇಳಿಕೆ ನೀಡಿರುವ ಆಹಾರ ಮತ್ತು ನಾಗರಿಕ ಪೂರೈಕೆ ಖಾತೆ ಸಚಿವ ಝಮೀರ್ ಅಹಮದ್ ರನ್ನು ಸಚಿವ ಸಂಪುಟದಿಂದ ಕೈಬಿಟ್ಟು, ಕೂಡಲೇ ಬಂಧಿಸಿ ಕಾನೂನು ಕ್ರಮ ಜರುಗಿಸಬೇಕೆಂದು ಮಾಜಿ ಸಚಿವ ಎಸ್.ಶಿವಣ್ಣ ಒತ್ತಾಯಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಮುಸ್ಲಿಮರು ಬಿಜೆಪಿಗೆ ಮತ ನೀಡಿದರೆ ಅವರು ನಿಜವಾದ ಮುಸ್ಲಿಮರೇ ಅಲ್ಲ ಎಂಬ ಹೇಳಿಕೆ ನೀಡಿದ್ದು ಖಂಡನೀಯ. ಸ್ವಾತಂತ್ರ್ಯ ನಂತರದಿಂದಲೂ ಭಾರತದಲ್ಲಿ ಹಿಂದೂ ಮುಸಲ್ಮಾನರು ಅಣ್ಣ ತಮ್ಮಂದಿರಂತೆ ಬದುಕುತ್ತಿದ್ದು, ಝಮೀರ್ ರಂತಹ ಕೆಲವರು ಈ ರೀತಿಯ ಹೇಳಿಕೆಗಳನ್ನು ನೀಡುವ ಮೂಲಕ ಭಾರತೀಯ ಸಂಸ್ಕೃತಿಗೆ ವಿರುದ್ಧವಾಗಿ ಹೇಳಿಕೆ ನೀಡುತ್ತಿದ್ದು, ಕೂಡಲೇ ಅವರನ್ನು ಸಚಿವ ಸಂಪುಟದಿಂದ ಕೈಬಿಡಬೇಕೆಂದು ಒತ್ತಾಯಿಸಿದರು.

ನಮ್ಮ ದೇಶದಲ್ಲಿ ಕರ್ನಾಟಕ ಸಂಸ್ಕೃತಿ, ಸಂಸ್ಕಾರಕ್ಕೆ ಹೆಸರುವಾಸಿಯಾಗಿದ್ದು, ಸಹೋದರರಂತಿರುವ ಹಿಂದೂ ಮುಸ್ಲಿಂ ಬಾಂಧವರ ನಡುವೆ ಕಿಚ್ಚು ಹಚ್ಚಲು ಹೊರಟಿದ್ದಾರೆ. ಝಮೀರ್ ಅಹಮದ್ ನಮ್ಮ ಸಂತತಿಯವನಲ್ಲ, ಜಿನ್ನಾ ಸಂತತಿಯವನಿರಬೇಕು. ಆದ್ದರಿಂದಲೇ ಇಂತಹ ಹೇಳಿಕೆ ನೀಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ ಮಾಜಿ ಸಚಿವರು, ನಮ್ಮಲ್ಲಿರುವ ಡೋಂಗಿ ರಾಜಕಾರಣಿಗಳು,ಕಿಡಿಗೇಡಿಗಳು, ಮೀರ್ ಸಾದಿಕ್‍ಗಳಿಂದ ದೇಶ ಒಡೆಯುವ ರೀತಿ ಹೇಳಿಕೆಗಳು ನೀಡುತ್ತಿರುವುದು ದುರದೃಷ್ಠಕರ. ಇಂತಹವರ ಮೇಲೆ ತಕ್ಷಣ ಕಾನೂನು ರೀತಿ ಕ್ರಮ ಕೈಗೊಂಡು ಕೂಡಲೇ ಬಂಧಿಸಬೇಕೆಂದು ಆಗ್ರಹಿಸಿದರು.

ಎಲ್ಲರನ್ನೂ ಸಮಾನವಾಗಿ ಕಾಣುವ ನಮ್ಮ ದೇಶವನ್ನು ಒಡೆಯುವ ಹುನ್ನಾರದಲ್ಲಿ ಮುಸ್ಲಿಂ ಬಾಂಧವರನ್ನು ಪ್ರೇರೇಪಿಸುವಂತಹ ಹೇಳಿಕೆ ನೀಡುತ್ತಿರುವ ಝಮೀರ್ ಅಹಮದ್ ವಿರುದ್ಧ ಸದನದಲ್ಲಿ ಪ್ರಸ್ತಾಪಿಸುವಂತೆ ಶಾಸಕ ಬಸವರಾಜ್ ಪಾಟೀಲ್ ಯತ್ನಾಳ್ ಅವರಿಗೆ ಮನವಿ ಮಾಡುವುದಾಗಿ ತಿಳಿಸಿದರು.

ಹಿಂದೂ ಸಂಸ್ಕೃತಿ ಉಳಿದಿರುವುದು ಕೇವಲ ಭಾರತದಲ್ಲಿ ಮಾತ್ರ. ಒಂದು ವೇಳೆ ಅದು ನಶಿಸಿದರೆ ಭಾರತೀಯ ಹಿಂದೂಗಳಿಗೆ ಉಳಿದಿರುವುದು ಬಂಗಾಳಕೊಲ್ಲಿ, ಅರಬ್ಬೀ ಸಮುದ್ರ, ಹಿಂದೂ ಮಹಾಸಾಗರ ಮಾತ್ರ. ಆದ್ದರಿಂದ ಹಿಂದೂ ಸಂಸ್ಕೃತಿಗೆ ವಿರುದ್ಧವಾಗಿ ಮಾತನಾಡುವ ಯಾರೇ ಆಗಲಿ ಅವರ ವಿರುದ್ಧ ಶಿಸ್ತು ಕ್ರಮ ಜರುಗಿಸಬೇಕು ಎಂದು ಎಸ್.ಶಿವಣ್ಣ ಆಗ್ರಹಿಸಿದರು.

ಗೆದ್ದವರು ಮೂಲಭೂತ ಸೌಲಭ್ಯ ಕಲ್ಪಿಸಿ: ಮಹಾನಗರ ಪಾಲಿಕೆಗೆ ನಿನ್ನೆ ನಡೆದ ಚುನಾವಣೆಯಲ್ಲಿ ಕೇವಲ ಶೇ.59 ರಷ್ಟು ಮತದಾನವಾಗಿರುವುದಕ್ಕೆ ಬೇಸರ ವ್ಯಕ್ತಪಡಿಸಿದ ಶಿವಣ್ಣ ಅವರು, ಚುನಾವಣೆಯಲ್ಲಿ ಅಭ್ಯರ್ಥಿಗಳು ಯಾರೇ ಗೆಲ್ಲಲಿ, ಗೆದ್ದವರು ನಗರದ ನಾಗರಿಕರ ಮೂಲ ಸೌಲಭ್ಯಗಳಾದ ಕುಡಿಯುವ ನೀರು, ರಸ್ತೆ, ಚರಂಡಿ, ಒಳಚರಂಡಿ, ವಸತಿ ಸೌಲಭ್ಯ ಮತ್ತಿತರೆ ಸೌಲಭ್ಯ ಕಲ್ಪಿಸುವತ್ತ ಗಮನ ಹರಿಸಿ ಎಂದು ಸಲಹೆ ನೀಡಿದರು.

ಸುದ್ದಿಗೋಷ್ಠಿಯಲ್ಲಿ ಮುಖಂಡರಾದ ಎಂ.ಬಿ.ನಂದೀಶ್, ಕೆ.ಪಿ.ಮಹೇಶ್, ಶಾಂತರಾಜು, ಬನಶಂಕರಿ ಬಾಬು, ಜಿ.ಕೆ.ಬಸವರಾಜು, ಕೆ.ಹರೀಶ್, ದಯಾನಂದ್, ಎಂ.ಎಚ್. ಚಂದ್ರಪ್ಪ, ಎನ್.ಗಣೇಶ್, ಕನ್ನಡ ಪ್ರಕಾಶ್ ಮೊದಲಾದವರು ಹಾಜರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X