Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಐವರು ಅಂತರಾಜ್ಯ ಕಳ್ಳರ ಬಂಧನ: ಲಕ್ಷಾಂತರ...

ಐವರು ಅಂತರಾಜ್ಯ ಕಳ್ಳರ ಬಂಧನ: ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ವಶ

ವಾರ್ತಾಭಾರತಿವಾರ್ತಾಭಾರತಿ2 Sept 2018 11:38 PM IST
share
ಐವರು ಅಂತರಾಜ್ಯ ಕಳ್ಳರ ಬಂಧನ: ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ವಶ

ದಾವಣಗೆರೆ,ಸೆ.2: ವಿವಿಧ ಜಿಲ್ಲೆಗಳಲ್ಲಿ ದರೋಡೆ ಮತ್ತು ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಬಿಹಾರ ಮೂಲದ ಐವರು ಅಂತರ್ ರಾಜ್ಯ ದರೋಡೆಕೋರರನ್ನು ಬಂಧಿಸಲಾಗಿದೆ ಎಂದು ಎಸ್ಪಿ ಆರ್.ಚೇತನ್ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆ.25 ರಂದು ಮಧ್ಯರಾತ್ರಿ ಹೊನ್ನಾಳಿ ತಾಲೂಕಿನ ಕಮ್ಮಾರಗಟ್ಟೆ ಗ್ರಾಮದ ಹೊರವಲಯದಲ್ಲಿರುವ ಗಂಗಾಧರಪ್ಪ ಎಂಬವರ ಮನೆಯಲ್ಲಿ ದರೋಡೆ ನಡೆಸಿ ಪರಾರಿಯಾಗುವ ವೇಳೆ ಮನೆಯ ಕೆಲಸಗಾರರಿಬ್ಬರು ಡಕಾಯಿತರ ಪೈಕಿ ಓರ್ವನನ್ನು ಹಿಡಿದುಕೊಂಡಿದ್ದು, ಉಳಿದ ನಾಲ್ವರು ಪರಾರಿಯಾಗಿದ್ದರು. ಹೀಗೆ ಸಿಕ್ಕಿಬಿದ್ದಿದ್ದ ಆರೋಪಿ ಸುನೀತ್ ಕುಮಾರನನ್ನು ಹೆಚ್ಚಿನ ವಿಚಾರಣೆಗೆ ಒಳಪಡಿಸಿದಾಗ ಕೃತ್ಯದಲ್ಲಿ ಭಾಗಿಯಾಗಿದ್ದವರ ವಿವರಗಳನ್ನು ನೀಡಿದ್ದನು ಎಂದು ಮಾಹಿತಿ ನೀಡಿದರು.

ಈ ಹಿನ್ನೆಲೆಯಲ್ಲಿ ಪಿಎಸ್‍ಐಗಳಾದ ಕಾಡದೇವರ, ಸಿದ್ದೇಗೌಡ, ಹನುಮಂತಪ್ಪ ಶಿರೇಹಳ್ಳಿ, ಸಿಪಿಐ ಜೆ.ರಮೇಶ್, ಲಕ್ಷ್ಮಣನಾಯಕ ಅವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ತಲೆಮರೆಸಿಕೊಂಡಿದ್ದ ನಿರಂಜನ್ ಕುಮಾರ್, ಮುಖೇಶ್ ಕುಮಾರ್, ರಾಕೇಶ್ ಮತ್ತು ಸಂತೋಷ್‍ ಕುಮಾರ್ ಅವರುಗಳನ್ನು ಬಂಧಿಸಿ 30 ಲಕ್ಷ ರೂ ಮೌಲ್ಯದ 1.06 ಕೆಜಿ ಬಂಗಾರ, ಒಂದು ಲಕ್ಷ ರೂ ಬೆಲೆಯ ಎರಡು ಪಲ್ಸರ್ ಬೈಕ್‍ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಹೇಳಿದರು.

ಆರೋಪಿಗಳು ಹೊನ್ನಾಳಿ, ನ್ಯಾಮತಿ, ಹರಿಹರ, ಹರಪನಹಳ್ಳಿ, ಅರಸೀಕೆರೆ, ಜಗಳೂರು ದಾವಣಗೆರೆ ನಗರ, ಚಿತ್ರದುರ್ಗ, ತುಮಕೂರು ಜಿಲ್ಲೆಯ ಕ್ಯಾತಸಂದ್ರ, ಚೇಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಚಿನ್ನ ಪಾಲೀಶ್ ಮಾಡಿಕೊಡುವ ನೆಪದಲ್ಲಿ ಒಂಟಿ ಹೆಣ್ಣು ಮಕ್ಕಳಿರುವ ಮನೆಗೆ ನುಗ್ಗಿ ಅವರ ಮೇಲೆ ಹಲ್ಲೆ ನಡೆಸಿ ಆಭರಣಗಳನ್ನು ಕಿತ್ತುಕೊಂಡು ಪರಾರಿಯಾಗುತ್ತಿದ್ದರು. ಹೀಗೆ ಹೊನ್ನಾಳಿ ಠಾಣಾ ವ್ಯಾಪ್ತಿಯಲ್ಲಿ 5, ನ್ಯಾಮತಿ, ಅರಸೀಕೆರೆ, ಜಗಳೂರು, ಬಿಳಿಚೋಡು, ಸೇರಿದಂತೆ ಹತ್ತಕ್ಕೂ ಹೆಚ್ಚು ಠಾಣಾ ವ್ಯಾಪ್ತಿಯಲ್ಲಿ ತಲಾ 1, ಹರಿಹರ, ಹರಪನಹಳ್ಳಿ ನಗರ ಠಾಣಾ ವ್ಯಾಪ್ತಿಯಲ್ಲಿ 2 ಮತ್ತು ಗ್ರಾಮಾಂತರ ವ್ಯಾಪ್ತಿಯಲ್ಲಿ 3 ಸೇರಿದಂತೆ ಜಿಲ್ಲೆಯಲ್ಲಿ ಒಟ್ಟು 24 ಕಳವು ಪ್ರಕರಣಗಳಲ್ಲಿ ಭಾಗಿಯಾಗಿದ್ದರು ಎಂದು ಮಾಹಿತಿ ನೀಡಿದರು.

ದೇಶದ ವಿವಿಧ ರಾಜ್ಯಗಳು ಮತ್ತು ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಈ ತಂಡ ಸಾಕಷ್ಟು ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿರುವ ಶಂಕೆ ಇದ್ದು, ವಿಚಾರಣೆ ಮುಂದುವರಿದಿದೆ. ಹೆಚ್ಚುವರಿ ಎಸ್ಪಿ ಉದೇಶ್ ಮಾರ್ಗದರ್ಶನದಲ್ಲಿ ನಡೆದ ಈ ಕಾರ್ಯಾಚರಣೆಯಲ್ಲಿ ಗ್ರಾಮಾಂತರ ಉಪವಿಭಾಗದ ಅಧೀಕ್ಷಕ ಎಂ.ಕೆ.ಗಂಗಲ್, ಜೆ.ರಮೇಶ್, ನ್ಯಾಮತಿ ಠಾಣಾ ಸಿಬ್ಬಂದಿಗಳಾದ ರಾಘವೇಂದ್ರ ಮಜಿದ್, ರಮೇಶ್ ನಾಯ್ಕ, ಶಾಂತರಾಜ್, ಮಹಮದ್ ಇಲಿಯಾಸ್, ರಾಮಂಚಂದ್ರ ಜಾದವ್, ಪೈರೋಜ್, ವೆಂಕಟರಮಣ ಮತ್ತು ಇತರರ ಭಾಗಿಯಾಗಿದ್ದು ಈ ಎಲ್ಲ ಸಿಬ್ಬಂದಿಗಳಿಗೆ ಇಲಾಖೆಯಿಂದ 10 ಸಾವಿರ ರೂ ನಗದು ಬಹುಮಾನ ಘೋಷಿಸಲಾಗಿದೆ ಎಂದರು. 

ಎಎಸ್ಪಿ ಉದೇಶ್, ಡಿವೈಎಸ್‍ಪಿ ಎಂ.ಕೆ.ಗಂಗಲ್ ಇತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X