ರೈಲು ಹಳಿಗೆ ತಲೆ ಇಟ್ಟು ಯುವತಿ ಆತ್ಮಹತ್ಯೆ
ಬೆಂಗಳೂರು, ಸೆ.2: ಯುವತಿಯೊಬ್ಬಳು ರೈಲಿನ ಹಳಿಗೆ ತಲೆ ಇಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ಇಲ್ಲಿನ ಸಿಟಿ ರೈಲ್ವೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ನಗರದ ಬಿಡದಿ ನಿವಾಸಿ ಅಕ್ಷತಾ (23) ಆತ್ಮಹತ್ಯೆ ಮಾಡಿಕೊಂಡ ಗೃಹಣಿ ಎಂದು ಪೊಲೀಸರು ತಿಳಿಸಿದ್ದಾರೆ.
ಹುಬ್ಬಳ್ಳಿ ಮೂಲದ ಅಕ್ಷತಾ, ಶನಿವಾರ ಸಂಜೆ ಬಿಡದಿ-ಹೆಜ್ಜಾಲ ರೈಲು ಮಾರ್ಗದ ಮಧ್ಯೆ ರೈಲಿನ ಹಳಿಗೆ ತಲೆ ಇಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಸ್ಥಳಕ್ಕೆ ಸಿಟಿ ರೈಲ್ವೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.
Next Story