Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬಾಲಕಿಗೆ ಲೈಂಗಿಕ ದೌರ್ಜನ್ಯ ಪ್ರಕರಣ:...

ಬಾಲಕಿಗೆ ಲೈಂಗಿಕ ದೌರ್ಜನ್ಯ ಪ್ರಕರಣ: ಅಪರಾಧಿಗೆ 4 ವರ್ಷ ಜೈಲು ಶಿಕ್ಷೆ

ವಾರ್ತಾಭಾರತಿವಾರ್ತಾಭಾರತಿ1 Sept 2018 10:17 PM IST
share

ಮಂಗಳೂರು, ಸೆ.1: ಅಪ್ರಾಪ್ತ ಬಾಲಕಿಯೊಬ್ಬಳನ್ನು ಪುಸಲಾಯಿಸಿ ಲೈಂಗಿಕ ದೌರ್ಜನ್ಯ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗೆ 4 ವರ್ಷ ಸಜೆ ಹಾಗೂ 25 ಸಾವಿರ ರೂ. ದಂಡ ವಿಧಿಸಿ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹಾಗೂ ವಿಶೇಷ ನ್ಯಾಯಾಲಯ ತೀರ್ಪು ನೀಡಿದೆ.

ಕಟೀಲು ಮಿತ್ತಬೈಲು ನಿವಾಸಿ ಯತೀಶ್ ಕರ್ಕೇರಾ (22) ಶಿಕ್ಷೆಗೊಳಗಾದ ಅಪರಾಧಿ. 

ಪ್ರಕರಣ ವಿವರ: 2013ರ ಡಿ.14ರಂದು ಆರೋಪಿ 14 ವರ್ಷದ  ಬಾಲಕಿಯನ್ನು ಫೋನ್ ಮುಖಾಂತರ ಸಂಪರ್ಕಿಸಿ, ಹೊಸಬಟ್ಟೆ, ಮೊಬೈಲ್ ಫೋನ್ ನೀಡುತ್ತೇನೆಂದು ಆಮಿಷವೊಡ್ಡಿದ್ದಲ್ಲದೆ ಪುಸಲಾಯಿಸಿ ಬಾಲಕಿಯ ಮನೆಯಿಂದ ಸುರತ್ಕಲ್‌ಗೆ ಕಾರಿನಲ್ಲಿ ಕರೆದುಕೊಂಡು ಹೋಗಿ ಬಳಿಕ ತಣ್ಣೀರುಬಾವಿ ಬೀಚಿನಲ್ಲಿ ಸುತ್ತಾಡಿಸಿದ್ದಾನೆ.

ಬಳಿಕ ಕೃಷ್ಣಾಪುರದಲ್ಲಿರುವ ತನ್ನ ಸಂಬಂಧಿಕರ ಮನೆಗೆ ಹೋಗುವಾ ಎಂದು ಸುಳ್ಳು ಹೇಳಿ, ತನ್ನ ಸ್ವಂತ ಮನೆ ಕಟೀಲು ಮತೋಟ್ಟು ಹೌಸ್‌ಗೆ ಕರೆದುಕೊಂಡು ಹೋಗಿದ್ದಾನೆ. ಅಲ್ಲಿ ಬಾಲಕಿಯನ್ನು ರೂಮ್‌ನಲ್ಲಿ ಕೂಡಿ ಹಾಕಿ, ಆಕೆಯ ಇಚ್ಛೆಯ ವಿರುದ್ಧವಾಗಿ ಬಲಾತ್ಕಾರವಾಗಿ ಲೈಂಗಿಕ ದೌರ್ಜನ್ಯ ನಡೆಸಿದ್ದಲ್ಲದೆ, ಈ ವಿಚಾರವನ್ನು ಯಾರಿಗಾದರೂ ತಿಳಿಸಿದ್ದಲ್ಲಿ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ.

ಈ ವಿಚಾರದಲ್ಲಿ ಬಾಲಕಿ ಉಳ್ಳಾಲ ಠಾಣೆಗೆ ದೂರು ನೀಡಿದ್ದು, ಪೊಲೀಸರು ದೂರು ದಾಖಲಿಸಿಕೊಂಡು ತನಿಖೆ ನಡೆಸಿ ಆರೋಪಿಯ ವಿರುದ್ಧ ದೋಷಾರೋಪಣಾ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು.

ಪ್ರಕರಣವನ್ನು ವಿಚಾರಣೆಗೆತ್ತಿಕೊಂಡ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರನ್ಯಾಯಾಲಯ ಹಾಗೂ ವಿಶೇಷ ನ್ಯಾಯಾಲಯ ನ್ಯಾಯಾಧೀಶೆ ಬಿ.ಆರ್. ಪಲ್ಲವಿ ವಾದ-ವಿವಾದಗಳನ್ನು ಆಲಿಸಿ ಆರೋಪಿ ತಪ್ಪಿತಸ್ಥನೆಂದು ತೀರ್ಮಾನಿಸಿ ಪೋಕ್ಸೋ ಕಾಯ್ದೆಯಡಿಯಲ್ಲಿ 4 ವರ್ಷಗಳ ಶಿಕ್ಷೆ, 20 ಸಾವಿರ ರೂ. ದಂಡ, ಐಪಿಸಿ 366 (ಅಪಹರಣ) ಕಾಯ್ದೆಯಡಿ 3 ತಿಂಗಳ ಸಜೆ, 5ಸಾವಿರ ರೂ. ದಂಡ, ಐಪಿಸಿ 506 (ಬೆದರಿಕೆ) ಪ್ರಕರಣದಡಿ 1 ವರ್ಷ ಸಜೆ ಹಾಗೂ ಐಪಿಸಿ 342 (ಅಕ್ರಮ ಬಂಧನ) ಪ್ರಕರಣದಡಿ 6 ತಿಂಗಳ ಸಜೆಯನ್ನು ನೀಡಿದೆ.

ಆರೋಪಿ ಶಿಕ್ಷೆಯನ್ನು ಏಕಕಾಲದಲ್ಲಿ ಅನುಭವಿಸಬೇಕಾಗಿದೆ. ದಂಡ ವಿಧಿಸಿದ 25 ಸಾವಿರ ರೂ. ದಲ್ಲಿ 15 ಸಾವಿರ ರೂ.ನ್ನು ನೊಂದ ಬಾಲಕಿಗೆ ನೀಡಬೇಕು ಹಾಗೂ ಬಾಲಕಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದಿಂದಲೂ ಪರಿಹಾರ ಪಡೆಯಲು ಅರ್ಹಳೆಂದು ಆದೇಶ ನೀಡಿದೆ. 

ಸರಕಾರದ ಪರವಾಗಿ ವಿಶೇಷ ಸರಕಾರಿ ಅಭಿಯೋಜಕ ಸಿ.ವೆಂಕಟರಮಣ ಸ್ವಾಮಿ ವಾದಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X